ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೆ.ಜೆ.ಜಾರ್ಜ್‌ಗೆ ಕ್ಲೀನ್ ಚಿಟ್, ಗಣಪತಿ ಕುಟುಂಬಕ್ಕೆ ನ್ಯಾಯ ಸಿಕ್ಕಿಲ್ಲ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 19 : 'ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಜೆ.ಜಾರ್ಜ್ ಅವರಿಗೆ ಕ್ಲೀನ್ ಚಿಟ್ ನೀಡಿ ಸರ್ಕಾರ ಅವರನ್ನು ರಕ್ಷಣೆ ಮಾಡಿದೆ' ಎಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.

ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಗದೀಶ್ ಶೆಟ್ಟರ್ ಅವರು, 'ಎಂ.ಎಂ.ಕಲಬುರ್ಗಿ ಹತ್ಯೆ, ಕ್ರಿಕೆಟ್ ಬೆಟ್ಟಿಂಗ್ ದಂಧೆ ಪ್ರಕರಣದ ಆರೋಪಿಗಳನ್ನು ಇದುವರೆಗೂ ಸಿಐಡಿ ಬಂಧಿಸಿಲ್ಲ. ಆದರೆ, ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಒಂದೂವರೆ ತಿಂಗಳಿನಲ್ಲಿ ಪೂರ್ಣಗೊಳಿಸಿದ್ದು, ಅನುಮಾನಕ್ಕೆ ಕಾರಣವಾಗಿದೆ' ಎಂದರು.[ಗಣಪತಿ ಆತ್ಮಹತ್ಯೆ, ಜಾರ್ಜ್ ವಿರುದ್ಧ ಬಿ ರಿಪೋರ್ಟ್]

 jagadish shettar

'ಮಾಜಿ ಸಚಿವ ಕೆ.ಜೆ.ಜಾರ್ಜ್‌, ಐಪಿಎಸ್ ಅಧಿಕಾರಿಗಳಾದ ಎ.ಎಂ.ಪ್ರಸಾದ್, ಪ್ರಣವ್ ಮೊಹಾಂತಿ ಅವರಿಗೆ ಕ್ಲೀನ್ ಚಿಟ್ ನೀಡುವ ಮೂಲಕ ಮೂವರನ್ನು ಸರ್ಕಾರ ರಕ್ಷಣೆ ಮಾಡಿದೆ. ತನಿಖೆಯ ಎಲ್ಲಾ ದಾಖಲೆಗಳನ್ನು ಬಿಡುಗಡೆ ಮಾಡಬೇಕು' ಎಂದು ಶೆಟ್ಟರ್ ಒತ್ತಾಯಿಸಿದರು.[ವಿಡಿಯೋ - ಡಿವೈಎಸ್ ಪಿ ಗಣಪತಿ ಕಡೇ ಸಂದರ್ಶನ]

'ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಸದನದಲ್ಲಿ ಭಾರೀ ಹೋರಾಟ ಮಾಡಲಾಯಿತು. ಆದರೆ, ಸರ್ಕಾರ ಅದಕ್ಕೆ ಒಪ್ಪಿಗೆ ನೀಡಲಿಲ್ಲ. ಈಗ ಗಣಪತಿ ಕುಟುಂಬದವರೇ ಸಿಬಿಐ ತನಿಖೆಗಾಗಿ ಹೈಕೋರ್ಟ್ ಮೊರೆ ಹೋಗಿದ್ದಾರೆ' ಎಂದು ಹೇಳಿದರು.[ಗಣಪತಿ ಸಾವಿನ ಪ್ರಕರಣದ Timeline]

'ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆಗಾಗಿ ನಿವೃತ್ತ ನ್ಯಾಯಮೂರ್ತಿ ಕೆ.ಎನ್‌. ಕೇಶವನಾರಾಯಣ ಅವರ ನೇತೃತ್ವದ ಆಯೋಗ ರಚನೆ ಮಾಡಲಾಗಿದೆ. ಆದರೆ, ತನಿಖೆ ನಡೆಸಲು ಕಚೇರಿ, ಮೂಲಸೌಕರ್ಯ ಒದಗಿಸದೇ ಸರ್ಕಾರ ಅವಮಾನ ಮಾಡಿದೆ' ಎಂದು ಶೆಟ್ಟರ್ ಆರೋಪಿಸಿದರು.

English summary
Clean chit to former minister K.J.George in the suicide case of DySP M.K.Ganapathi is an injustice to officer's family said Opposition leader Jagadish Shettar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X