ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶ್ರೀಗಳ ಖುಲಾಸೆ, ಹೈಕೋರ್ಟ್‌ ಮೆಟ್ಟಿಲೇರಿದ ಸರ್ಕಾರ

|
Google Oneindia Kannada News

ಬೆಂಗಳೂರು, ಏಪ್ರಿಲ್ 19 : ಅತ್ಯಾಚಾರ ಪ್ರಕರಣದಲ್ಲಿ ರಾಘವೇಶ್ವರ ಭಾರತಿ ಸ್ವಾಮೀಜಿಯವರನ್ನು ಖುಲಾಸೆಗೊಳಿಸಿವ ತೀರ್ಪನ್ನು ಕರ್ನಾಟಕ ಸರ್ಕಾರ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದೆ. ಮಾರ್ಚ್ 31ರಂದು ಸೆಷನ್ಸ್ ಕೋರ್ಟ್ ಸ್ವಾಮೀಜಿಗಳನ್ನು ಖುಲಾಸೆಗೊಳಿಸಿತ್ತು.

ಸೆಷನ್ಸ್ ನ್ಯಾಯಾಲಯದ ಆದೇಶವನ್ನು ರದ್ದುಪಡಿಸಬೇಕು. ಸ್ವಾಮೀಜಿಯನ್ನು ದೋಷಿ ಎಂದು ಪರಿಗಣಿಸಿ ಕಾನೂನು ಪ್ರಕಾರ ಸೂಕ್ತ ಶಿಕ್ಷೆ ವಿಧಿಸಬೇಕು ಎಂದು ಪ್ರಾಸಿಕ್ಯೂಷನ್‌ ಹೈಕೋರ್ಟ್‌ಗೆ ಸಲ್ಲಿಸಿರುವ ಮರು ಪರಿಶೀಲನಾ ಅರ್ಜಿಯಲ್ಲಿ ಮನವಿ ಮಾಡಿದೆ. [ರಾಘವೇಶ್ವರ ಶ್ರೀಗಳು ಖುಲಾಸೆ, ತೀರ್ಪಿನ 5 ಅಂಶಗಳು]

raghaveshwara swamiji

ಗಾಯಕಿ ಪ್ರೇಮಲತಾ ದಿವಾಕರ್ ಅವರ ಮೇಲಿನ ಅತ್ಯಾಚಾರ ಆರೋಪ ಪ್ರಕರಣದಲ್ಲಿ ರಾಘವೇಶ್ವರ ಭಾರತಿ ಸ್ವಾಮೀಜಿ ಅವರನ್ನು ಖುಲಾಸೆಗೊಳಿಸಿ, ಸೆಷನ್ಸ್ ಕೋರ್ಟ್ ತೀರ್ಪು ಮಾರ್ಚ್ 31ರಂದು ತೀರ್ಪು ನೀಡಿತ್ತು. ಈ ತೀರ್ಪನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದೆ. [ರಾಘವೇಶ್ವರ ಶ್ರೀಗಳು ನಿರ್ದೋಷಿ, ವಿಜಯೋತ್ಸವದ ಚಿತ್ರಗಳು]

ಅತ್ಯಾಚಾರ ಪ್ರಕರಣದಿಂದ ತಮ್ಮನ್ನು ಕೈ ಬಿಡುವಂತೆ ಶ್ರೀಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಧೀಶ ಜಿ.ಬಿ. ಮುದಿಗೌಡರ್‌ ಅವರು ಮಾರ್ಚ್ 31ರಂದು ಶ್ರೀಗಳನ್ನು ಖುಲಾಸೆಗೊಳಿಸಿದ್ದರು. ಸಾಕ್ಷ್ಯಾಧಾರಗಳ ಕೊರತೆ ಹಿನ್ನಲೆಯಲ್ಲಿ ಶ್ರೀಗಳನ್ನು ಖುಲಾಸೆಗೊಳಿಸಲಾಗಿದೆ ಎಂದು ಆದೇಶ ನೀಡಿದ್ದರು.

ಸೆಷನ್ಸ್ ಕೋರ್ಟ್ ತೀರ್ಪಿನ ಕುರಿತು ಪ್ರತಿಕ್ರಿಯೆ ನೀಡಿದ್ದ ವಿಶೇಷ ಸರ್ಕಾರಿ ಅಭಿಯೋಜಕ ಬೆಳ್ಳಿಯಪ್ಪ ಅವರು, 'ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಸಾಕ್ಷ್ಯಗಳನ್ನು ಒದಗಿಸಲಾಗಿತ್ತು. ಆದರೂ ಕೋರ್ಟ್ ಸ್ವಾಮೀಜಿಗಳಿಗೆ ಕ್ಲೀನ್ ಚಿಟ್ ನೀಡಿದೆ. ಈ ಆದೇಶವನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸುತ್ತೇವೆ' ಎಂದು ಹೇಳಿದ್ದರು.

English summary
Karnataka government moved the High Court on Monday challenging the Bangalore sessions court verdict acquitting Hosanagara Ramachandrapura Mutt Raghaveshwara Bharathi Swamiji in singer Premalatha Diwakar rape case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X