ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯಕ್ಕೆ ಅಮಿತ್ ಶಾ ಆಗಮನ; ಕಿತ್ತೂರು ಕರ್ನಾಟಕದಲ್ಲಿ ಸಂಚಲನ: ಬಸವರಾಜ ಬೊಮ್ಮಾಯಿ

ಅಮಿತ್ ಷಾ ಅವರು ಸಮಗ್ರ ಕರ್ನಾಟಕಕ್ಕೆ ಭೇಟಿ ನೀಡುತ್ತಿದ್ದಾರೆ. ಮುಂದಿನ ತಿಂಗಳು ಹೈದರಾಬಾದ್ ಕರ್ನಾಟಕ ಕ್ಕೆ ಭೇಟಿ ನೀಡಲಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ಅವರು ಹೇಳಿದರು.

|
Google Oneindia Kannada News

ಹುಬ್ಬಳ್ಳಿ, ಜನವರಿ 28: ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದು, ಕಿತ್ತೂರು ಕರ್ನಾಟಕದಲ್ಲಿ ಒಂದು ರೀತಿಯ ಸಂಚಲನ ಸೃಷ್ಠಿಯಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಈ ಕುರಿತು ಶನಿವಾರ ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಿತ್ತೂರು ಕರ್ನಾಟಕ ಬಿಜೆಪಿಯ ಭದ್ರಕೋಟೆ. ಅಮಿತ್ ಷಾ ಅವರು ಸಮಗ್ರ ಕರ್ನಾಟಕಕ್ಕೆ ಭೇಟಿ ನೀಡುತ್ತಿದ್ದಾರೆ. ಕಳೆದ ಬಾರಿಯ ಚುನಾವಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಮಂಡ್ಯಕ್ಕೆ ಬಂದು ