ಭಾರತದ ಗಾನ ಕೋಗಿಲೆ ಹಾಡು ನಿಲ್ಲಿಸಿದೆ; ಬಸವರಾಜ ಬೊಮ್ಮಾಯಿ
ಬೆಂಗಳೂರು, ಫೆಬ್ರವರಿ 06; ಖ್ಯಾತ ಗಾಯಕಿ ಲತಾ ಮಂಗೇಷ್ಕರ್ ಭಾನುವಾರ ವಿಧಿವಶರಾದರು. ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವಾರು ಗಣ್ಯರು ಲತಾ ಮಂಗೇಷ್ಕರ್ ನಿಧನಕ್ಕೆ ಸಂತಾಪ ಸೂಚಿಸಿದರು.
ಕೋವಿಡ್ ಸೋಂಕು ತಗುಲಿದ್ದ ಲತಾ ಮಂಗೇಷ್ಕರ್ (92) ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ಜನವರಿ 8ರಂದು ದಾಖಲಾಗಿದ್ದರು. ಐಸಿಯಿನಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಭಾನುವಾರ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲತಾ ಮಂಗೇಷ್ಕರ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. "ಲತಾ ಮಂಗೇಷ್ಕರ್ ಅವರ ಹಾಡುಗಳು ಕೇವಲ ಸಿನಿಮಾಕ್ಕೆ ಮಾತ್ರ ಸೀಮಿತವಾಗಿರಲಿಲ್ಲ. ಭಜನೆಗಳು, ದೇಶಭಕ್ತಿ ಗೀತೆಗಳನ್ನು ಹಾಡಿದ್ದಾರೆ. ಅವರು ಹಾಡಿರುವ ಏ ಮೇರಾ ವತನ್ ಕೀ ಹಾಡು ಕೇಳಿದರೆ ಈಗಲೂ ಕಣ್ಣಲ್ಲಿ ನೀರು ಬರುತ್ತದೆ" ಎಂದರು.
"ಅವರ ಹಾಡು ಕೇಳಿದರೆ ದೇಶ ಭಕ್ತಿ ಉಕ್ಕಿ ಬರಲಿದೆ. ಅವರಿಗೆ ಕನ್ನಡದ ನಂಟು ಸಹ ಇದೆ, ಕನ್ನಡ ಹಾಡು ಸಹ ಹಾಡಿದ್ದಾರೆ. ಭಾರತದ ಗಾನ ಕೋಗಿಲೆ ಹಾಡು ನಿಲ್ಲಿಸಿರುವುದು ಬಹಳ ದುಃಖದ ಸಂಗತಿ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಲತಾ ಮಂಗೇಷ್ಕರ್ ಸದಾ ನಮ್ಮ ನೆನಪಿನ ಅಂಗಳದಲ್ಲಿ ಇರಲಿದ್ದಾರೆ" ಎಂದು ಬಸವರಾಜ ಬೊಮ್ಮಾಯಿ ಹೇಳಿದರು.
"ಎಲ್ಲಿಯವರೆಗೆ ಈ ಭೂಮಿ ಮೇಲೆ ಸಂಗೀತ ಇರುತ್ತದೆ, ಹಾಡುಗಾರಿಕೆ ಇರುತ್ತದೋ ಅಲ್ಲಿಯವರೆಗೆ ಲತಾ ಮಂಗೇಷ್ಕರ್ ಹೆಸರು ಚಿರಸ್ಥಾಯಿಯಾಗಿ ಇರುತ್ತದೆ. ನಾವೆಲ್ಲರೂ ಅವರ ಹಾಡನ್ನು ಕೇಳಿಕೊಂಡೇ ಬೆಳೆದವರು. ಸಾರಸ್ವತ ಲೋಕದ ತಾರೆ ಮಂಗೇಷ್ಕರ್ ಸದಾ ಮಿನುಗತಿರಲಿ" ಎಂದರು.
|
ಎಚ್. ಡಿ. ದೇವೇಗೌಡ ಸಂತಾಪ
ಗಾಯಕಿ ಲತಾ ಮಂಗೇಷ್ಕರ್ ನಿಧನಕ್ಕೆ ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಎಚ್. ಡಿ. ದೇವೇಗೌಡ ಸಂತಾಪ ಸೂಚಿಸಿದ್ದಾರೆ. "ಅವರ ಧ್ವನಿಯಲ್ಲಿ ಈ ದೇಶದ ಆತ್ಮ ಆಡಗಿತ್ತು. ಅವರ ಹಾಡುಗಳು ನಮ್ಮೊಂದಿಗೆ ಸದಾ ಇರಲಿವೆ" ಎಂದು ದೇವೇಗೌಡರು ಸಂತಾಪ ಸಂದೇಶದಲ್ಲಿ ಹೇಳಿದ್ದಾರೆ.
