ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 5000 ಕೋಟಿ ರೂಪಾಯಿ

|
Google Oneindia Kannada News

ಕಲಬುರಗಿ, ಸೆಪ್ಟೆಂಬರ್ 17: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಮುಂದಿನ ವರ್ಷಗಳಲ್ಲಿ 5000 ಕೋಟಿ ರೂಪಾಯಿ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಕಲಬುರಗಿ ಎನ್ ವಿ ಮೈದಾನದ ಸಾರ್ವಜನಿಕ ಸಮಾವೇಶದಲ್ಲಿ ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಹಾಗೂ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ಭಾಗವು ಐತಿಹಾಸಿಕ ಘಟನೆಗಳಿಗೆ ಸಾಕ್ಷಿಯಾಗಿದೆ. ಕಲ್ಯಾಣ ಕರ್ನಾಟಕವನ್ನು ಮುಖ್ಯ ವಾಹಿನಿಗೆ ಸೇರಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು.

ಕಲ್ಯಾಣ ಕರ್ನಾಟಕದ ಅಮೃತ ಮಹೋತ್ಸವ: ಕಲಬುರಗಿಯಲ್ಲಿ ಸಿಎಂ ಧ್ವಜಾರೋಹಣಕಲ್ಯಾಣ ಕರ್ನಾಟಕದ ಅಮೃತ ಮಹೋತ್ಸವ: ಕಲಬುರಗಿಯಲ್ಲಿ ಸಿಎಂ ಧ್ವಜಾರೋಹಣ

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ನಾವು ಸಂಕಲ್ಪ ಮಾಡಿದ್ದೇವೆ. ಹಲವಾರು ಜನರು ಭರವಸೆ ಕೊಟ್ಟು ಹೋಗಿದ್ದಾರೆ. ಆದರೆ ನಾವು ನಿರಂತರವಾಗಿ ಕೆಲಸ ಮಾಡುವ ಮೂಲಕ ಈ ಭಾಗದ ಸಂಪೂರ್ಣ ಅಭಿವೃದ್ದಿ ಮಾಡುತ್ತೇವೆ. ಜನರು ಸಮಸ್ಯೆಗಳೊಂದಿಗೆ ಜೀವನ ನಡೆಸುತ್ತಿದ್ದಾರೆ. ಈ ಸಮಸ್ಯೆಯ ಬಗ್ಗೆ ಚರ್ಚೆ ಮಾಡುವುದಕ್ಕೂ, ಅದರೊಂದಿಗೆ ವಾಸ ಮಾಡುವುದಕ್ಕೂ ವ್ಯತ್ಯಾಸವಿದೆ. ಸಮಸ್ಯೆಗಳ ಪರಿಹಾರ ಜನರ ನಡುವೆಯೇ ಇದೆ. ಜನರ ಮಧ್ಯೆ ಓಡಾಡಿ, ಸಮಸ್ಯೆಗೆ ಪರಿಹಾರ ಕಂಡುಕೊಂಡು ಅದನ್ನು ಅನುಷ್ಠಾನ ಮಾಡಬೇಕು. ಅದೇ ನಿಜವಾದ ಜನಪರ ಸರ್ಕಾರ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಬದಲಾವಣೆ ಪರ್ವದ ಬಗ್ಗೆ ಸಿಎಂ ಬೊಮ್ಮಾಯಿ ಮಾತು

