ಕೋವಿಡ್-19 ಸಂದರ್ಭದಲ್ಲಿನ ಪೊಲೀಸ್ ಸಿಬ್ಬಂದಿಯ ಸೇವೆಯನ್ನು ಶ್ಲಾಘಿಸಿದ ಸಿಎಂ

ಬೆಂಗಳೂರು, ಜೂನ್ 4: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಗೃಹ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಸಭೆಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಗೃಹ ಇಲಾಖೆ ಅಪ್ತರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಪೊಲೀಸ್ ಮಹಾನಿರ್ದೇಶಕ ಮತ್ತು ಮಹಾನಿರೀಕ್ಷಕರಾದ ಪ್ರವೀಣ್ ಸೂದ್ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಕೋವಿಡ್-19 ನಿಯಂತ್ರಣ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ಅತ್ಯುತ್ತಮ ಸೇವೆ ಸಲ್ಲಿಸಿರುವ ಕುರಿತು ಶ್ಲಾಘಿಸಿ, ಮೆಚ್ಚುಗೆ ವ್ಯಕ್ತಪಡಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಲಾಖೆಯ ಸುಧಾರಣೆಗೆ ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದರು.

ರಾಜ್ಯದಲ್ಲಿ ಪೊಲೀಸ್ ಇಲಾಖೆಯು ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು, ರಾಜ್ಯದಲ್ಲಿ ಬದಲಾದ ಸನ್ನಿವೇಶಗಳಲ್ಲಿ ಸಿ.ಇ.ಎನ್ (ಸೈಬರ್ ಕ್ರೈಂ, ಎಕನಾಮಿಕ್ ಅಫೆನ್ಸ್ ಮತ್ತು ನಾರ್ಕೊಟಿಕ್ಸ್) ಠಾಣೆಗಳನ್ನು ಬಲಪಡಿಸಲು ಆದ್ಯತೆ ನೀಡುವಂತೆ ಸಿಎಂ ಸೂಚಿಸಿದರು.

ಫಾರೆನ್ಸಿಕ್ ಲ್ಯಾಬ್ ಬಲಪಡಿಸಲು ಕ್ರಮ

ಫಾರೆನ್ಸಿಕ್ ಲ್ಯಾಬ್ ಬಲಪಡಿಸಲು ಕ್ರಮ

ಅಪರಾಧಗಳನ್ನು ತ್ವರಿತವಾಗಿ ಪತ್ತೆ ಹಚ್ಚುವ ನಿಟ್ಟಿನಲ್ಲಿ ಫಾರೆನ್ಸಿಕ್ ಪ್ರಯೋಗಾಲಯಗಳನ್ನು ಬಲಪಡಿಸಲು ಕ್ರಮ ವಹಿಸಲಾಗುವುದು. ತುರ್ತು ಸ್ಪಂದನೆ ವ್ಯವಸ್ಥೆ ಯೋಜನೆಯಡಿ ವಾಹನ ಖರೀದಿಗೆ ಅಗತ್ಯ ಅನುದಾನ ಒದಗಿಸಲಾಗುವುದು ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದರು.

ವಿವಿಧ ಇಲಾಖೆಗಳಿಗೆ ಹೋಂ ಗಾರ್ಡ್ ನಿಯೋಜನೆ

ವಿವಿಧ ಇಲಾಖೆಗಳಿಗೆ ಹೋಂ ಗಾರ್ಡ್ ನಿಯೋಜನೆ

ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿರುವ ಮೂರು ಸಾವಿರಕ್ಕೂ ಹೆಚ್ಚು ಹೋಂ ಗಾರ್ಡ್ ಗಳನ್ನು ಸೇವೆಯಲ್ಲಿ ಮುಂದುವರಿಸಿ ವಿವಿಧ ಇಲಾಖೆಗಳಿಗೆ ನಿಯೋಜಿಸಲು ತೀರ್ಮಾನಿಸಲಾಯಿತು. ಮುಂದಿನ ದಿನಗಳಲ್ಲಿ ಖಾಸಗಿ ಸಂಸ್ಥೆಗಳಿಗೆ ಹೋಂ-ಗಾರ್ಡ್ ಗಳ ಸೇವೆಯನ್ನು ಒದಗಿಸುವ ಕುರಿತು ಕ್ರಮ ವಹಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದರು.


ಮುಂಗಾರು ಸಂದರ್ಭದಲ್ಲಿ 200 ಮಂದಿ ಎಸ್.ಡಿ.ಆರ್.ಎಫ್ ಸಿಬ್ಬಂದಿಗೆ ತರಬೇತಿ ಪ್ರಾರಂಭವಾಗಿದೆ. ಕೆಲವು ದಿನಗಳಲ್ಲಿ ಅವರನ್ನು ನಾಲ್ಕು ವಿಭಾಗಗಳಲ್ಲಿ ನಿಯೋಜಿಸಲು ಸಾಧ್ಯವಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಕಾರಾಗೃಹದಲ್ಲಿ ಮುನ್ನೆಚ್ಚರಿಕೆ

ಕಾರಾಗೃಹದಲ್ಲಿ ಮುನ್ನೆಚ್ಚರಿಕೆ

ಕಾರಾಗೃಹಗಳಲ್ಲಿ ಕೋವಿಡ್-19 ಸಂದರ್ಭದಲ್ಲಿ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಒಂದೇ ಒಂದು ಪ್ರಕರಣ ವರದಿಯಾಗಿಲ್ಲ. 5005 ಮಂದಿಯನ್ನು ಜಾಮೀನಿನ ಮೇಲೆ ಹಾಗೂ ಪೆರೋಲ್ ಮೇಲೆ ಬಿಡುಗಡೆ ಮಾಡಲಾಗಿದೆ. ಕಾರಾಗೃಹಗಳಲ್ಲಿ ಬಂಧಿಗಳ ದಟ್ಟಣೆಯನ್ನು ಶೇ. 110 ರಿಂದ ಶೇ. 95 ಕ್ಕೆ ಇಳಿಸಲಾಗಿದೆ.

ಗೃಹ ಇಲಾಖೆಯಡಿ ಬರುವ ಎಲ್ಲ ಇಲಾಖೆಗಳ ವಿವಿಧ ಮೂಲ ಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದಂತೆ ವಸ್ತುಸ್ಥಿತಿ ಆಧರಿಸಿ, ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶಿಸಿದರು.

ದುರುಪಯೋಗ ಆಗಬಾರದು

ದುರುಪಯೋಗ ಆಗಬಾರದು

ರಾಜ್ಯದಲ್ಲಿ ವಿವಿಧ ಸರ್ಕಾರಿ ಸಂಸ್ಥೆಗಳಲ್ಲಿ ಬೃಹತ್ ಮೊತ್ತದ ಅನುದಾನವನ್ನು ಬ್ಯಾಂಕಿನಲ್ಲಿ ಠೇವಣಿ ಇಡುವ ಸಂದರ್ಭದಲ್ಲಿ ಯಾವುದೇ ರೀತಿಯ ದುರುಪಯೋಗವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ದುರುಪಯೋಗಗೊಂಡ ಪ್ರಕರಣಗಳಲ್ಲಿ ಅಧಿಕಾರಿಗಳ ವಿರುದ್ಧ ಕಠಿಣ ಶಿಸ್ತು ಕ್ರಮ ತೆಗೆದುಕೊಳ್ಳಬೇಕೆಂದು ಸೂಚಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+