ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರ ಜನ್ಮದಿನ: ತಂದೆ ತಾಯಿಯ ಸಮಾಧಿಗೆ ಪೂಜೆ ಸಲ್ಲಿಸಿದ ಸಿಎಂ

ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹುಟ್ಟು ಹಬ್ಬದ ಅಂಗವಾಗಿ ಪ್ರಧಾನಿ ಮೋದಿ ಶುಭಹಾರೈಸಿದ್ದಾರೆ. ಬಸವರಾಜ ಬೊಮ್ಮಾಯಿ ಅವರು ಕರ್ನಾಟಕದ ಸರ್ವತೋಮುಖ ಪ್ರಗತಿಗೆ ಶ್ರಮಿಸುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಹುಬ್ಬಳ್ಳಿ, ಜನವರಿ 28: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ 63 ನೇ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿನ ತಮ್ಮ ತಂದೆ ತಾಯಿಯ ಸಮಾಧಿಗೆ ಭೇಟಿ ನೀಡಿ, ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.

ಕರ್ನಾಟಕದ 23ನೇ ಮುಖ್ಯಮಂತ್ರಿಯಾದ ಬಸವರಾಜ್ ಬೊಮ್ಮಾಯಿ ಅವರು ಅಪರೂಪದ ರಾಜಕಾರಣಿಗಳಲ್ಲಿ ಒಬ್ಬರು ಎನಿಸಿಕೊಂಡಿದ್ದಾರೆ. ಬಸವರಾಜ ಬೊಮ್ಮಾಯಿ ಅವರ ಜನ್ಮದಿನದ ಅಂಗವಾಗಿ ಹಲವಾರು ರಾಜಕೀಯ ಗಣ್ಯರು ಶುಭಹಾರೈಸಿದ್ದಾರೆ.

ಬಸವರಾಜ ಬೊಮ್ಮಾಯಿ ಅವರ ಜನ್ಮದಿನಕ್ಕೆ ಶುಭಕೋರಿದ ಪ್ರಧಾನಿ ಮೋದಿ

ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹುಟ್ಟು ಹಬ್ಬದ ಅಂಗವಾಗಿ ಪ್ರಧಾನಿ ಮೋದಿ ಶುಭಹಾರೈಸಿದ್ದಾರೆ. ಬಸವರಾಜ ಬೊಮ್ಮಾಯಿ ಅವರು ಕರ್ನಾಟಕದ ಸರ್ವತೋಮುಖ ಪ್ರಗತಿಗೆ ಶ್ರಮಿಸುತ್ತಿದ್ದಾರೆ. ಅವರು ಜನರ ಸೇವೆಯಲ್ಲಿ ದೀರ್ಘ ಮತ್ತು ಆರೋಗ್ಯಕರ ಜೀವನವನ್ನು ನಡೆಸಲಿ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

CM Basavaraj Bommai Offered Prayers At His Parents Samadhi On Account Of His Birthday At Hubballi

ಇನ್ನೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕನ್ನಡದಲ್ಲಿ ಟ್ವೀಟರ್ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಜನ್ಮದಿನ ಶುಭಾಶಯಗಳನ್ನ ತಿಳಿಸಿದ್ದು, ರಾಜ್ಯದ ಅಭಿವೃದ್ಧಿ ಮತ್ತು ಕಲ್ಯಾಣಕ್ಕಾಗಿ ನಿಮ್ಮ ಪರಿಶ್ರಮ ಹೀಗೆಯೇ ಮುಂದುವರೆಯಲಿ. ನಿಮ್ಮ ಸುದೀರ್ಘ ಮತ್ತು ಆರೋಗ್ಯಪೂರ್ಣ ಜೀವನಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ. ಇನ್ನೂ ಅಮಿತ್ ಶಾ ಅವರು ನನ್ನ ಜನ್ಮದಿನಕ್ಕೆ ಶುಭಕೋರಿದ್ದಾರೆ. ಅವರಿಗೆ ಅನಂತ ಧನ್ಯವಾದಗಳು. ರಾಜ್ಯದ ಅಭಿವೃದ್ಧಿಗೆ ನಿಮ್ಮ ಸಲಹೆ ಹಾಗೂ ಸಹಕಾರ ಸದಾ ಹೀಗೇ ಇರಲಿ ಎಂದು ಆಶಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

CM Basavaraj Bommai Offered Prayers At His Parents Samadhi On Account Of His Birthday At Hubballi

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ 63 ನೇ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೂ ಗುಚ್ಚ ನೀಡುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದರು.

CM Basavaraj Bommai Offered Prayers At His Parents Samadhi On Account Of His Birthday At Hubballi

ಆತ್ಮೀಯರು ಹಾಗೂ ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರು ನಿಮಗೆ ಉತ್ತಮ ಆಯುರಾರೋಗ್ಯ ನೀಡಿ, ಹೆಚ್ಚು ಹೆಚ್ಚು ಜನಸೇವೆ ಮಾಡುವ ಶಕ್ತಿ ಕರುಣಿಸಲಿ ಎಂದು ಹಾರೈಸುತ್ತೇನೆ' ಎಂದು ಸಚಿವ ಎಸ್ ಟಿ ಸೋಮಶೇಖರ್ ಗೌಡ ಟ್ವೀಟ್ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+