ಇಂಡಿಯನ್ ಮಿಲಿಟರಿ ಕಾಲೇಜ್; 8ನೇ ತರಗತಿ ಪ್ರವೇಶಕ್ಕೆ ಅರ್ಹತೆಗಳು
ಬೆಂಗಳೂರು, ಫೆಬ್ರವರಿ 29; ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್, ಡೆಹರಾಡೂನ್‌ನಲ್ಲಿ 8ನೇ ತರಗತಿ ದಾಖಲಾತಿಗಾಗಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರವೇಶಕ್ಕೆ ಅರ್ಹತೆಗಳು ಮುಂತಾದ ಮಾಹಿತಿ ಇಲ್ಲಿದೆ.
ಉತ್ತರಾಖಂಡ ರಾಜ್ಯದ ಡೆಹರಾಡೂನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‍ನಲ್ಲಿ 2025ನೇ ಸಾಲಿನ 8ನೇ ತರಗತಿಗಾಗಿ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ ಬಾಲಕ ಮತ್ತು ಬಾಲಕಿಯರಿಗೆ ಅರ್ಹತಾ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ ಜೂನ್ 1 ರಂದು ನಡೆಯಲಿದೆ.

ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿರಬೇಕು ಅಥವಾ ಉತ್ತೀರ್ಣರಾಗಿರಬೇಕು. ದಿನಾಂಕ 01/01/2025ರಂತೆ 111/2 ವರ್ಷದಿಂದ 13 ವರ್ಷದೊಳಗಿರುವ ಅಂದರೆ (ದಿನಾಂಕ 02/01/2012 ರಿಂದ 01/07/2013ರೊಳಗೆ ಜನಿಸಿರುವ) ಬಾಲಕರು ಮತ್ತು ಬಾಲಕಿಯರು ಮಾತ್ರ ಈ ಪರೀಕ್ಷೆಗೆ ಅರ್ಹರು.
ಈ ಸಂಸ್ಥೆಯ ಮುಖ್ಯ ಗುರಿ ಯುವಕರನ್ನು ದೇಶದ ಸಶಸ್ತ್ರ ಪಡೆಗೆ ಸೇರಲು ಸಿದ್ದಗೊಳಿಸುವುದು ಹಾಗೂ ಸರ್ವ ರೀತಿಯ ವಿದ್ಯಾಭ್ಯಾಸ, ತರಬೇತಿ ನೀಡುವುದಾಗಿದೆ. ಕಾಲೇಜಿನಲ್ಲಿ ವರ್ಷವೊಂದಕ್ಕೆ ವಿದ್ಯಾಭ್ಯಾಸದ ಶುಲ್ಕ ರೂ. 1,07,500ಗಳು (ಸಾಮಾನ್ಯ ವರ್ಗ) ಹಾಗೂ ರೂ. 93,900 (ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ) ಗಳಾಗಿರುತ್ತದೆ. ಇದು ಕಾಲಕಾಲಕ್ಕೆ ಹೆಚ್ಚಾಗಬಹುದು.
ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯು ಪ್ರವೇಶ ಸಮಯದಲ್ಲಿ ರೂ.30,000 ಗಳನ್ನು ಭದ್ರತಾ ಠೇವಣಿ ನೀಡಬೇಕಾಗುತ್ತದೆ (incl in annual fee). ಮೊತ್ತವನ್ನು ವಿದ್ಯಾರ್ಥಿಯು ಪದವೀಧರನಾದ ಮತ್ತು ವಿಧ್ಯಾರ್ಥಿನಿಯು ಪದವೀಧರರೆಯಾದ ಬಳಿಕ ಹಿಂತಿರುಗಿಸಲಾಗುವುದು.
ಅರ್ಜಿ ನಮೂನೆ ಪಡೆಯುವ ವಿಧಾನ: ಪ್ರಾಸ್ಪೆಕ್ಟಸ್, ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರುಪುಸ್ತಕವನ್ನು ರಾಷ್ಟ್ರೀಯ ಭಾರತೀಯ ಮಿಲಟರಿ ಕಾಲೇಜು, ಗರಹಿ ಕ್ಯಾಂಟ್, ಡೆಹ್ರಾಡೂನ್, ಉತ್ತರಾಖಂಡ್, ಪಿನ್-248003 ಮೂಲಕ ಪಡೆಯಬಹುದು.
ಸಾಮಾನ್ಯ ಅಭ್ಯರ್ಥಿಗಳಿಗೆ ರೂ.600 ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ರೂ.555 ಇದ್ದು, ಆನ್‍ಲೈನ್ ಪಾವತಿ ಮಾಡುವ ಮೂಲಕ ಪ್ರಾಸ್ಪೆಕ್ಟಸ್ ಕಮ್ ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರು ಪುಸ್ತಕಗಳನ್ನು ಸಹ ಪಡೆಯಬಹುದು.
ವೆಬ್‍ಸೈಟ್ www.rimc.gov.in ಪಾವತಿ ಸ್ವೀಕರಿಸಿದ ನಂತರ ಪ್ರಾಸ್ಪೆಕ್ಟಸ್ ಕಮ್ ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರುಪುಸ್ತಕಗಳನ್ನು ಸ್ಪೀಡ್ ಪೋಸ್ಟ್ ಮೂಲಕ ರವಾನಿಸಲಾಗುತ್ತದೆ.
