Muda Scam: ಮುಖ್ಯಮಂತ್ರಿಗಳ ಒತ್ತಡಕ್ಕೆ ಮಣಿದು ಲೋಕಾಯುಕ್ತದಿಂದ ಕ್ಲೀನ್ ಚಿಟ್: ವಿಜಯೇಂದ್ರ
ಶಿವಮೊಗ್ಗ, ಜನವರಿ 23: ಮುಡಾ ವಿಚಾರದಲ್ಲಿ ಮುಖ್ಯಮಂತ್ರಿಗಳ ಒತ್ತಡಕ್ಕೆ ಮಣಿದು ಲೋಕಾಯುಕ್ತದವರು ಕ್ಲೀನ್ ಚಿಟ್ ಕೊಟ್ಟಿರುವ ಸಾಧ್ಯತೆ ಇದೆ. ಕ್ಲೀನ್ ಚಿಟ್ ಕೊಟ್ಟಿದ್ದರೆ, ಇದರ ವಿರುದ್ಧ ನಾವು ಹೋರಾಟ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.
ಮಾಧ್ಯಮಗಳಲ್ಲಿ ವರದಿಯಾದಂತೆ ಲೋಕಾಯುಕ್ತ ತನಿಖಾ ಸಂಸ್ಥೆಯು ಮುಡಾ ಹಗರಣದಲ್ಲಿ ಮುಖ್ಯಮಂತ್ರಿಗಳಿಗೆ ಕ್ಲೀನ್ ಚಿಟ್ ಕೊಟ್ಟಿದ್ದೇ ಆದರೆ, ಲೋಕಾಯುಕ್ತ ತನಿಖೆ ಸರಿಯಾಗಿ ಆಗುತ್ತಿಲ್ಲ; ಸಿಎಂ ಒತ್ತಡಕ್ಕೆ ಮಣಿದಿದ್ದಾರೆ ಎಂದು ಬಿಜೆಪಿ ಹಲವು ದಿನಗಳಿಂದ ವ್ಯಕ್ತಪಡಿಸಿದ ಅನುಮಾನಗಳು ಸತ್ಯವಾದಂತೆ ಎಂದು ವಿಶ್ಲೇಷಿಸಿದರು.

ಮೊನ್ನೆ ಜಾರಿ ನಿರ್ದೇಶನಾಲಯವು (ಇ.ಡಿ.) ಪ್ರೆಸ್ ನೋಟನ್ನೂ ಬಿಡುಗಡೆ ಮಾಡಿದೆ. ಮುಡಾದಲ್ಲಿ ಎಷ್ಟು ಕೋಟಿ ಹಗರಣ ನಡೆದಿದೆ ಎಂಬುದನ್ನು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಮತ್ತೊಂದು ಕಡೆ ರಾಜ್ಯ ಹೈಕೋರ್ಟ್ ಕೂಡ ಮೈಸೂರಿನ ಮುಡಾ ಹಗರಣವನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದೆ. ಇದರ ನಡುವೆ ಮುಖ್ಯಮಂತ್ರಿಗಳೂ ಸೇರಿ ರಾಜ್ಯ ಸರಕಾರವು ಮಾನ್ಯ ರಾಜ್ಯಪಾಲರನ್ನು ಅವಹೇಳನಕಾರಿಯಾಗಿ ನಿಂದಿಸುವ ಪ್ರಯತ್ನ ಮಾಡಿದ್ದಾರೆ ಎಂದು ಆಕ್ಷೇಪಿಸಿದರು.
