Karnataka Rain: ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ: ಈ ಜಿಲ್ಲೆಗಳಲ್ಲಿ ಭಾರೀ ಮಳೆ ನಿರೀಕ್ಷೆ
ಬೆಂಗಳೂರು ಡಿಸೆಂಬರ್ 3: ಇಂದು ಭಾನುವಾರ. ಬಹುತೇಕ ಉದ್ಯೋಗಿಗಳಿಗೆ ಇಂದು ರಜಾ ದಿನವಾಗಿರುತ್ತದೆ. ಕೆಲಸದಿಂದ ವಿರಾಮ ಪಡೆದು ಮನೆಯಲ್ಲಿ ಹಾಯಾಗಿ ಇರುವವರಿಗೆ ಹಾಗೂ ವೀಕೆಂಡ್ ಮಜಾ ಮಸ್ತಿ ಅಂತ ಹೊರಗಡೆ ಸುತ್ತಾಡುವವರಿಗೆ ಮೋಡ ಕವಿದ ವಾತಾವರಣ ಮನಸ್ಸಿಗೆ ಹಿತ ನೀಡಿದೆ.
ರಾಜ್ಯದಲ್ಲಿ ಈ ಬಾರಿ ಸಕಾಲಕ್ಕೆ ನಿರೀಕ್ಷೆಯಂತೆ ಮಳೆಯಾಗಿಲ್ಲ. ಚಳಿಗಾಲವೂ ತಡವಾಗಿದೆ ಆರಂಭವಾಗಿದೆ. ಈ ನಡುವೆ ಮಳೆ ಚಳಿ ಒಟ್ಟಿಗೆ ಅನುಭವಿಸುವಂತಾಗಿದೆ. ಕಳೆದ ಕೆಲ ದಿನಗಳಿಂದ ನೆರೆಯ ರಾಜ್ಯ ತಮಿಳುನಾಡಿನಲ್ಲಿ ವರುಣ ಅರ್ಭಟ ಜೋರಾಗಿದೆ. ಕರ್ನಾಟಕದಲ್ಲೂ ವಿವಿಧ ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಬೆಳಗ್ಗೆಯಿಂದಲೂ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದೆ. ಕಳೆದ ದಿನವೂ ರಾಜ್ಯದ ಹಲವೆಡೆ ಮಳೆಯಾಗಿದ್ದು ಬೆಂಗಳೂರಿನಲ್ಲಿ ಇಂದು ಅಲ್ಲಲ್ಲಿ ತುಂತುರು ಮಳೆಯಾಗುತ್ತಿದೆ. ಇದು ಸಂಜೆವರೆಗೂ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.
ಜೊತೆಗೆ ಇಂದು ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ ಜಿಲ್ಲೆಗಳು ಸೇರಿದಂತೆ ದಕ್ಷಿಣ ಕನ್ನಡ ಕರಾವಳಿ ಭಾಗದಲ್ಲೂ ಅಧಿಕ ಮಳೆಯಾಗಲಿದೆ. ಇನ್ನೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತಗ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆ ಸಾಧ್ಯತೆ ಇದೆ. ಹಿಂಗಾರು ಮಳೆ ಇನ್ನೇನು ಕೆಲವೇ ದಿನಗಳಲ್ಲಿ ಮುಕ್ತಾಯವಾಗಲಿದೆ. ಆದ್ರೂ ಈ ವೇಳೆಯ ಭಾರೀ ಮಳೆ ಬರಬಹುದು ಎಂದು ಸೂಚನೆ ನೀಡಿದೆ ಹವಾಮಾನ ಇಲಾಖೆ.
ತಮಿಳುನಾಡಿನಲ್ಲಿ ಭಾರೀ ಮಳೆ ಮುನ್ಸೂಚನೆ
ತಮಿಳುನಾಡು ಸೇರಿದಂತೆ ಆಂಧ್ರಪ್ರದೇಶ ಕರಾವಳಿ ತೀರಕ್ಕೆ ಚಂಡಮಾರುತ ಅಪ್ಪಳಿಸುವ ಭೀತಿ ಎದುರಾಗಿದೆ. ಭಾರತೀಯ ಹವಾಮಾನ ಇಲಾಖೆ ನೀಡಿರುವ ಮನ್ಸೂಚನೆ ಪ್ರಕಾರ, ಒಡಿಶಾ, ಆಂಧ್ರಪ್ರದೇಶ ಹಾಗೂ ತಮಿಳುನಾಡು ಕರಾವಳಿಗೆ ಮೈಚುಂಗ್ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ ಎಂದಿದೆ.
ಈಗಾಗಲೇ ತಮಿಳುನಾಡು, ಆಂಧ್ರಪ್ರದೇಶದ ಹಲವು ಭಾಗದಲ್ಲಿ ತೀವ್ರ ಮಳೆಯಾಗುತ್ತಿದೆ. ತೀವ್ರ ಸ್ವರೂಪದ ಚಂಡ ಮಾರುತದ ಕಾರಣ ತಮಿಳುನಾಡಿನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಚೆನ್ನೈನಲ್ಲಿ ಭಾರೀ ಮಳೆಯ ಕಾರಣ ಶಾಲಾ-ಕಾಲೇಜುಗಳಿಗೆ ರಜೆ ಕೂಡ ಘೋಷಣೆ ಮಾಡಲಾಗಿತ್ತು.












Click it and Unblock the Notifications