ಉತ್ತರ ಕರ್ನಾಟದ ಎಲ್ಲಾ ನಗರಗಳಲ್ಲಿ ನಗರ ಸಾರಿಗೆ ಬಸ್
ಬೆಂಗಳೂರು, ಮಾ.24 : ಉತ್ತರ ಕರ್ನಾಟಕ ಭಾಗದ ಎಲ್ಲಾ ನಗರಗಳಲ್ಲಿ ಮುಂದಿನ ಮೂರು ತಿಂಗಳಿನಲ್ಲಿ ನಗರ ಸಾರಿಗೆ ಬಸ್ ಸಂಚಾರವನ್ನು ಆರಂಭಿಸಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಹಳೆಯ ಬಸ್ಸುಗಳ ಓಡಾಟವನ್ನು ಸ್ಥಗಿತಗೊಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಸೋಮವಾರದ ಕಲಾಪದಲ್ಲಿ ಬಿಜೆಪಿಯ ಮಹಾಂತೇಶ ಕವಟಗಿಮಠ ಅವರ ಪ್ರಶ್ನೆಗೆ ಉತ್ತರ ನೀಡಿದ ಸಾರಿಗೆ ಸಚಿವರು, ಬಸ್ಸುಗಳನ್ನು ಒದಗಿಸುವ ವಿಚಾರದಲ್ಲಿ ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಎಂಬ ತಾರತಮ್ಯ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು. [16 ಪ್ರಮುಖ ನಗರಗಳಲ್ಲಿ ನಗರ ಸಾರಿಗೆ]

ಅಗತ್ಯವಾದ ಬಸ್ಸುಗಳನ್ನು ಖರೀದಿ ಮಾಡಲು ಆಯಾ ಸಾರಿಗೆ ನಿಗಮಗಳಿಗೆ ಅವಕಾಶ ಕಲ್ಪಿಸಲಾಗಿದೆ. ನರ್ಮ್ ಯೋಜನೆಯಡಿ ಮೂರು ತಿಂಗಳಿನಲ್ಲಿ ಉತ್ತರ ಕರ್ನಾಟಕ ಭಾಗದ ಎಲ್ಲಾ ನಗರಗಳಲ್ಲಿ ನಗರ ಸಾರಿಗೆ ಸೌಲಭ್ಯ ಆರಂಭಿಸಲಾಗುತ್ತದೆ ಎಂದರು. [487 ಟಾಟಾ ಬಸ್ ಖರೀದಿ ಮಾಡಲಿದೆ ಸಾರಿಗೆ ಇಲಾಖೆ]
ಹಳೆ ಬಸ್ ಸಂಚಾರ ಸ್ಥಗಿತ : ನಗರ ಸಾರಿಗೆ ಆರಂಭಿಸುವ ಜೊತೆಗೆ ಉತ್ತರ ಕರ್ನಾಟಕ ಭಾಗದಲ್ಲಿ 9 ಲಕ್ಷ ಕಿ.ಮೀ.ಗಿಂತ ಹೆಚ್ಚು ಓಡಿರುವ ಹಳೆಯ ಬಸ್ಸುಗಳ ಸಂಚಾರವನ್ನು ಸ್ಥಗಿತಗೊಳಿಸಿ ಹೊಸ ಬಸ್‌ಗಳನ್ನು ಖರೀದಿ ಮಾಡಲಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದರು.
ಅನುದಾನ ನೀಡಿಲ್ಲ : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಹೊಸ ಬಸ್ಸುಗಳನ್ನು ಖರೀದಿ ಮಾಡಲು ಸರ್ಕಾರ ಅನುದಾನ ನೀಡಿಲ್ಲ ಎಂದು ಹೇಳಿದ ರಾಮಲಿಂಗಾ ರೆಡ್ಡಿ ಅವರು, ಸಾಲ ಮಾಡಿ ಬಸ್ಸುಗಳನ್ನು ಖರೀದಿ ಮಾಡಲಾಗಿದ್ದು, ಇದರಿಂದ ಸಂಸ್ಥೆಯ ಮೇಲೆ 611 ಕೋಟಿ ರೂ. ಸಾಲವಿದೆ ಎಂದರು.












Click it and Unblock the Notifications