Civil Police Recruitment: ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ ಗೊಂದಲ: ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹ

Civil Police Recruitment: ಕರ್ನಾಟಕದಲ್ಲಿ ಆಗಸ್ಟ್‌ 2ರ ಭಾನುವಾರ ನಡೆದ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯು ಅವ್ಯವಸ್ಥೆಯಿಂದ ಕೂಡಿತ್ತು ಎನ್ನುವ ಗಂಭೀರ ಆರೋಪ ಕೇಳಿ ಬಂದಿದೆ. ಕೇಂದ್ರ ಸರ್ಕಾರ ನಡೆಸಿದ ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಯು ಸೋರಿಕೆ ಆಗಿತ್ತು. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಮನನೊಂದ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದರು.

ಇದರ ಬೆನ್ನಲ್ಲೇ ದೇಶದಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ಯುವಕರು ಬೀದಿಗೆ ಇಳಿದು ಪ್ರತಿಭಟನೆ ಮಾಡಿದ್ದರು. ಇದು ದೇಶದಾದ್ಯಂತ ಯುವಕರು ಬೀದಿಗೆ ಇಳಿದು ಪ್ರತಿಭಟನೆ ಮಾಡುವುದಕ್ಕೆ ಕಾರಣವಾಗಿತ್ತು. ಈ ಹೋರಾಟಕ್ಕೆ ಕಾಂಗ್ರೆಸ್ ಪಕ್ಷವೂ ಸಹ ಬೆಂಬಲ ವ್ಯಕ್ತಪಡಿಸಿತ್ತು. ಇದೀಗ ಕರ್ನಾಟಕದಲ್ಲಿ ನಡೆದ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ ಭಾರೀ ಲೋಪವಾಗಿದೆ ಎಂದು ಕೆಲವು ಅಭ್ಯರ್ಥಿಗಳು ಹಾಗೂ ವಿರೋಧ ಪಕ್ಷಗಳು ಆರೋಪಿಸಿವೆ. ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ಮಾಡಿದ್ದ ಕಾಂಗ್ರೆಸ್ ಪಕ್ಷಕ್ಕೆ ಈ ವಿಚಾರದಲ್ಲಿ ಮುಜುಗರ ಎದುರಾಗಿದೆ.

Civil Police Recruitment

ಈ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಹಾಗೂ Omr ಶೀಟ್‌ನಲ್ಲಿ ಲೋಪವಾಗಿದೆ ಎನ್ನುವ ಗಂಭೀರ ಆರೋಪ ಕೇಳಿ ಬಂದಿದೆ. ವಿಜಯಪುರ, ಹಾವೇರಿ ಬಳಿಕ ಇದೀಗ ಹಾಸನದಲ್ಲೂ OMR ಶೀಟ್ ಮತ್ತು ಪ್ರಶ್ನೆಪತ್ರಿಕೆ ಬದಲಾವಣೆ ಕುರಿತು ಗಂಭೀರ ಗೊಂದಲ ನಡೆದಿದೆ ಎಂಬುದನ್ನು ಮಾಧ್ಯಮಗಳು ಸಾಕ್ಷಿ ಸಮೇತ ವರದಿ ಮಾಡುತ್ತಿವೆ.
ಒಂದರ ಹಿಂದೆ ಒಂದರಂತೆ ಬೆಳಕಿಗೆ ಬರುತ್ತಿರುವ ಈ ಅವ್ಯವಸ್ಥೆಗಳ ನಡುವೆಯೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಕಣ್ಮುಚ್ಚಿ ಕುಳಿತಿರುವುದು ಅತ್ಯಂತ ಖಂಡನೀಯ. ರಾಜ್ಯದ ಯುವಕರ ಭವಿಷ್ಯದೊಂದಿಗೆ ಚೆಲ್ಲಾಟವಾಡಿರುವ ಈ ಸಂಪೂರ್ಣ ವೈಫಲ್ಯದ ನೈತಿಕ ಹೊಣೆ ಹೊತ್ತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಆಗ್ರಹಿಸಿದ್ದಾರೆ.

ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರೇ ಯುವಕರಿಗೆ ನ್ಯಾಯ ದೊರಕಿಸಿಕೊಡಿ. ರಾಜ್ಯ ಸರ್ಕಾರ ಕೂಡಲೇ ಪಾರದರ್ಶಕ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯ ಅವ್ಯವಸ್ಥೆ ವಿಜಯಪುರಕ್ಕೆ ಮಾತ್ರ ಸೀಮಿತವಾಗಿಲ್ಲ. ಹಾವೇರಿಯಲ್ಲೂ ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಗಂಭೀರ ಗೊಂದಲ, ಅಮೂಲ್ಯ ಸಮಯ ವ್ಯರ್ಥ ಹಾಗೂ ಅನ್ಯಾಯವಾಗಿದೆ ಎಂದು ಅಳಲು ತೋಡಿಕೊಳ್ಳುತ್ತಿದ್ದಾರೆ. ರಾಜ್ಯದ ಯುವಕರ ಭವಿಷ್ಯದೊಂದಿಗೆ ಈ ರೀತಿಯ ಚೆಲ್ಲಾಟ ಆಡಿದ ಕಾಂಗ್ರೆಸ್ ಸರ್ಕಾರಕ್ಕೆ ಯಾವುದೇ ನೈತಿಕ ಹೊಣೆಗಾರಿಕೆ ಇಲ್ಲವೇ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಪ್ರಶ್ನೆ ಮಾಡಿದ್ದಾರೆ.

Civil Police Recruitment: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೇಳಿದ್ದೇನು

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯನ್ನು ಅತ್ಯಂತ ಯಶಸ್ವಿಯಾಗಿ ರಾಜ್ಯದಾದ್ಯಂತ ನಡೆಸಲಾಯಿತು. ಕೆಲವರು ಸಾಮಾಜಿಕ ಮಾಧ್ಯಮದಲ್ಲಿ ಒಎಂಆರ್ ಉತ್ತರ ಪತ್ರಿಕೆ ಮತ್ತು ಪ್ರಶ್ನೆ ಪತ್ರಿಕೆಯ ಕ್ರಮ ಸಂಖ್ಯೆ ಹೊಂದಾಣಿಕೆ ಆಗುತ್ತಿಲ್ಲವೆಂದು ಗೊಂದಲ ಸೃಷ್ಟಿಸುವ ಕೆಲಸವನ್ನು ವಿಜಯಪುರದ ತಿಕೋಟಾ ಪರೀಕ್ಷಾ ಕೇಂದ್ರದಲ್ಲಿ ಮಾಡಿದ್ದಾರೆ. ಇಷ್ಟಕ್ಕೂ ಕೆಇಎ ತನ್ನ ಪ್ರಕಟಣೆಯಲ್ಲಾಗಲಿ ಅಥವಾ ಅಧಿಸೂಚನೆಯಲ್ಲಾಗಲಿ ಒಎಂಆರ್ ಉತ್ತರ ಪತ್ರಿಕೆ ಮತ್ತು ಪ್ರಶ್ನೆ ಪತ್ರಿಕೆಯ ಕ್ರಮ ಸಂಖ್ಯೆ ಒಂದೇ ಇರಬೇಕು (ಹೊಂದಾಣಿಕೆ ಆಗಬೇಕು) ಎಂದು ಎಲ್ಲೂ ಹೇಳಿಲ್ಲ. ಹೀಗಾಗಿ ಗೊಂದಲ ಏಕೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಶ್ನೆ ಮಾಡಿದೆ.

