ಕರ್ನಾಟಕ ಬಂದ್: ಬೆಳಗಾವಿಯಿಂದಲೇ ಮಾಹಿತಿ ಪಡೆದ ಸಿಎಂ, ಹೋಂ ಮಿನಿಸ್ಟರ್

ಬೆಂಗಳೂರು, ಡಿ. 05: ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿವೆ. ಆರಂಭದಲ್ಲಿ ಬಂದ್‌ಗೆ ರಾಜ್ಯಾದ್ಯಂತ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ರಾಜ್ಯ ಬಿಜೆಪಿ ಕಾರ್ಯಕಾರಣಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಬೆಳಗಾವಿಯಲ್ಲಿದ್ದಾರೆ. ಅಲ್ಲಿಂದಲೇ ಬಂದ್ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತಿದ್ದಾರೆ.

ಬೆಂಗಳೂರು ಮಹಾನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಅವರ ಜೊತೆ ಸಿಎಂ ಯಡಿಯೂರಪ್ಪ ಅವರು ದೂರವಾಣಿಯಲ್ಲಿ ಮಾತನಾಡಿದ್ದಾರೆ ಎಂಬ ಮಾಹಿತಿಯಿದೆ. ಯಾವುದೇ ಅಹಿತಕರ ಘಟನೆಗಳಾಗದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಕಮಲ್ ಪಂಥ್ ಅವರಿಗೆ ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಹೋರಾಟ ಮಾಡುವವರು ಮಾಡಲಿ. ಬಲವಂತವಾಗಿ ಬಂದ್ ಮಾಡುವುದು ಕಂಡು ಬಂದರೆ ಕ್ರಮ ಕೈಗೊಳ್ಳಿ ಎಂದು ಸಿಎಂ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಜೊತೆಗೆ ರಾಜ್ಯ ಗುಪ್ತಚರ ಇಲಾಖೆಯ ಇಲಾಖೆಯ ಎಡಿಜಿಪಿ ಅವರೊಂದಿಗೂ ಸಿಎಂ ಯಡಿಯೂರಪ್ಪ ಅವರು ಮಾತನಾಡಿ ಇಡೀ ರಾಜ್ಯದ ಮಾಹಿತಿಯನ್ನು ಪಡೆದುಕೊಂಡಿದ್ದಾರೆ.

CM And Home Minister Are Getting Information From Senior Police Officers

ರಾಜ್ಯ ಬಿಜೆಪಿ ಕಚೇರಿಗೆ ಭದ್ರತೆ: ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ್ ಭವನಕ್ಕೆ ಪೊಲೀಸ್ ಬಿಗಿ ಬಂದೋಬಸ್ತ್ ಒದಗಿಸಲಾಗಿದೆ. ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ಕರ್ನಾಟಕ ಬಂದ್ ಹಿನ್ನಲೆಯಲ್ಲಿ ಕನ್ನಡ ಸಂಘಟನೆ ಕಾರ್ಯಕರ್ತರು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಬಹುದು ಎಂಬ ಹಿನ್ನೆಲೆಯಲ್ಲಿ ಎಂದಿಗಿಂತ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಹಾಕಲಾಗಿದೆ.

Recommended Video

      ಸತತ 10 t20 ಪಂದ್ಯಗಳನ್ನು ಗೆದ್ದ Kohli ಪಡೆ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+