ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊಡಗಲ್ಲಿ ಪ್ರಕೃತಿ ವಿಕೋಪ ಮರುಕಳಿಸುತ್ತದೆ ಎಂಬ ವದಂತಿಗೆ ಕಿವಿಗೊಡಬೇಡಿ: ಶ್ರೀನಿವಾಸರೆಡ್ಡಿ

|
Google Oneindia Kannada News

ಬೆಂಗಳೂರು, ಏ.29: ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಫ್ಯಾನಿ ಚಂಡಮಾರುತದ ಪರಿಣಾಮ ರಾಜ್ಯದ ಮೇಲೆ ಅಷ್ಟಾಗಿ ಪರಿಣಾಮ ಬೀರುವುದಿಲ್ಲ, ವದಂತಿಗಳಿಗೆ ಕಿವಿಗೊಡಬೇಡಿ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಡಾ. ಜಿ.ಎಸ್. ಶ್ರೀನಿವಾಸರೆಡ್ಡಿ ತಿಳಿಸಿದ್ದಾರೆ.

Clarification on predicting heavy rainfall and natural calamaty in Kodag

ಕಳೆದ ವರ್ಷ ಕೊಡಗು, ಕೇರಳದಲ್ಲಿ ಉಂಟಾಗಿದ್ದ ಪ್ರಕೃತಿ ವಿಕೋಪ ಮರುಕಳಿಸುತ್ತದೆ ಎಂಬ ವದಂತಿಯನ್ನು ಹಬ್ಬಿಸಲಾಗುತ್ತಿದೆ, ಇದು ಸತ್ಯಕ್ಕೆ ದೂರವಾಗಿದ್ದು ಎಂದು ಅವರು ಹೇಳಿದ್ದಾರೆ.

ಫ್ಯಾನಿ ಚಂಡಮಾರುತ ಎಫೆಕ್ಟ್‌: ನಾಳೆಯಿಂದ ಕರ್ನಾಟಕದ ಹಲವೆಡೆ ಮಳೆ ಸಾಧ್ಯತೆ ಫ್ಯಾನಿ ಚಂಡಮಾರುತ ಎಫೆಕ್ಟ್‌: ನಾಳೆಯಿಂದ ಕರ್ನಾಟಕದ ಹಲವೆಡೆ ಮಳೆ ಸಾಧ್ಯತೆ

ಫ್ಯಾನಿ ಚಂಡಮಾರುತದ ಜೊತೆಗೆ ಟ್ರಫ್‌ನ ಪರಿಣಾಮದಿಂದಾಗಿ ದಕ್ಷಿಣ ಒಳನಾಡು, ಮಲೆನಾಡಿನಲ್ಲಿ ಮಳೆಯಾಗಲಿದೆ. ಆಂಧ್ರ ಪ್ರದೇಶಕ್ಕೆ ಹೋಲಿಸಿದರೆ ರಾಜ್ಯದಲ್ಲಿ ಚಂಡಮಾರುತದ ಪರಿಣಾಮವಿಲ್ಲ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರ ಕೇಂದ್ರದ ನಿರ್ದೇಶಕ ಶ್ರೀನಿವಾಸರೆಡ್ಡಿ ತಿಳಿಸಿದ್ದಾರೆ.

ಮುಂದಿನ ಆರು ಗಂಟೆಗಳಲ್ಲಿ ಅಬ್ಬರಿಸಲಿದೆ ಸೈಕ್ಲೋನ್ 'ಫ್ಯಾನಿಮುಂದಿನ ಆರು ಗಂಟೆಗಳಲ್ಲಿ ಅಬ್ಬರಿಸಲಿದೆ ಸೈಕ್ಲೋನ್ 'ಫ್ಯಾನಿ

ಏ.30ರಿಂದ ಮೇ.1ರವರೆಗೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ , ಉಡುಪಿ ಮತ್ತು ದಕ್ಷಿಣ ಒಳನಾಡಿನ ಬಳ್ಳಾರಿ, ಚಾಮರಾಜನಗರ, ದಾವಣಗೆರೆ, ಹಾಸನದಲ್ಲಿ ಮಳೆ ನಿರೀಕ್ಷಿಸಲಾಗಿದೆ.

ಏ.30ರಿಂದ ಮೇ 3ರ ಒಳಗೆ ಫ್ಯಾನಿ ಚಂಡಮಾರುತ ಅಪ್ಪಳಿಸಲಿದ್ದು ಭಾರಿ ಮಳೆಯಾಗಲಿದೆ ಎನ್ನುವ ಮಾಹಿತಿ ಎಲ್ಲೆಡೆ ಹರಿದಾಡುತ್ತಿದೆ. ಆದರೆ ಈ ಚಂಡಮಾರುತದಿಂದ ಮಳೆಯಾಗುವ ಸಾಧ್ಯತೆ ಕಡಿಮೆ ಇದೆ ಎಂದು ತಿಳಿಸಿದ್ದಾರೆ.

English summary
Dr G S Srinivasa Reddy, Director , Karnataka State Natural Disaster Monitoring Center, BENGALURU has given the following clarification regarding report quoting a Retired Geologist predicting heavy rainfall and associated natural calamity in Kodagu and Kerala.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X