5, 8, 9ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶ ಪ್ರಕಟಕ್ಕೆ ಸುಪ್ರಿಂ ತಡೆಯಾಜ್ಞೆ
ನವದೆಹಲಿ, ಏಪ್ರಿಲ್, 08: 5, 8, 9ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿದಂತೆ ಸುಪ್ರೀಂ ಕೋರ್ಟ್ ಸೋಮವಾರ (ಏಪ್ರಿಲ್ 08) ತಡೆಯಾಜ್ಞೆ ನೀಡಿದೆ.
5,8, 9ನೇ ತರಗತಿ ವಿದ್ಯಾರ್ಥಿಗಳ ಮೌಲ್ಯಾಂಕನ ಪರೀಕ್ಷೆಗೆ ಅನುಮತಿ ನೀಡಿದ್ದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ, ರುಪ್ಸಾ, ಅವರ್ ಸ್ಕೂಲ್, ಆರ್‌ಟಿಇ ವಿದ್ಯಾರ್ಥಿಗಳು ಮತ್ತು ಪೋಷಕರ ಸಂಘಟನೆ ಸುಪ್ರೀಂಕೋರ್ಟ್ ಮೊರೆ ಹೋಗಿದ್ದವು. ಇದೀಗ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ, ಪರೀಕ್ಷಾ ಫಲಿತಾಂಶ ಪ್ರಕಟಿಸಿದಂತೆ ತಡೆಯಾಜ್ಞಾ ನೀಡಿದ್ದು, ಅಲ್ಲದೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಅಹ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.

ಈಗಾಗಲೇ ರಾಜ್ಯದಲ್ಲಿನ ಶಾಲೆಗಳು 5,8 ಮತ್ತು 9ನೇ ತರಗತಿ ಪಬ್ಲಿಕ್ ಪರೀಕ್ಷೆಯ ಫಲಿತಾಂಶವನ್ನು ಬೆಳಗ್ಗೆ 10 ಗಂಟೆಗೆ ಪ್ರಕಟ ಮಾಡಿವೆ. ಎಲ್ಲಾ ಶಾಲೆಗಳಲ್ಲಿ ಆಡಳಿತ ಮಂಡಳಿಗಳು ಫಲಿತಾಂಶ ಪ್ರಕಟ ಮಾಡಿದ್ದು, ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಫಲಿತಾಂಶ ಕಳುಹಿಸಲಾಗಿದೆ. ಆಡಳಿತ ಮಂಡಳಿಗಳು ಶಿಕ್ಷಣ ಇಲಾಖೆಗೆ ಮಾಹಿತಿ ಅಪ್‍ಲೋಡ್ ಮಾಡಬೇಕಿದೆ.
ಇನ್ನು ರಾಜ್ಯದ 5,8 ಮತ್ತು 9ನೇ ತರಗತಿ ವಿದ್ಯಾರ್ಥಿಗಳ ಮೌಲ್ಯಾಂಕನ ಪರೀಕ್ಷೆಯ ಫಲಿತಾಂಶ ಪ್ರಕಟಿಸದಂತೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಇನ್ನಯ ಕರ್ನಾಟಕ ಸರ್ಕಾರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡುತ್ತಿದ್ದು, ಪೋಷಕರು, ಶಿಕ್ಷಕರು ಮತ್ತು ಶಾಲಾ ಆಡಳಿತ ಮಂಡಳಿಗೆ ಸಂಕಷ್ಟ ತಂದೊಡ್ಡುತ್ತಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ನ್ಯಾಯಮೂರ್ತಿಗಳಾದ ಬೇಲಾ ಎಂ.ತ್ರಿವೇದಿ ಮತ್ತು ಪಂಕಜ್ ಮಿಥಲ್ ಅವರ ಪೀಠವು ಕರ್ನಾಟಕ ಹೈಕೋರ್ಟ್‌ನ ವಿಭಾಗೀಯ ಪೀಠದ ಮಾರ್ಚ್ 22ರ ಆದೇಶವನ್ನು ಅಮಾನತುಗೊಳಿಸಿತು.
ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ನಿರ್ವಹಣಾ ಸಂಘ ಕರ್ನಾಟಕ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಎರಡು ವಾರಗಳಲ್ಲಿ ಇದಕ್ಕೆ ಪ್ರತಿಕ್ರಿಯಿಸುವಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಹೈಕೋರ್ಟ್‌ನ ಆದೇಶವು ಪ್ರಾಥಮಿಕವಾಗಿ ಶಿಕ್ಷಣ ಹಕ್ಕು ಕಾಯ್ದೆಗೆ ಹೊಂದಿಕೆಯಾಗುವುದಿಲ್ಲ ಎಂದು ಪೀಠವು ಹೇಳಿದ್ದು, ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ತಡೆಹಿಡಿಯಬೇಕೇಂದು ಆದೇಶಿಸಿದೆ.












Click it and Unblock the Notifications