D.Roop vs Rohini Sindhuri: ಇಂದೇ ಸ್ಪಷ್ಟನೆ ಕೇಳಿ ಇಬ್ಬರು ಅಧಿಕಾರಿಗಳಿಗೆ ನೋಟಿಸ್ ನೀಡಲು ಸರ್ಕಾರ ಸೂಚನೆ
ಐಎಎಸ್ ಹಾಗೂ ಐಪಿಎಸ್‌ನ ಇಬ್ಬರು ಮಹಿಳಾ ಅಧಿಕಾರಿಗಳ ಜಾಟಪಟಿ ನಾಡಿನಾದ್ಯಂತ ಜಗಜ್ಜಾಹಿರಾಗಿದೆ. ಈ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ನೋಟಿಸ್ ನೀಡಲು ಮುಂದಾಗಿದೆ.
ಬೆಂಗಳೂರು, ಫೆಬ್ರವರಿ 20: ಐಎಎಸ್ ಹಾಗೂ ಐಪಿಎಸ್‌ನ ಇಬ್ಬರು ಮಹಿಳಾ ಅಧಿಕಾರಿಗಳ ಜಾಟಪಟಿ ನಾಡಿನಾದ್ಯಂತ ಜಗಜ್ಜಾಹಿರಾಗಿದೆ. ಈ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.
ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರ ನಡುವಿನ ಆರೋಪ, ಪ್ರತಿ ಆರೋಪ, ಕಿತ್ತಾಟಗಳು ತಾರಕಕ್ಕೇರಿದೆ. ಈ ಹಿನ್ನೆಲೆ ಇಬ್ಬರು ಅಧಿಕಾರಿಗಳಿಗೆ ನೋಟಿಸ್ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಅವರಿಗೆ ಸೂಚನೆ ನೀಡಿದ್ದಾರೆ.

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರು ತಮ್ಮ ಖಾಸಗಿ ಫೋಟೊಗಳನ್ನು ಐಎಎಸ್ ಪುರುಷ ಅಧಿಕಾರಿಗಳಿಗೆ ಒನ್ ಟು ಒನ್ ಕಳುಹಿಸಿದ್ದಾರೆ. ಫೋಟೋ ಕಳಹಿಸಿದ್ದರ ಹಿಂದಿನ ಸನ್ನಿವೇಶ, ಯಾಕೆ? ಕಳಹಿಸಿದ್ದು ಎಂಬಿತ್ಯಾದಿ ಕುರಿತು ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಅವರು ಪೋಸ್ಟ್ ಹಾಕಿದ್ದರು. ಅದರು ವೈರಲ್ ಆಗುತ್ತಿದ್ದಂತೆ ಸಾಕಷ್ಟು ವಿಚಾರಗಳು ಚರ್ಚೆಗೆ ಬಂದು ಈ ಇಬ್ಬರ ನಡುವಿನ ಜಟಾಪಟಿ ಹೆಚ್ಚಾಯಿತು.
ಇದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಇವತ್ತೇ (ಸೋಮವಾರ) ಇಬ್ಬರಿಗೂ ಸ್ಪಷ್ಟನೆ ಕೇಳಿ ನೋಟಿಸು ಜಾರಿಗೊಳಿಸುವ ಸಾಧ್ಯತೆ ಇದೆ. ಈ ಸಂಬಂಧ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ.

ಪ್ರಕರಣ ಸಂಬಂಧ ರಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಅಧಿಕಾರಿಗಳ ವರ್ತನೆ ಬಹಳ ಬೇಸರ ತರಿಸಿದೆ. ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ಜನ ದೇವಮಾನವರು ಎಂದುಕೊಂಡಿದ್ದಾರೆ. ಆದರೆ ಇವರಿಂದ ಎಲ್ಲಾ ಅಧಿಕಾರಿಗಳಿಗೂ ಅಪಮಾನವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಈಗಾಗಲೇ ಪೊಲೀಸ್ ಮಾಹಾನಿರ್ದೇಶಕರು ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಜೊತೆಗೆ ಚರ್ಚಿಸಲಾಗಿದೆ. ಕಾನೂನು ಚೌಕಟ್ಟಿನೊಳಗೆ ಏನು ಕ್ರಮ ಕೈಗೊಳ್ಳಬೇಕು ಅದನ್ನು ಮುಖ್ಯಮಂತ್ರಿಗಳು ನಿರ್ಧರಿಸುತ್ತಾರೆ. ಈ ಹಿಂದೆ ಸಹ ಈ ಇಬ್ಬರಿಗೆ ನೋಟಿಸ್ ನೀಡಲಾಗಿತ್ತು ಎಂದು ಹೇಳಿದರು.












Click it and Unblock the Notifications