ಒಂದನೇ ತರಗತಿ ಪ್ರವೇಶ: ಗರಿಷ್ಠ ವಯೋಮಿತಿ 8 ವರ್ಷಕ್ಕೆ ಏರಿಕೆ

ಮಹತ್ವದ ಬೆಳವಣಿಗೆಯಲ್ಲಿ ಒಂದನೇ ತರಗತಿ ಪ್ರವೇಶಕ್ಕೆ ಇದ್ದ ಮಕ್ಕಳ ಗರಿಷ್ಠ ವಯೋಮಿತಿಯನ್ನು ಹೆಚ್ಚಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ. 1ನೇ ತರಗತಿಗೆ ಪ್ರವೇಶ ಪಡೆಯಲು ಕನಿಷ್ಠ 6 ವರ್ಷಗಳಾಗಿದ್ದು ಗರಿಷ್ಠ ವಯೋಮಿತಿಯನ್ನು 8 ವರ್ಷಕ್ಕೆ ಹೆಚ್ಚಿಸಲಾಗಿದೆ.

ಈ ನಿಯಮ 2025-26ನೇ ಸಾಲಿನ ಶೈಕ್ಷಣಿಕ ವರ್ಷದಿಂದ ಅನ್ವಯವಾಗಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶದಲ್ಲಿ ತಿಳಿಸಿದೆ. ಇದು 1ನೇ ತಗತಿಗೆ ವಿದ್ಯಾರ್ಥಿಯನ್ನು ದಾಖಲಿಸಲು ಗರಿಷ್ಠ ವಯೋಮಿತಿಯಾಗಿದ್ದು, ಕನಿಷ್ಠ ವಯೋಮಿತಿ 6 ವರ್ಷಗಳಾಗಿದೆ. 8 ವರ್ಷ ಮೀರಿದ ಮಕ್ಕಳಿಗೆ ಇನ್ನು ಮುಂದೆ 1ನೇ ತರಗತಿಗೆ ಪ್ರವೇಶ ಸಿಗುವುದಿಲ್ಲ.

Class 1 Admission Age Limit Increased to Eight by 2025

2025-26ನೇ ಶೈಕ್ಷಣಿಕ ವರ್ಷದಿಂದ ಜಾರಿಗೆ ಬರುವಂತೆ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ 1ನೇ ತರಗತಿಗೆ ಮಕ್ಕಳ ಪ್ರವೇಶಕ್ಕೆ ಕನಿಷ್ಠ ವಯಸ್ಸು 6 ವರ್ಷಗಳನ್ನು ನಿಗದಿ ಮಾಡಿದೆ.

6 ವರ್ಷಗಳ ವಯೋಮಿತಿಯಲ್ಲಿ ಮಧ್ಯಪ್ರವೇಶಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದ್ದರಿಂದ ಮುಂದಿನ ವರ್ಷದಿಂದ ಈ ನಿಯಮ ಜಾರಿಗೆ ಬರುವುದು ಬಹುತೇಕ ಖಚಿತವಾಗಿದೆ.

ಎಲ್‌ಕೆಜಿ ಮತ್ತು ಯುಕೆಜಿಗೆ ಪ್ರವೇಶ ಪಡೆಯಲು ಮಕ್ಕಳ ವಯೋಮಿತಿಯನ್ನು ಈಗಾಗಲೇ ಕನಿಷ್ಠ ನಾಲ್ಕು ಮತ್ತು ಐದು ವರ್ಷಗಳಿಗೆ ನಿಗದಿ ಮಾಡಲಾಗಿದೆ. ಗರಿಷ್ಠ ವಯೋಮಿತಿಯನ್ನು ಆರು ಮತ್ತು ಏಳು ವರ್ಷಕ್ಕೆ ಹೆಚ್ಚಿಸಲಾಗಿದೆ.

ಕಡ್ಡಾಯ ಶಿಕ್ಷಣ ಕಾಯ್ದೆಗೆ ಅನುಗುಣವಾಗಿ ಮಕ್ಕಳ ದಾಖಲಾತಿಯ ಕನಿಷ್ಠ ಮತ್ತು ಗರಿಷ್ಠ ವಯೋಮಿತಿ ಹೆಚ್ಚಳ ಮಾಡುವುದರಿಂದ ಶಾಲೆ ತೊರೆಯುವ ಮಕ್ಕಳ ಸಂಖ್ಯೆಯನ್ನು ಕಡಿಮೆ ಮಾಡಲು ಸಹಾಯವಾಗುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆ ಆದೇಶದಲ್ಲಿ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+