ಹೈಕೋರ್ಟ್ ತೀರ್ಪು ಬರುವ ಸಂದರ್ಭದಲ್ಲೇ ಲೋಕಾಯುಕ್ತ ವರದಿ ನೀಡಿದ್ದು ಸತ್ಯವಾದರೆ, ಇದು ಖಂಡಿತ ಸರಿಯಲ್ಲ. ಇದಕ್ಕೆ ಯಾವುದೇ ರೀತಿಯ ಪಾವಿತ್ರ್ಯತೆ ಇರುವುದಿಲ್ಲ ಎಂದು ತಿಳಿಸಿದರು. ಮುಖ್ಯಮಂತ್ರಿಗಳ ಒತ್ತಡಕ್ಕೆ ಮಣಿದು ಕ್ಲೀನ್ ಚಿಟ್ ಕೊಡಲಾಗಿದೆ ಎಂಬುದು ನಮ್ಮೆಲ್ಲರ ಸ್ಪಷ್ಟ ಅಭಿಪ್ರಾಯ. ಇ.ಡಿ. ಆಧಾರರಹಿತವಾಗಿ ಮಾಧ್ಯಮಗಳಿಗೆ ಹೇಳಿಕೆ ನೀಡಲು ಸಾಧ್ಯವಿಲ್ಲ. ಮುಡಾ ಹಗರಣ ಆಗಿದೆ ಎಂದಿದ್ದರೆ ಅದಕ್ಕೆ ಆಧಾರಗಳಿರುತ್ತವೆ. ಇ.ಡಿ. ವರದಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಆತುರಾತುರವಾಗಿ ಕ್ಲೀನ್ ಚಿಟ್ ಪಡೆಯುವ ಕೆಲಸ ಮಾಡಿದ್ದಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಹೇಳಿದರು.
ರಾಜ್ಯಾಧ್ಯಕ್ಷರ ವಿಚಾರಕ್ಕೆ ಬಂದರೆ, ಯಾರೋ ಒಂದಾರು ಜನ ಪ್ರಮುಖರು ನನ್ನ ವಿರುದ್ಧ ಹೇಳಿಕೆ ಕೊಡುತ್ತಿದ್ದಾರೆ. ರಾಜ್ಯದ ಉಸ್ತುವಾರಿಗಳೂ ಆದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾಮೋಹನ್ ದಾಸ್, ಸಹ ಉಸ್ತುವಾರಿ ಸುಧಾಕರ ರೆಡ್ಡಿ, ಪೊನ್ನು ರಾಧಾಕೃಷ್ಣ ಅವರು ಮೊನ್ನೆ ಸಭೆಯಲ್ಲಿದ್ದರು. 55- 60 ಜನ ಶಾಸಕರು, ವಿಧಾನಪರಿಷತ್ ಸದಸ್ಯರು, ಸಂಸದರು ಇದ್ದ ಸಭೆ ಅದಾಗಿತ್ತು. ಶೇ 80- 90 ಜನರು ರಾಜ್ಯದ ಅಧ್ಯಕ್ಷರು ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ; ವಿಜಯೇಂದ್ರರನ್ನು ಮುಂದುವರೆಸಬೇಕೆಂದು ಅಭಿಪ್ರಾಯ ನೀಡಿದ್ದಾಗಿ ಪತ್ರಿಕೆಗಳಲ್ಲೂ ಬಂದಿದೆ; ಮಾಧ್ಯಮಗಳಲ್ಲೂ ಬಂದಿದೆ ಎಂದು ಗಮನ ಸೆಳೆದರು.
ಕಾರ್ಯಕರ್ತರು ನನ್ನ ಕೆಲಸದ ಬಗ್ಗೆ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಕೆಲವರು ಅಸಮಾಧಾನ ವ್ಯಕ್ತಪಡಿಸುವುದು ಸಹಜ. ಅವರ ಅಸಮಾಧಾನ ಇರುವುದು ಅಧ್ಯಕ್ಷಗಿರಿ ಬಗ್ಗೆ ಅಲ್ಲ. ನಮ್ಮದು ಪ್ರಜಾಪ್ರಭುತ್ವ ವ್ಯವಸ್ಥೆ; ಜಿಲ್ಲಾಧ್ಯಕ್ಷರ ಚುನಾವಣೆಗಳು ಈಗಾಗಲೇ ನಡೆಯುತ್ತಿವೆ. ರಾಜ್ಯದ ಅಧ್ಯಕ್ಷರ ಹುದ್ದೆಗೂ ಚುನಾವಣೆ ನಡೆಯಲಿದೆ; ಎಲ್ಲದಕ್ಕೂ ಮುಂದಿನ ದಿನಗಳಲ್ಲಿ ಸಮರ್ಪಕ ಉತ್ತರ ಲಭಿಸುತ್ತದೆ ಎಂದು ಹೇಳಿದರು.