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿನ ಖಾಲಿರುವ ಮಿಕ್ಕುಳಿದ ವೃಂದ ಮತ್ತು ಸ್ಥಳೀಯ ವೃಂದದ ಸಿವಿಲ್ ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಪ್ರಾಧಿಕಾರದ ವತಿಯಿಂದ ಅತ್ಯಂತ ಪಾರದರ್ಶಕವಾಗಿ ಲಿಖಿತ ಪರೀಕ್ಷೆಯನ್ನು 02-08-2026 ರಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ನಡೆಸಲಾಗಿದೆ. ಕೆಲವು ಅಭ್ಯರ್ಥಿಗಳು ಪರೀಕ್ಷೆ ನಡೆಯುತ್ತಿದ್ದ ಸಮಯದಲ್ಲಿ ವಿತರಿಸಲಾಗಿದ್ದ ಓಎಂಆರ್ ಮತ್ತು ಪ್ರಶ್ನೆ ಪತ್ರಿಕೆಯ ಕ್ರಮಸಂಖ್ಯೆಗಳು ಒಂದೇ ಆಗಿಲ್ಲವೆಂದು ಗೊಂದಲ ಸೃಷ್ಟಿಸಿರುವುದು ಹಾಗೂ ಇದರ ಬಗ್ಗೆ ಸುಳ್ಳು, ಸುದ್ದಿಗಳನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ಕಳುಹಿಸಿ ಅಭ್ಯರ್ಥಿಗಳನ್ನು ತಪ್ಪುದಾರಿಗೆ ಎಳೆಯಲು ಪ್ರಯತ್ನಿಸಿರುವುದು ತಿಳಿದುಬಂದಿದೆ.

ಈ ವಿಚಾರದಲ್ಲಿ ಸೃಷ್ಟಿಕರಣ ನೀಡುವುದೇನೆಂದರೆ, ಪ್ರಾಧಿಕಾರವು ಯಾವುದೇ ಪ್ರಕಟಣೆಯಲ್ಲಾಗಲೀ, ಸೂಚನೆಗಳಲ್ಲಾಗಲೀ ಅಥವಾ ಮಾಧ್ಯಮಗಳ ಮೂಲಕವಾಗಿ ಓಎಂಆರ್ ಮತ್ತು ಪ್ರಶ್ನೆಪತ್ರಿಕೆಯ ಕ್ರಮ ಸಂಖ್ಯೆ ಒಂದೇ ಇರುತ್ತದೆ ಅಥವಾ ಇರಬೇಕು ಎಂದು ಹೇಳಿರುವುದಿಲ್ಲ. ಓಎಂಆರ್ ಉತ್ತರ ಪತ್ರಿಕೆಯಲ್ಲಿ ಪಶ್ನೆ ಪತ್ರಿಕೆ ಕ್ರಮ ಸಂಖ್ಯೆ ಮತ್ತು ಪ್ರಶ್ನೆ ಪತ್ರಿಕೆ ವರ್ಷನ್ ಕೋಡ್ ತುಂಬಲು ಅವಕಾಶ ಕಲ್ಪಿಸಲಾಗಿರುತ್ತದೆ. ಓಎಂಆರ್ ಮತ್ತು ಪ್ರಶ್ನೆಪತ್ರಿಕೆ ಕ್ರಮ ಸಂಖ್ಯೆ ಒಂದೇ ಇರಬೇಕೆಂದು ತಿಳಿಸಿದ್ದರೆ ಓಎಂಆರ್‌ನಲ್ಲಿ ಪ್ರಶ್ನೆಪತ್ರಿಕೆ ಕ್ರಮಸಂಖ್ಯೆ ಬರೆಯಲು ತಿಳಿಸುವ ಅಗತ್ಯವೇ ಇರಲಿಲ್ಲ. ಆದ್ದರಿಂದ ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ಅನಗತ್ಯ ಸುಳ್ಳು ಸುದ್ದಿಗಳನ್ನು ಹರಡದಂತೆ ಕೋರಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸ್ಪಷ್ಟೀಕರಣ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+