ಬದಲಾವಣೆ ಪರ್ವದ ಬಗ್ಗೆ ಸಿಎಂ ಬೊಮ್ಮಾಯಿ ಮಾತು

ಕಲ್ಯಾಣ ಕರ್ನಾಟಕದ ಪಾಲಿಗೆ ಬದಲಾವಣೆಯ ಕಾಲ ಬಂದಿದೆ. ಜನರು ಜಾಗೃತರಾಗಿದ್ದಾರೆ. ಈ ಭಾಗದಲ್ಲಿ ಎಲ್ಲಾ ವರ್ಗದ ಜನ ವಾಸಿಸುತ್ತಾರೆ. ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗದ ಜನರು ದೊಡ್ಡ ಸಂಖ್ಯೆಯಲ್ಲಿ ಜೀವನ ಕಟ್ಟಿಕೊಂಡಿದ್ದಾರೆ. ಅವರೆಲ್ಲರಿಗೂ ಮನೆ, ಗ್ರಾಮಗಳಿಗೆ ರಸ್ತೆ ಸಂಪರ್ಕ, ಶಾಲೆಗಳು, ಆಸ್ಪತ್ರೆ ಗಳನ್ನು ಒದಗಿಸಿದಾಗ ಆರೋಗ್ಯಕರ, ವಿಶ್ವಾಸಯುತ ಜೀವನ ನಡೆಸಲು ಸಾಧ್ಯವಾಗುತ್ತದೆ. ನಮ್ಮ ಸರ್ಕಾರ ಈ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಸಂಕಲ್ಪ ಮಾಡಿದೆ. ಕಳೆದ ಸೆಪ್ಟೆಂಬರ್ 17ರಂದು 3000 ಕೋಟಿ ರೂ.ಗಳನ್ನು ನೀಡುವುದಾಗಿ ಭರವಸೆ ನೀಡಿದಂತೆ ಈ ಬಾರಿಯ ಬಜೆಟ್ ನಲ್ಲಿ ಅನುದಾನ ಒದಗಿಸಲಾಗಿದೆ. ಅದಕ್ಕೆ ಅನುಮೋದನೆ ನೀಡಿ ಕಾಮಗಾರಿಗಳಿಗೆ ಚಾಲನೆ ನೀಡಲು ಇಲ್ಲಿಗೆ ಬಂದಿರುವುದಾಗಿ ಸಿಎಂ ತಿಳಿಸಿದರು.

ಈ ಭಾಗದ ಮನೆ ಮನೆಯಲ್ಲೂ ಕಲ್ಯಾಣ ಕಾರ್ಯ

ಈ ಭಾಗದ ಮನೆ ಮನೆಯಲ್ಲೂ ಕಲ್ಯಾಣ ಕಾರ್ಯ

ಕಲ್ಯಾಣ ಕರ್ನಾಟಕದ ಉದ್ದಗಲಕ್ಕೂ 2100 ಶಾಲಾ ಕೊಠಡಿಗಳಿಗೆ ಚಾಲನೆ ನೀಡುತ್ತಿದ್ದೇವೆ. ಕರ್ನಾಟಕ ಉದಯವಾದ ಮೇಲೆ ಇಷ್ಟು ಶಾಲಾ ಕೊಠಡಿಗಳು ನಿರ್ಮಾಣ ಆಗಿರಲಿಲ್ಲ. ರಾಜ್ಯದಲ್ಲಿ ಒಟ್ಟು 8000 ಕೊಠಡಿ ಕಟ್ಟಲಾಗುತ್ತಿದೆ. ಮುಂದಿನ ಆಗಸ್ಟ್ 15ರೊಳಗೆ ಶೇ.100 ರಷ್ಟು ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಶೌಚಾಲಯಗಳನ್ನು ನಿರ್ಮಿಸಲು ಆದೇಶಿಸಲಾಗಿದೆ. 2500 ಅಂಗನವಾಡಿಗಳಿಗೆ ಮಂಜೂರಾತಿ ನೀಡಿ, ಚಾಲನೆ ಕೊಡಲಾಗಿದೆ. ಪೌಷ್ಟಿಕ ಆಹಾರ ಹಾಗೂ ಶಿಕ್ಷಣದ ಸಶಕ್ತೀಕರಣ ಮಾಡಲಾಗುತ್ತಿದೆ.

