ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking; ಆಲಮಟ್ಟಿ ಡ್ಯಾಂಗೆ ಬಾಗಿನ ಅರ್ಪಿಸಿದ ಬಸವರಾಜ ಬೊಮ್ಮಾಯಿ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 30; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಲಮಟ್ಟಿಯ ಲಾಲ್ ಬಹದ್ದೂರ ಶಾಸ್ತ್ರೀ ಸಾಗರದ ಕೃಷ್ಣಾ ನದಿಗೆ ಶುಕ್ರವಾರ ಗಂಗೆ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದರು.

ಶುಕ್ರವಾರ ಜಲಸಂಪನ್ಮೂಲ ಸಚಿವ ಗೋವಿಂದ‌ ಕಾರಜೋಳ, ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಸಿ. ಸಿ. ಪಾಟೀಲ, ಸಂಸದ ರಮೇಶ ಜಿಗಜಿಣಗಿ ಸೇರಿದಂತೆ ಇತರ ನಾಯಕರ ಜೊತೆ ಸಿಎಂ ಗಂಗೆ ಪೂಜೆ ಸಲ್ಲಿಸಿದರು.

ಕೃಷ್ಣಾ ನದಿ ನೀರನ್ನು ಹೊರಬಿಡದಂತೆ ಪತ್ರ ಬರೆದ ತಮಿಳುನಾಡು ಕೃಷ್ಣಾ ನದಿ ನೀರನ್ನು ಹೊರಬಿಡದಂತೆ ಪತ್ರ ಬರೆದ ತಮಿಳುನಾಡು

ಈ ಸಂದರ್ಭದಲ್ಲಿ ಶಾಸಕರಾದ ಎ. ಎಸ್. ಪಾಟೀಲ ನಡಹಳ್ಳಿ, ಶಿವಾನಂದ ಪಾಟೀಲ, ವಿಧಾನ ಪರಿಷತ್ ಸದಸ್ಯ ಪಿ. ಎಚ್.ಪೂಜಾರ, ಮಾಜಿ ಶಾಸಕರಾದ ಶ್ರಿಕಾಂತ ಕುಲಕರ್ಣಿ, ಎಸ್. ಕೆ. ಬೆಳ್ಳುಬ್ಬಿ, ಅಪ್ಪು ಪಟ್ಟಣಶೆಟ್ಟಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಆಲಮಟ್ಟಿ ಆನಂದ: ಈ ಜಲಾಶಯಕ್ಕೆ ಬೆಂಗಳೂರಿಗರು ಹೇಗೆ ಹೋಗುವುದು? ಆಲಮಟ್ಟಿ ಆನಂದ: ಈ ಜಲಾಶಯಕ್ಕೆ ಬೆಂಗಳೂರಿಗರು ಹೇಗೆ ಹೋಗುವುದು?

CM Basavaraj Bommai offered bagina to Krishna River at Almatti Dam

ಜಲಸಂಪನ್ಮೂಲ ಸಚಿವ ಗೋವಿಂದ‌ ಕಾರಜೋಳ ಆಲಮಟ್ಟಿಯ ಪ್ರವಾಸಿ ಮಂದಿರದಲ್ಲಿ ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ವಿಶೇಷ ಸಭೆ ನಡಿಸಿದರು. ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು.

ಆಲಮಟ್ಟಿ ಡ್ಯಾಂ ಸಂತ್ರಸ್ತರಿಗೆ ಸಲ್ಪ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ!ಆಲಮಟ್ಟಿ ಡ್ಯಾಂ ಸಂತ್ರಸ್ತರಿಗೆ ಸಲ್ಪ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ!

CM Basavaraj Bommai offered bagina to Krishna River at Almatti Dam

ಆಲಮಟ್ಟಿಯಲ್ಲಿ ಬಾಗಿನ ಅರ್ಪಿಸಿದ ಬಳಿಕ ಕೃಷ್ಣಾ ಭಾಗ್ಯ ಜಲ ನಿಗಮದ ಕಚೇರಿಯ ಹಿಂಭಾಗದಲ್ಲಿ ನೂತನ ಪ್ರವಾಸಿಮಂದಿರ ನಿರ್ಮಾಣಕ್ಕೆ ಮುಖ್ಯಮಂತ್ರಿಗಳು ಭೂಮಿಪೂಜೆ ಮಾಡಿದರು.

ಬಾಗಿನ ಅರ್ಪಣೆ ಬಳಿಕ ಮಾತನಾಡಿದ ಬಸವರಾಜ ಬೊಮ್ಮಾಯಿ, "ಕೃಷ್ಣಾ ನದಿ ನೀರು ಹಂಚಿಕೆ ತೀರ್ಪು ಕುರಿತು ಕೇಂದ್ರ ಸರ್ಕಾರ ಶೀಘ್ರವೇ ಅಧಿಸೂಚನೆ ಹೊರಡಿಸಲಿದೆ" ಎಂದು ವಿಶ್ವಾಸ ವ್ಯಕ್ತಪಡಿಸಿದರು.

"ತೀರ್ಪಿನ ಆಕ್ಷೇಪಣೆ ವಿಚಾರಣೆಗೆ ಶೀಘ್ರದಲ್ಲೇ ಸುಪ್ರೀಂಕೋರ್ಟ್‌ನಲ್ಲಿ ವಿಶೇಷ ಪೀಠ ಸ್ಥಾಪನೆಯಾಗಲಿದೆ. ಕರ್ನಾಟಕ ಮತ್ತು ಮಹಾರಾಷ್ಟ್ರ ನ್ಯಾಯಾಧೀಶರು ವಿಚಾರಣೆಯಿಂದ ಹಿಂದೆ ಸರಿದಿದ್ದು, ಹೊಸ ನ್ಯಾಯಾಧೀಶರ ನೇಮಕ್ಕೆ ಅರ್ಜಿ ಸಲ್ಲಿಸಲಾಗಿದೆ. ಮುಂದಿನ ತಿಂಗಳು ವಿಚಾರಣೆ ಆರಂಭವಾಗಲಿದೆ" ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಕೃಷ್ಣಾ ಭಾಗ್ಯ ಜಲ ನಿಗಮ ಕಚೇರಿ ಆಲಮಟ್ಟಿಗೆ ಸ್ಥಳಾಂತರ ಮಾಡುವ ಕಾರ್ಯ ಜನವರಿಯೊಳಗೆ ಪೂರ್ಣಗೊಳ್ಳಲಿದೆ ಎಂದು ಭರವಸೆ ನೀಡಿದರು.

English summary
Karnataka chief minister Basavaraj Bommai offered bagina to Krishna river at Almatti dam, Bagalkot.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X