ರಾಜ್ಯ ಬಜೆಟ್‌ಗೆ ಸಿದ್ಧತೆ ಶುರು; ಬಜೆಟ್ ಮಂಡನೆ ಯಾವಾಗ?

ಬೆಂಗಳೂರು, ಫೆಬ್ರುವರಿ 10: ಕೇಂದ್ರ ಬಜೆಟ್ ಮಂಡನೆಯಾದ ಬೆನ್ನಲ್ಲೇ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕರ್ನಾಟಕ ರಾಜ್ಯ ಬಜೆಟ್‌ಗೆ ಸಿದ್ಧತೆ ನಡೆಸುತ್ತಿದ್ದು, ಮಾರ್ಚ್ ಮೊದಲ ವಾರದಲ್ಲಿ 2021-22ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಮಂಗಳವಾರ ದಾವಣಗೆರೆ ಹರಿಹರದ ರಾಜನಹಳ್ಳಿಯಲ್ಲಿ ಮಹರ್ಷಿ ವಾಲ್ಮೀಕಿ ಗುರುಪೀಠದ ವಾಲ್ಮೀಕಿ ಉತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು ರಾಜ್ಯ ಬಜೆಟ್ ಕುರಿತು ಪ್ರಸ್ತಾಪಿಸಿದರು.

"ರಾಜ್ಯ ಬಜೆಟ್‌ಗೆ ಸಿದ್ಧತೆ ನಡೆಸಲು ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಒಳಗೊಂಡಂತೆ ಎಲ್ಲಾ ಕ್ಷೇತ್ರಗಳಿಂದ ಮಾಹಿತಿಗಳನ್ನು ಪಡೆಯಲಾಗುತ್ತಿದೆ" ಎಂದು ತಿಳಿಸಿದರು.

CM B S Yediyurappa Likely To Present Karnataka Budget for FY 2021-22 In First Week Of March

ಕಳೆದ ಒಂದು ವರ್ಷದಿಂದಲೂ ಕೊರೊನಾ ಸೋಂಕಿನಿಂದಾಗಿ ರಾಜ್ಯದ ಆದಾಯಕ್ಕೆ ಭಾರೀ ಹೊಡೆತ ಬಿದ್ದಿದೆ. ಕಳೆದ ಮೂರು ತಿಂಗಳಿನಿಂದ ಆರ್ಥಿಕತೆ ಸ್ವಲ್ಪ ಚೇತರಿಕೆ ಹಾದಿಯಲ್ಲಿದೆ. ಹೀಗಾಗಿ ರಾಜ್ಯದ ಸದ್ಯದ ಆರ್ಥಿಕ ಸ್ಥಿತಿಗತಿಯನ್ನಾಧರಿಸಿ ಉತ್ತಮ ಬಜೆಟ್ ಮಂಡಿಸುವ ತಯಾರಿ ನಡೆಯುತ್ತಿದೆ. ಶೀಘ್ರವೇ ನಿಖರ ದಿನಾಂಕವನ್ನು ಘೋಷಿಸಲಾಗುವುದು ಎಂದು ಹೇಳಿದರು.

ಫೆಬ್ರುವರಿ 1ರಂದು ಕೇಂದ್ರ ಬಜೆಟ್ ಮಂಡನೆಯಾಗಿತ್ತು.

Recommended Video

      ಶಿಕ್ಷಣ ಸಚಿವರಿಂದ ಮಹತ್ವದ ನಿರ್ಧಾರ! | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+