ಸರ್ಕಾರವು ಕಲ್ಯಾಣ ಕರ್ನಾಟಕದ ಅಭಿವೃದ್ದಿ ಮಾಡುವ ಮೂಲಕ ಈ ಭಾಗದ ಪ್ರತಿ ಮನೆಯಲ್ಲಿಯೂ ಕಲ್ಯಾಣವಾಗಬೇಕು. ರಾಜ್ಯದ ಬೇರೆ ಭಾಗ ಅಭಿವೃದ್ದಿ ಆಗುತ್ತಿರುವಂತೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಾಡಲಾಗುವುದು. ನವ ಕರ್ನಾಟಕದ ಮೂಲಕ ನವ ಭಾರತ ನಿರ್ಮಾಣ ಮಾಡುವುದು ನಮ್ಮ ಘೋಷವಾಕ್ಯ ಹಾಗೂ ಗುರಿಯಾಗಿದೆ. ಈ ಭಾಗದ ಅಭಿವೃದ್ದಿಯೊಂದಿಗೆ ಜನರನ್ನು ಪಾಲುದಾರರನ್ನಾಗಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

1000 ಸ್ತ್ರೀ ಶಕ್ತಿ ಸಂಘಕ್ಕೆ 1.50 ಲಕ್ಷ ಅನುದಾನ

1000 ಸ್ತ್ರೀ ಶಕ್ತಿ ಸಂಘಕ್ಕೆ 1.50 ಲಕ್ಷ ಅನುದಾನ

ಕಲ್ಯಾಣ ಕರ್ನಾಟಕದಲ್ಲಿ ವಿಶೇಷ ಅನುದಾನ ನೀಡಿ 1000 ಗ್ರಾಮಗಳ ಸ್ತ್ರೀ ಶಕ್ತಿ ಸಂಘಕ್ಕೆ 1.50 ಲಕ್ಷ ಅನುದಾನ ನೀಡಿ ಸ್ವಯಂ ಉದ್ಯೋಗ ನೀಡಲು ಸ್ತ್ರೀ ಸಾಮರ್ಥ್ಯ ಯೋಜನೆಯನ್ನು ಪ್ರಥಮ ಬಾರಿಗೆ ಮಹಿಳೆಯರಿಗಾಗಿ ಜಾರಿಗೊಳಿಸಲಾಗುತ್ತಿದೆ. ಸ್ವಾಮಿ ವಿವೇಕಾನಂದ ಯುವ ಸಂಘಗಳ ಮೂಲಕ ಪ್ರತಿ ಗ್ರಾಮದಲ್ಲಿ ಯುವಕರ ಸಂಘಟನೆ ಮಾಡಲಾಗುವುದು.

5000 ಶಿಕ್ಷಕರ ನೇಮಕಾತಿ ಯನ್ನು ಮುಂದಿನ ಮಾರ್ಚ್ ಒಳಗೆ ಮಾಡಲಾಗುವುದು. 11000 ಶಿಕ್ಷಕರ ನೇಮಕ ಮಾಡುವ ಬದ್ಧತೆ ನಮ್ಮದು. ವ್ಯವಸ್ಥೆಯಲ್ಲಿ ನಂಬಿಕೆ ಪುನರ್ ಸ್ಥಾಪನೆಗೆ ಬದ್ಧತೆಯಿಂದ ಕೆಲಸ ಮಾಡಲಾಗುವುದು ಎಂದು ಹೇಳಿದರು.

