ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಂಗಳೂರು: ಖಾದಿ ಗ್ರಾಮೋದ್ಯೋಗ ಸಂಸ್ಥೆಗೆ ಆರ್ಥಿಕ ಬಲ ತುಂಬಲಿದ್ದೇವೆ: ಸಿಎಂ ಬೊಮ್ಮಾಯಿ

ಬೆಂಗಳೂರಲ್ಲಿ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಬೃಹತ್ ರಾಷ್ಟ್ರಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನಕ್ಕೆ ಉದ್ಘಾಟಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಖಾದಿ ಉದ್ದಿಮೆದಾರರಿಗೆ ಅಭಯ ನೀಡಿದರು. ಆರ್ಥಿಕ ಬಲದ ಭರವಸೆ ನೀಡಿದರು.

|
Google Oneindia Kannada News

ಬೆಂಗಳೂರು, ಜನವರಿ 26: ಬೆಂಗಳೂರಲ್ಲಿ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಬೃಹತ್ ರಾಷ್ಟ್ರಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನಕ್ಕೆ ಉದ್ಘಾಟಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಖಾದಿ ಉದ್ದಿಮೆದಾರರಿಗೆ ಅಭಯ ನೀಡಿದರು. ಮುಂಬರುವ ಆಯವ್ಯಯದಲ್ಲಿ ಖಾದಿ ಮತ್ತು ಗ್ರಾಮೋದ್ಯೋಗಕ್ಕೆ ವಿಶೇಷವಾದ ಒತ್ತು ನೀಡಲಾಗುವುದು ಎಂದು ಭರವಸೆ ನೀಡಿದರು.

ಗುರುವಾರ ನಡೆದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಖಾದಿಗೆ ಉತ್ತಮ ಭವಿಷ್ಯವಿದೆ. ಯಾರು ಭಯ ಪಡುವ ಅವಶ್ಯಕತೆ ಇಲ್ಲ. ಈ ಬಾರಿಯ ಬಜೆಟ್‌ನಲ್ಲಿ ದುಡಿಯುವ ವರ್ಗಕ್ಕೆ ಮಹತ್ವ ಕೊಡುತ್ತಿದ್ದೇವೆ. ಖಾದಿ ಮತ್ತು ಗ್ರಾಮೋದ್ಯೋಗದಿಂದ ಗ್ರಾಮೀಣ ಭಾಗದಲ್ಲಿ ಉದ್ಯೋಗ ಸೃಷ್ಟಿಯಾಗುತ್ತಿದೆ. ಖಾದಿ ಮತ್ತು ಗ್ರಾಮೋದ್ಯೋಗಕ್ಕೆ ವಿಶೇಷವಾದ ಒತ್ತು, ಹಣಕಾಸಿನ ನೆರವು ನೀಡಲಿದ್ದೇವೆ ಎಂದು ತಿಳಿಸಿದರು.

CM Basavaraj Bommai inaugurated National Exhibition of Khadi and Village Industries in Bengaluru

Rayanna- Bose Statue: ಸರ್ಕಾರಿ ಕಾಲೇಜುಗಳಲ್ಲಿ ರಾಯಣ್ಣ-ಬೋಸ್ ಪ್ರತಿಮೆ ಸ್ಥಾಪನೆಗೆ ಆದೇಶ: ಬೊಮ್ಮಾಯಿ

ಮಹಾತ್ಮ ಗಾಂಧೀಜಿಯವರು ಖಾದಿಗೆ ಮಹತ್ವ ನೀಡಿದ್ದರು. ಸ್ವರಾಜ್ಯದ ಪ್ರತೀಕಾರವಾಗಿ ವಿದೇಶಿ ವಸ್ತುಗಳನ್ನು ಬಹಿಷ್ಕಾರ ಮಾಡಲಾಗಿತ್ತು. ಆ ವೇಳೆ ಸ್ವದೇಶಿ ವಸ್ತುಗಳ ಬಳಕೆ ವಿಚಾರದಲ್ಲಿ ಸ್ಪಂದಿಸಿ ಯಶಸ್ವಿಯಾಗಲು ಸಹಾಯ ಮಾಡಿದ್ದು ಖಾದಿ ಗ್ರಾಮೋದ್ಯೋಗಿಗಳು, ನೇಕಾರರು. ದೊಡ್ಡ ಪ್ರಮಾಣದಲ್ಲಿ ಬಟ್ಟೆ ಉತ್ಪಾದನೆ ಮಾಡಿ ದೇಶಕ್ಕೆ ಕೊಟ್ಟಿದ್ದರು. ಬೃಹತ್ ಪ್ರಮಾಣದ ಜನಸಂಖ್ಯೆಯಿಂದ ಉತ್ಪಾದನೆಯಾಗಿ ಎಲ್ಲರಿಗೂ ಉದ್ಯೋಗ ಸಿಗಬೇಕು ಎಂದು ಮಹಾತ್ಮ ಗಾಂಧಿಜೀಯವರು ಹೇಳಿದ್ದರು. ಇವತ್ತಿಗೂ ಕೃಷಿಯ ನಂತರ ಅತಿಹೆಚ್ಚು ಉದ್ಯೋಗ ನೀಡುತ್ತಿರುವುದು ಖಾದಿ ಗ್ರಾಮೋದ್ಯೋಗ ಕ್ಷೇತ್ರ ಎಂದರು.