ಪ್ರಾಸ್ಪೆಕ್ಟಸ್ ಕಮ್ ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರುಪುಸ್ತವನ್ನು ಸಾಮಾನ್ಯ ಅಭ್ಯರ್ಥಿಗಳಿಗೆ ರೂ.600ಗಳ ಬೇಡಿಕೆಯ ಕರಡು ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ರೂ.555ಗಳ ಬೇಡಿಕೆಯ ಕರಡು ಕಳುಹಿಸಿ ಲಿಖಿತ ವಿನಂತಿಯ ಪರವಾಗಿ ಜಾತಿ ಪ್ರಮಾಣ ಪತ್ರದೊಂದಿಗೆ "THE COMMANDANT RIMC FUND" PAYABLE AT HDFC BANK, BALLUPUR CHOWK, DEHRADUN (BANK CODE. 1399), UTTARAKHAND ಈ ವಿಳಾಸಕ್ಕೆ ಕಳುಹಿಸಬಹುದು.
ಪಿನ್ ಕೋಡ್ ಮತ್ತು ಸಂಪರ್ಕ ಸಂಖ್ಯೆಯೊಂದಿಗೆ ದೊಡ್ಡ ಅಕ್ಷರಗಳಲ್ಲಿ ಟೈಪ್ ಮಾಡಿ ಬರೆಯಬೇಕು. ಕಾನೂನು ಬಾಹಿರ ಅಥವಾ ಅಪೂರ್ಣ ವಿಳಾಸದಿಂದ ಉಂಟಾಗುವ ಪ್ರಾಸ್ಪೆಕ್ಟಸ್‍ನ ಸಾಗಾಣಿಕೆಯಲ್ಲಿ ಯಾವುದೇ ಅಂಚೆ ವಿಳಂಬ ಅಥವಾ ನಷ್ಟಕ್ಕೆ RIMS ಸಂಸ್ಥೆಯು ಜವಾಬ್ದಾರರಾಗಿರುವುದಿಲ್ಲ.
ಭರ್ತಿ ಮಾಡಿದ ನಿಗದಿತ ಅರ್ಜಿ ನಮೂನೆಯನ್ನು ದ್ವಿಪ್ರತಿಯಲ್ಲಿ ಏಪ್ರಿಲ್ 15 ರೊಳಗಾಗಿ ನಿರ್ದೇಶಕರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಫೀಲ್ಡ್ ಮಾರ್ಷಲ್ ಕೆ ಎಮ್ ಕಾರ್ಯಪ್ಪ ಭವನ್, ನಂ, 58 ಫೀಲ್ಡ್ ಮಾರ್ಷಲ್ ಕೆ ಎಮ್ ಕಾರ್ಯಪ್ಪ ರಸ್ತೆ, ಬೆಂಗಳೂರು-25 ಇವರಿಗೆ ಸಲ್ಲಿಸಬೇಕು.
ಮುನ್ಸಿಪಾಲಿಟಿ, ಗ್ರಾಮ ಪಂಚಾಯತ್ ಪ್ರಾಧಿಕಾರ ವತಿಯಿಂದ ಆಂಗ್ಲ ಭಾಷೆಯಲ್ಲಿ ಪಡೆದ ಅಭ್ಯರ್ಥಿಯ ಜನ್ಮ ಪ್ರಮಾಣ ಪತ್ರದ ದೃಢೀಕೃತ ಪ್ರತಿ. 5 ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳು (ಅರ್ಜಿಯಲ್ಲಿ ಅಂಟಿಸಿದ ಭಾವಚಿತ್ರವನ್ನು ಸೇರಿಸಿ). ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು, ಸಕ್ಷಮ ಪ್ರಾಧಿಕಾರದಿಂದ ನೀಡಿದ ಜಾತಿ ಪ್ರಮಾಣ ಪತ್ರದ ದೃಡೀಕೃತ (ಪ್ರತಿ ಆಂಗ್ಲ ಭಾಷೆಯಲ್ಲಿ ಇರುವಂತೆ). ಪರೀಕ್ಷಾ ಪ್ರವೇಶ ಪತ್ರವನ್ನು ತ್ವರಿತ ಅಂಚೆದ್ವಾರ ರವಾನಿಸಲು ರೂ.42 ರ ಅಂಚೆ ಚೀಟಿ ಲಗತ್ತಿದ ಸ್ವವಿಳಾಸ ಲಕೋಟೆ. ಮುಖ್ಯೋಪಾಧ್ಯಾಯರಿಂದ ಅಭ್ಯರ್ಥಿಯ ಜನ್ಮ ದಿನಾಂಕ ಮತ್ತು ಓದುತ್ತಿರುವ ತರಗತಿ ಬಗ್ಗೆ ಪಡೆದ ಪ್ರಮಾಣ ಪತ್ರದ ಮೂಲ ಪ್ರತಿ (ದೃಡೀಕರಿಸಿದ ಅಭ್ಯರ್ಥಿಯ ಭಾವ ಚಿತ್ರದೊಂದಿಗೆ). ಈ ರಾಜ್ಯದ ವಾಸಸ್ಥಾನ ದೃಡೀಕರಣ ಪತ್ರ ತಹಶೀಲ್ದಾರ್‌ರಿಂದ ಪಡೆದಿರಬೇಕು.
ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಅಥವಾ ದೂರವಾಣಿ 0836-2440176ಗೆ ಸಂಪರ್ಕಿಸಬಹುದು.












Click it and Unblock the Notifications