ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸ್ಥಳೀಯ ಸಂಸ್ಥೆ ಚುನಾವಣೆ: ಮತಗಟ್ಟೆಯಲ್ಲಿಯೇ ಅಭ್ಯರ್ಥಿಗಳ ಪ್ರಚಾರ

|
Google Oneindia Kannada News

ಬೆಂಗಳೂರು, ಆಗಸ್ಟ್ 31: ರಾಜ್ಯದ 105 ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯುತ್ತಿದ್ದು, ಶುಕ್ರವಾರ ಬೆಳಗ್ಗಿನಿಂದ ಮತದಾನ ಪ್ರಕ್ರಿಯೆ ಆರಂಭವಾಗಿದೆ.

29 ನಗರಸಭೆ, 53 ಪುರಸಭೆ ಮತ್ತು 23 ಪಟ್ಟಣ ಪಂಚಾಯಿತಿಗಳಿಗೆ ಚುನಾವಣೆಗಳಿಗೆ ಚುನಾವಣೆ ನಡೆಯುತ್ತಿದೆ. ಜತೆಗೆ ಮೈಸೂರು, ಶಿವಮೊಗ್ಗ ಮತ್ತು ತುಮಕೂರು ಮಹಾನಗರ ಪಾಲಿಕೆಗಳಿಗೂ ಚುನಾವಣೆ ನಡೆಯುತ್ತಿದೆ.

ಸ್ಥಳೀಯ ಸಂಸ್ಥೆಗಳ ಚುನಾವಣೆ : ಮೈತ್ರಿ ಸರ್ಕಾರಕ್ಕೆ ಮೊದಲ ಪರೀಕ್ಷೆಸ್ಥಳೀಯ ಸಂಸ್ಥೆಗಳ ಚುನಾವಣೆ : ಮೈತ್ರಿ ಸರ್ಕಾರಕ್ಕೆ ಮೊದಲ ಪರೀಕ್ಷೆ

ವಿಜಯಪುರದ ಮುದ್ದೇಬಿಹಾಳ ನಗರಸಭೆ ಮತಗಟ್ಟೆ ಸೇರಿದಂತೆ ವಿವಿಧೆಡೆ ಅಭ್ಯರ್ಥಿಗಳು ಮತಗಟ್ಟೆಯಲ್ಲಿ ಪ್ರಚಾರ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದರಿಂದ ಅನೇಕ ಕಡೆ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು.

civic poll for 105 local bodies voting began

ಮುದ್ದೇಬಿಹಾಳದ ಮತಗಟ್ಟೆ 12ರಲ್ಲಿ ಅಭ್ಯರ್ಥಿಯೊಬ್ಬರು ಪ್ರಚಾರ ಮಾಡುತ್ತಿದ್ದಾರೆ ಎಂದು ಪಕ್ಷೇತರ ಅಭ್ಯರ್ಥಿಯೊಬ್ಬರು ಆರೋಪಿಸಿದರು. ಬಳಿಕ ಪೊಲೀಸರು ಅಭ್ಯರ್ಥಿ ಮತ್ತು ಅವರ ಬೆಂಬಲಿಗರನ್ನು ಹೊರಕ್ಕೆ ಕಳುಹಿಸಿದರು.

ಕೊಪ್ಪಳ ನಗರಸಭೆಯ ಮೂರನೇ ವಾರ್ಡ್‌ನಲ್ಲಿ ಅಭ್ಯರ್ಥಿಯ ಭಾವಚಿತ್ರ ತೋರಿಸಿ ಮತಹಾಕುವಂತೆ ಪ್ರಚೋದಿಸಿದ ಘಟನೆ ವರದಿಯಾಗಿದೆ.

ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಗೆ ಪ್ರತಿಷ್ಠೆಯಾದ ಶಿವಮೊಗ್ಗ ಪಾಲಿಕೆ ಎಲೆಕ್ಷನ್ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಗೆ ಪ್ರತಿಷ್ಠೆಯಾದ ಶಿವಮೊಗ್ಗ ಪಾಲಿಕೆ ಎಲೆಕ್ಷನ್

ಕೆಲವೆಡೆ ಗೊಂದಲದ ವಾತಾವರಣ ಹೊರತುಪಡಿಸಿ ಮತದಾನ ಶಾಂತಿಯುತವಾಗಿ ನಡೆಯುತ್ತಿದೆ.

ಸ್ಥಳೀಯ ಸಂಸ್ಥೆಗಳಿಗೆ ಆಗಸ್ಟ್ 29ರಂದು ಚುನಾವಣೆ ನಿಗದಿಪಡಿಸಲಾಗಿತ್ತು. ಆದರೆ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ನಿಧನದ ಹಿನ್ನೆಲೆಯಲ್ಲಿ ಒಂದು ದಿನ ಸಾರ್ವತ್ರಿಕ ರಜೆ ಘೋಷಣೆಯಾಗಿದ್ದರಿಂದ ಚುನಾವಣಾ ದಿನಾಂಕವನ್ನು ಮುಂದೂಡಲಾಗಿತ್ತು.

ಸ್ಥಳೀಯ ಸಂಸ್ಥೆಗಳ ಚುನಾವಣೆ ಅಂಕಿ ಸಂಖ್ಯೆಗಳ ಲೆಕ್ಕಸ್ಥಳೀಯ ಸಂಸ್ಥೆಗಳ ಚುನಾವಣೆ ಅಂಕಿ ಸಂಖ್ಯೆಗಳ ಲೆಕ್ಕ

ನಗರಸಭೆಗೆ 2067, ಪುರಸಭೆ 1422, ಪಟ್ಟಣ ಪಂಚಾಯತಿಯ 407 ಸೇರಿದಂತೆ 3897 ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದೆ. ಸುಮಾರು 36 ಲಕ್ಷ ಮತದಾರರು ಮತಚಲಾಯಿಸುವ ಹಕ್ಕು ಹೊಂದಿದ್ದಾರೆ.

ಈ ಎರಡೂ ಚುನಾವಣೆಗಳ ಫಲಿತಾಂಶ ಸೆಪ್ಟೆಂಬರ್ 3ರಂದು ಹೊರಬೀಳಲಿದೆ.

English summary
Polling at 105 urban local bodies including 29 city municipal council in the state on August 31.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X