ಅಕಾಲಿಕ ವೈಪರಿತ್ಯ: ಕರ್ನಾಟಕದ ವಿವಿಧೆಡೆ ಮುಂದಿನ ಐದು ದಿನ ಮಳೆ: IMD ಮುನ್ಸೂಚನೆ
ಹವಾಮಾನದಲ್ಲಿ ಉಂಟಾಗುತ್ತಿರುವ ಮಳೆ ಅಕಾಲಿಕ ಬದಲಾವಣೆಗಳು ತೀವ್ರ ಸ್ವರೂಪ ಪಡೆದುಕೊಳ್ಳಲಿವೆ. ಹೀಗಾಗಿ ಕರ್ನಾಟಕದ ವಿವಿಧೆಡೆ ಮುಂದಿನ 05 ದಿನ ಮಳೆ ಸುರಿಯಲಿದೆ ಹವಾಮಾನ ಇಲಾಖೆ ತಿಳಿಸಿದೆ. ವಿವಿರ ಇಲ್ಲಿದೆ.
ಬೆಂಗಳೂರು, ಮಾರ್ಚ್ 14: ಹವಾಮಾನದಲ್ಲಿ ಉಂಟಾಗುತ್ತಿರುವ ಮಳೆ ಅಕಾಲಿಕ ಬದಲಾವಣೆಗಳು ತೀವ್ರ ಸ್ವರೂಪ ಪಡೆದುಕೊಳ್ಳಲಿವೆ. ಹೀಗಾಗಿ ಕರ್ನಾಟಕದ ವಿವಿಧೆಡೆ ಮುಂದಿನ 05 ದಿನ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕೇಂದ್ರವು ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡು ಸೇರಿದಂತೆ ಕರಾವಳಿ ಭಾಗದ ಸಮುದ್ರಮಟ್ಟದಿಂದ 1.5 ಕಿಲೋ ಮೀಟರ್ ಎತ್ತರದಲ್ಲಿ ಸುಳಿಗಾಳಿಯೊಂದು ಸೃಷ್ಟಿಯಾಗಿದೆ. ಇದರ ಪ್ರಭಾವ ಮುಂದಿನ ಮೂರು ದಿನ ಇರಲಿದೆ. ಈ ಕಾರಣಕ್ಕೆ ಇಂದಿನಿಂದ ಮುಂದಿನ ಮೂರು ದಿನ ಕೆಲವೆಡೆ ಹಾಗೂ ಹಲವು ಕಡೆಗಳಲ್ಲಿ ಮುಂದಿನ ಐದು ದಿನ (ಮಾ.18) ಸಾಧಾರಣವಾಗಿ ಮಳೆ ಆಗುವ ನಿರೀಕ್ಷೆಗಳು ದಟ್ಟವಾಗಿದೆ ಎಂದು ವಿಜ್ಞಾನಿ ಡಾ.ಪ್ರಸಾದ್ ತಿಳಿಸಿದ್ದಾರೆ.

ಕರಾವಳಿ ಭಾಗದ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದ ಹಲವು ಕಡೆಗಳಲ್ಲಿ ಮುಂದಿನ ಐದು ಅಲ್ಲಲ್ಲಿ ಹಗುರ ಮಳೆ ಸುರಿಯುವ ಸಾಧ್ಯತೆ ಇದೆ. ಇಲ್ಲಿ ಒಂದೆರಡು ಕಡೆ ಸಾಧಾರಣ ಮಳೆ ಆಗಬಹುದು ಎನ್ನಲಾಗಿದೆ. ಇನ್ನೂ ಉತ್ತರ ಒಳನಾಡಿನಲ್ಲಿ ಇಂದು (ಮಂಗಳವಾರ) ಒಣ ಹವೆ ಮುಂದುವರಿಯಲಿದೆ. ಬುಧವಾರದಿಂದ ಮೂರು ದಿನ (ಮಾರ್ಚ್ 17ರವರೆಗೆ) ಮಳೆ ಬೀಳಲಿದೆ.
ದಕ್ಷಿಣ ಒಳನಾಡಿನ ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ಮುಂತಾದ ಪ್ರದೇಶಗಳಲ್ಲಿ ಬುಧವಾರ, ಗುರುವಾರ ಕಡೆ ಮಳೆ ಆಗುವ ಸಾಧ್ಯತೆ. ಇನ್ನುಳಿದಂತೆ ರಾಜ್ಯ ಕೆಲವು ಪ್ರದೇಶಗಳಲ್ಲಿ ತುಂತುರು ಮಳೆ ಆಗಲಿದೆ ಎಂದು ಕರ್ನಾಟಕದ ಬೆಂಗಳೂರು ಹವಾಮಾನ ಕೇಂದ್ರದ ವಿಜ್ಞಾನಿ ಡಾ.ಪ್ರಸಾದ್ ಮಾಹಿತಿ ನೀಡಿದ್ದಾರೆ.
ಗರಿಷ್ಠ ತಾಪಮಾನದಲ್ಲಿ ತುಸು ಇಳಿಕೆ
ಮಳೆ ಮುನ್ಸೂಚನೆ ಇರುವ ಕಾರಣಕ್ಕೆ ಕರಾವಳಿ ಸೇರಿದಂತೆ ಉತ್ತರ ಒಳನಾಡಿನ ಭಾಗದ ಹಲವೆಡೆ ಗರಿಷ್ಠ ಉಷ್ಣಾಂಶದಲ್ಲಿ ಸುಮಾರು 3 ಡಿಗ್ರಿ ಸೆಲ್ಸಿಯಸ್ ನಷ್ಟು ಕಡಿಮೆ ತಾಪಮಾನ ದಾಖಲಾಗಿದೆ. ಇದು ಮುಂದಿನ ಮೂರ್ನಾಲ್ಕು ದಿನ ಹೀಗೆ ಮುಂದುವರಿಯಲಿದೆ.

ಬಳ್ಳಾರಿಯಲ್ಲಿ ರಾಜ್ಯದ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಕಾರವಾರ, ವಿಜಪುರದಲ್ಲಿ ತಲಾ 35 ಡಿಗ್ರಿ ಸೆಲ್ಸಿಯಸ್ ತಾಪಮಾನ ಕಂಡು ಬಂದಿದೆ. ರಾಜ್ಯದ ಕನಿಷ್ಠ ತಪಮಾನ ಚಿಕ್ಕಮಗಳೂರಿನಲ್ಲಿ 12.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.












Click it and Unblock the Notifications