ಬದಲಾದ ಇಂದಿನ ತಂತ್ರಜ್ಞಾನ ಸನ್ನಿವೇಶದಲ್ಲಿ ಖಾದಿ ಉದ್ಯಮಕ್ಕೆ ಹಿನ್ನೆಡೆಯಾಗಿದೆ. ಪಾಲಿಸ್ಟರ್ ಬಟ್ಟೆಗಳ ಉಪಯೋಗ ಹೆಚ್ಚಾದಾಗ ಖಾದಿ ಉದ್ಯೋಗಕ್ಕೆ ಹೆಚ್ಚಿನ ತೊಂದರೆ ಆಗಿತ್ತು. ಆದರೆ ಈಗ ಸಾಕಷ್ಟು ಬದಲಾವಣೆಯಾಗಿದೆ. ಎತ್ನಿಕ್ ಉತ್ಪಾದನೆಗೆ ಹೆಚ್ಚು ಬೇಡಿಕೆ ಇದೆ. ಖಾದಿ ಬಟ್ಟೆಗಳು, ಸಾವಯವ ಆಹಾರಕ್ಕೆ ಬೇಡಿಕೆ ಹೆಚ್ಚಾಗುತ್ತಿದೆ. ಅಮೆಜಾನ್ ಹಾಗೂ ಪ್ಲಿಪ್ ಕಾರ್ಟ್ ನಂತಹ ಸಂಸ್ಥೆಗಳು ಖಾದಿ ವಸ್ತುಗಳ ಖರೀದಿಗೆ ಆಸಕ್ತಿ ವಹಿಸಿವೆ. ನೇರವಾಗಿ ಉತ್ಪಾದಕರಿಂದ ಮಾರುಕಟ್ಟೆಗೆ ಕಳುಹಿಸುವ ವ್ಯವಸ್ಥೆ ಮಾಡುತ್ತಿದ್ದೇವೆ ಎಂದು ಧೈರ್ಯ ತುಂಬಿದರು.

CM Basavaraj Bommai inaugurated National Exhibition of Khadi and Village Industries in Bengaluru

ಸ್ತ್ರೀ ಸಾಮರ್ಥ್ಯ ಯೋಜನೆ ಮೂಲಕ ಮಹಿಳೆಯರಿಗೆ 5 ಲಕ್ಷದ ವರೆಗೂ ಧನ ಸಹಾಯ ಮಾಡಿ ಮಹಿಳಾ ಸಂಘಗಳ ಮೂಲಕ ಉತ್ಪಾದನೆಗೆ ಆದ್ಯತೆ ನೀಡಿದ್ದೇವೆ. ಯುವಕರಿಗೆ ಸಂಘಗಳ ಮೂಲಕ ಸ್ವಯಂ ಉದ್ಯೋಗಕ್ಕೆ ಅವಕಾಶ ಕಲ್ಪಿಸಿದ್ದೇವೆ. ಖಾದಿ ಗ್ರಾಮೋದ್ಯೋಗ ಕಾಲಕ್ಕೆ ತಕ್ಕಂತೆ ಡಿಸೈನ್ ಮಾಡಿ ಉತ್ಪಾದನೆ ಮಾಡಬೇಕು ಎಂದು ಹೇಳಿದರು.

ನಿಮ್ಮ ಬೇಡಿಕೆ ಈಡೇರಿಸುವೆ: ಸಿಎಂ
ಖಾದಿ ಗ್ರಾಮೋದ್ಯೋಗ ಸಂಸ್ಥೆಯ ಆರ್ಥಿಕ ಬಲ ತುಂಬಲು ಬಾಕಿ ಇರುವ 74 ಕೋಟಿ ರೂಪಾಯಿಗೆ ಅನುಮೋದನೆ ನೀಡಬೇಕು. ಜೊತೆಗೆ ಬೇರೆ ಬೇರೆ ಕಡೆಯ ದೊಡ್ಡ ದೊಡ್ಡ ಆಸ್ತಿಯ ರಕ್ಷಣೆಗೆ 5 ಕೋಟಿ ರೂಪಾಯಿ ಕೊಡುವಂತೆ ಮನವಿ ಮಾಡಲಾಗಿದೆ. ಈ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುತ್ತೇನೆ.

English summary
CM Basavaraj Bommai inaugurated National Exhibition of Khadi and Village Industries in Bengaluru on Thursday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X