ಸ್ಥಳೀಯ ಚುನಾವಣೆಗಳು ಬರುವ ಮುಂಚಿತವಾಗಿ ಪಕ್ಷದ ವರಿಷ್ಠರು ಪಕ್ಷದೊಳಗಿನ ಬೆಳವಣಿಗೆಗಳ ಕುರಿತು ಗಮನಿಸಬೇಕೆಂಬ ಅಪೇಕ್ಷೆ ನನ್ನದು ಮತ್ತು ಕಾರ್ಯಕರ್ತರದು. ಬಿಜೆಪಿಯೊಳಗಿನ ಬೆಳವಣಿಗೆಗಳು ನನಗೂ, ಕಾರ್ಯಕರ್ತರಿಗೂ ಸಂತೋಷ ತಂದಿಲ್ಲ ಎಂದು ಪ್ರಶ್ನೆಗೆ ಉತ್ತರಿಸಿದರು. ಮಾಜಿ ಮುಖ್ಯಮಂತ್ರಿಗಳು, ಹೋರಾಟಗಾರ ಯಡಿಯೂರಪ್ಪನವರ ಬಗ್ಗೆ ಕೆಲವು ಮುಖಂಡರು ಅಪಮಾನ ಮಾಡುವ ರೀತಿಯಲ್ಲಿ ಒಂದು ವರ್ಷದಿಂದ ಹೇಳಿಕೆ ಕೊಡುತ್ತಿದ್ದಾರೆ. ಕಾರ್ಯಕರ್ತರು ಇದರಿಂದ ನೊಂದಿದ್ದಾರೆ ಎಂದು ತಿಳಿಸಿದರು. ಎಲ್ಲ ವಿಷಯಗಳನ್ನು ಸರಿಪಡಿಸುವ ಬಗ್ಗೆ ರಾಷ್ಟ್ರೀಯ ನಾಯಕರ ಗಮನಕ್ಕೆ ತರುವುದಾಗಿ ಹೇಳಿದರು.
ಶ್ರೀರಾಮುಲು ಅವರ ವಿಚಾರದಲ್ಲಿ ಮೊನ್ನೆ ಕೋರ್ ಕಮಿಟಿಯಲ್ಲಿ ಏನು ಚರ್ಚೆ ಆಗಿದೆಯೋ ಅದರ ಕುರಿತ ಶ್ರೀರಾಮುಲು ಅವರ ಮಾತುಗಳನ್ನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಶ್ರೀರಾಮುಲು ಅವರು ಹಿರಿಯರಿದ್ದು ಅವರ ಬಗ್ಗೆ ಗೌರವವಿದೆ. ಒಳಗಡೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾಮೋಹನ್ ದಾಸ್ ಅವರ ಉಪಸ್ಥಿತಿಯಲ್ಲಿ ನಾವೆಲ್ಲರೂ ಒಗ್ಗಟ್ಟಾಗಬೇಕೆಂಬ ಚರ್ಚೆ ನಡೆದಿದೆ. ಬಿಜೆಪಿಯನ್ನು ಬಹುಮತದಿಂದ ಅಧಿಕಾರಕ್ಕೆ ತರಬೇಕೆಂಬ ದೃಷ್ಟಿಯಿಂದ ಕೆಲವೊಂದು ಚರ್ಚೆಗಳು ನಡೆದಿವೆ ಎಂದು ಮತ್ತೊಂದು ಪ್ರಶ್ನೆಗೆ ಉತ್ತರ ಕೊಟ್ಟರು. ಅದನ್ನು ನಾವು ಬಹಿರಂಗವಾಗಿ ಮಾತನಾಡುವುದಿಲ್ಲ. ಶ್ರೀರಾಮುಲು ಅವರು ಕೂಡ ಅಪಾರ್ಥಕ್ಕೆ ಅವಕಾಶ ಮಾಡಿಕೊಡಬಾರದು; ನಾವೆಲ್ಲರೂ ಒಟ್ಟಾಗಿ ಹೋಗೋಣ ಎಂದರು.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ












Click it and Unblock the Notifications