ಬೀದರ್ ಜಿಲ್ಲೆಗಾಗಿ ಕಾಗಿಣಾ ಯೋಜನೆ

ಬೀದರ್ ಜಿಲ್ಲೆಗಾಗಿ ಕಾಗಿಣಾ ಯೋಜನೆ

ನೀರಾವರಿ ಯೋಜನೆಯಡಿ ನಾರಾಯಣಪುರ ಬಲದಂಡೆ ಯೋಜನೆ ಅಡಿಯಲ್ಲಿ ಹಿಂದೆ ಜಲ ಸಂಪನ್ಮೂಲ ಸಚಿವನಾಗಿದ್ದಾಗ 3000 ಕೋಟಿ ಒಡಗಿಸಿದ್ದನ್ನು ಸ್ಮರಿಸಿದ ಸಿಎಂ ಬೊಮ್ಮಾಯಿ, ಈಗ ಅದನ್ನು ಅನುಷ್ಠಾನಗೊಳಿಸುವ ಕೆಲಸ ಮಾಡುತ್ತಿದ್ದೇವೆ ಎಂದರು. ಬೀದರ್ ಜಿಲ್ಲೆಗೆ ನೀರು ಕೊಡುವ ಕಾಗಿಣಾ ಯೋಜನೆ, ಕಲ್ಯಾಣ ಕರ್ನಾಟಕದಲ್ಲಿ ಏತ ನೀರಾವರಿ ಯೋಜನೆಗಳನ್ನು ಜಾರಿಗೊಳಿಸಲಾಗುವುದು. ಕ್ರಾಂತಿ ಪುರುಷ ಬಸವಣ್ಣನವರ ಹೋರಾಟದ ನಾಡು ಇದು. ನಮ್ಮ ನಾಯಕರಾದ ಯಡಿಯೂರಪ್ಪ ಅನುಭವ ಮಂಟಪ ಸ್ಥಾಪನೆಗೆ ಚಾಲನೆ ನೀಡಿದ್ದಾರೆ. ಜಗತ್ತಿನ ಮೊದಲ ಪಾರ್ಲಿಮೆಂಟ್ ಅನುಭವ ಮಂಟಪವನ್ನು ಸ್ಥಾಪಿಸಿ ಜಗತ್ತಿಗೆ ಶರಣರು ಸಾರಿದ ಸಂದೇಶವನ್ನು ಸಾರುವ ಕೆಲಸವನ್ನು ಮಾಡಲಾಗುವುದು ಎಂದು ತಿಳಿಸಿದರು.

ರಾಯಚೂರು ಜಿಲ್ಲೆಗೊಂದು ಉನ್ನತ ವೈದ್ಯಕೀಯ ಸಂಸ್ಥೆ

ರಾಯಚೂರು ಜಿಲ್ಲೆಗೊಂದು ಉನ್ನತ ವೈದ್ಯಕೀಯ ಸಂಸ್ಥೆ

ಕಲಬುರಗಿಯಲ್ಲಿ ಟೆಕ್ಸ್‌ಟೈಲ್ ಪಾರ್ಕ್ ರಾಯಚೂರಿನ ಜನರು ಏಮ್ಸ್ ಬಗ್ಗೆ ಕನಸು ಕಂಡಿದ್ದಾರೆ. ರಾಯಚೂರಿಗೆ ಒಂದು ಉನ್ನತ ಮಟ್ಟದ ಮೈದ್ಯಕೀಯ ಸಂಸ್ಥೆ ಸ್ಥಾಪಿಸಲಾಗುವುದು. ಕಲಬುರಗಿಯಲ್ಲಿ ಸ್ಥಾಪಿಸುವ ಜಯದೇವ ಆಸ್ಪತ್ರೆಯನ್ನು ಪ್ರಧಾನಿ ಮೋದಿಯವರೇ ಉದ್ಘಾಟನೆ ಮಾಡಿಸಲಾಗುವುದು ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು. ಈ ಭಾಗದಲ್ಲಿ ಗುಳೆ ಹೋಗುವ ಜನರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಗುಳೆ ಹೋಗುವುದನ್ನು ತಡೆಯಲಾಗುವುದು, ಸ್ಥಳೀಯವಾಗಿ ಉದ್ಯೋಗ ದೊರಕಿಸಲು ಕೈಗಾರಿಕೆಗಳನ್ನು ಸ್ಥಾಪಿಸಲಾಗುವ ಕೆಲಸ ಮಾಡಲಾಗುವುದು ಎಂದರು. ಕೂಲಿ ಕಾರ್ಮಿಕರ ಮಕ್ಕಳಿಗೆ ವಿದ್ಯಾನಿಧಿ ಯೋಜನೆ ವಿಸ್ತರಿಸಿದ್ದೇವೆ. ಜನರ ಕೈಗೆ ಉದ್ಯೋಗ ದೊರೆತಲ್ಲಿ ಗುಳೇ ಹೋಗುವುದನ್ನು ತಡೆಯಬಹುದು ಎಂದರು.

English summary
CM Basavaraj Bommai announced Grants 5000 crores to to Kalyan Karnataka in next five years. Know More.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X