|
ಆರಗ ಜ್ಞಾನೇಂದ್ರ ಸಂತಾಪ
ಗಾಯಕಿ ಲತಾ ಮಂಗೇಷ್ಕರ್ ನಿಧನಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಸಹ ಸಂತಾಪ ಸೂಚಿಸಿದ್ದಾರೆ. "ಗಾನ ಕೋಗಿಲೆ, ಭಾರತರತ್ನ ಲತಾ ಮಂಗೇಶ್ಕರ್ ಅವರ ನಿಧನದ ವಾರ್ತೆ ತೀವ್ರ ದುಃಖ ತಂದಿದೆ. ಏಳು ದಶಕಗಳ ಕಾಲ ತಮ್ಮ ಗಾನಸುಧೆಯಿಂದ ಸಂಗೀತ ಜಗತ್ತನ್ನು ಶ್ರೀಮಂತಗೊಳಿಸಿದ ಅವರ ನಿಧನ, ಕಲಾ ಲೋಕಕ್ಕೆ ತುಂಬಲಾರದ ನಷ್ಟ" ಎಂದು ಹೇಳಿದ್ದಾರೆ.
ಸಚಿವ ಶ್ರೀರಾಮುಲು ಸಂತಾಪ
ಸಾರಿಗೆ ಸಚಿವ ಬಿ. ಶ್ರೀರಾಮುಲು ಸಹ ಲತಾ ಮಂಗೇಷ್ಕರ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. "ಲತಾ ಮಂಗೇಶ್ಕರ್ ರವರು ವಿಧಿವಶರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಿ, ಕುಟುಂಬಸ್ಥರಿಗೆ, ಅಭಿಮಾನಿಗಳಿಗೆ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ" ಎಂದು ಹೇಳಿದ್ದಾರೆ.
|
ಬಿ. ವೈ. ರಾಘವೇಂದ್ರ ಸಂತಾಪ
ಶಿವಮೊಗ್ಗ ಸಂಸದ ಬಿ. ವೈ. ರಾಘವೇಂದ್ರ ಲತಾ ಮಂಗೇಷ್ಕರ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. "ಭಾರತದ ಗಾನ ವಿಶಾರದೆ, ' ನೈಟಿಂಗೇಲ್ ಆಫ್ ಇಂಡಿಯಾ' ಬಿರುದನ್ನು ಗಳಿಸಿದ್ದ ಭಾರತರತ್ನ ಲತಾ ಮಂಗೇಶ್ಕರ್ ಅವರ ನಿಧನದಿಂದ ಇಡೀ ಭಾರತೀಯ ಸಂಗೀತ ಕ್ಷೇತ್ರಕ್ಕೆ ಬಹುದೊಡ್ಡ ನಷ್ಟವಾಗಿದೆ. ತಮ್ಮ 13 ನೆಯ ವಯಸ್ಸಿನಲ್ಲಿ ಗಾನ ಪಯಣವನ್ನು ಆರಂಭಿಸಿ 7 ದಶಕಗಳ ಕಾಲ ಸುಮಾರು 30,000 ಹಾಡುಗಳಿಗೆ ಮಾಧುರ್ಯವನ್ನು ನೀಡಿದ್ದರು" ಎಂದು ಹೇಳಿದ್ದಾರೆ.
|
ಕಂಠ ಸಿರಿಯ ಮೂಲಕ ನಮ್ಮೊಳಗೆ ಲತಾ ದೀದಿ ಅಜರಾಮರ
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. 'ಮಧುರ ಕಂಠದ ಮೂಲಕ ದಶಕಗಳಿಂದ ಜನಮನವನ್ನು ರಂಜಿಸಿದ್ದಗಾನಕೋಗಿಲೆಲತಾ ಮಂಗೇಶ್ಕರ್ ಸಾವು ನನ್ನಂತಹ ಕೋಟ್ಯಂತರ ಅಭಿಮಾನಿಗಳ ಮನಸ್ಸನ್ನು ಆಘಾತಕ್ಕೀಡು ಮಾಡಿದೆ.ನಮ್ಮನ್ನು ಅಗಲಿ ಹೋದರೂ ಅಮರಕಂಠ ಸಿರಿಯ ಮೂಲಕ ನಮ್ಮೊಳಗೆ ಲತಾ ದೀದಿ ಅಜರಾಮರ.ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುವೆ' ಎಂದು ಹೇಳಿದ್ದಾರೆ.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications