• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಿರತೆ ದಾಳಿ: ಮೃತಪಟ್ಟವರ ಕುಟುಂಬದವರಿಗೆ 15 ಲಕ್ಷ ರೂ.ಗಳ ಪರಿಹಾರ: ಸಿಎಂ

|
Google Oneindia Kannada News

ಬೆಂಗಳೂರು, ಡಿಸೆಂಬರ್ 3: ಚಿರತೆ ದಾಳಿಯಿಂದ ಮೃತಪಟ್ಟ ಕುಟುಂಬ ದವರಿಗೆ 15 ಲಕ್ಷ ರೂ.ಗಳ ಪರಿಹಾರ ವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ನಗರದಲ್ಲಿ ಶನಿವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಆನೆ ದಾಳಿಯಿಂದ ಮೃತಪಟ್ಟ ಕುಟುಂಬದವರಿಗೆ ನೀಡಿದಂತೆ ಚಿರತೆ ದಾಳಿಯಲ್ಲಿ ಮೃತಪಟ್ಟವರ ಕುಟುಂಬಕ್ಕೂ ಪರಿಹಾರ ಒದಗಿಸಲಾಗುವುದು. ಮೊದಲು ಕಾಡುಪಕ್ಕದಲ್ಲಿ ಆಗುತ್ತಿತ್ತು. ಈಗ ಬೆಂಗಳೂರಿನ ಆಸುಪಾಸಿನಲ್ಲಿ ಆಗುತ್ತಿರುವುದನ್ನು ಅರಣ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದೆ.

ಕಳೆದ ಹಲವಾರು ದಿನಗಳಿಂದ ಅದರ ಬೇಟೆಯಾಡಲು ಪ್ರಯತ್ನ ಮಾಡಲಾಗುತ್ತಿದ್ದು ಅದಕ್ಕೆ ಬಲೆಯನ್ನೂ ಹಾಕಲಾಗಿದೆ. ಅದನ್ನು ಜೀವಂತವಾಗಿ ಹಿಡಿದು ಕಾಡಿಗೆ ಬಿಡಲು ಇಲಾಖೆಗೆ ಸೂಚನೆ ನೀಡಿರುವುದಾಗಿ ತಿಳಿಸಿದರು.


ಬೆಂಗಳೂರು ಹಾಗೂ ಮೈಸೂರು ವಲಯದಲ್ಲಿ ಆನೆ ಕಾಡಿದಾರ್ ಸುತ್ತಮುತ್ತ ಚಿರತೆಗಳೂ ಇವೆ. ಚಿರತೆ ದಾಳಿ ಆಗುತ್ತಿರುವುದನ್ನು ತಡೆಯಲು ವಿಶೇಷ ತಂಡವನ್ನು ರಚಿಸಲಾಗಿದ್ದು, ನಿರ್ದಿಷ್ಟವಾಗಿ ಕ್ರಮಕೈಗೊಳ್ಳಲು ತಿಳಿಸಲಾಗಿದೆ. ಅವುಗಳನ್ನು ನಿಯಂತ್ರಿಸಲು ಹಾಗೂ ಕಾಡು ಬಿಟ್ಟು ಆಚೆ ಬಂದಿರುವ ಚಿರತೆಗಳನ್ನು ಹಿಡಿಯಲು ತಂಡ ಕಾರ್ಯಾಚರಣೆ ಮಾಡಲಿದೆ ಎಂದರು.
Death in leopard attack: Rs 15 lakh solatium says CM Basavaraja Bommai

ಹಿನ್ನೆಲೆ.?

ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ಎಸ್.ಕೆಬ್ಬೆಹುಂಡಿ ಗ್ರಾಮದ ರಮೇಶ್ ನಾಯಕ ಎಂಬುವರ ಪುತ್ರಿ ಪಟ್ಟಣದ ಸರ್ಕಾರಿ ಮಹಿಳಾ ಕಾಲೇಜಿನ ವಿದ್ಯಾರ್ಥಿನಿ ಮೇಘನಾ (22) ಚಿರತೆ ದಾಳಿಗೆ ತುತ್ತಾಗಿದ್ದಾಳೆ.

ಯುವತಿ ಬಹಿರ್ದೆಸೆ ಹೋಗಿದ್ದ ಸಮಯದಲ್ಲಿ ಚಿರತೆ ದಾಳಿ ನಡೆಸಿದೆ ಎಂದು ಹೇಳಲಾಗುತ್ತಿದೆ. ಹೆಚ್ಚಿನ ಚಿಕಿತ್ಸೆಗಾಗಿ ಯುವತಿಯನ್ನು ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಯುವತಿ ಮೃತಪಟ್ಟಿದ್ದಾಳೆ.

English summary
Chief Minister Basavaraj Bommai said Rs 15 lakh solatium will be paid to families of those killed in leopard attack.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X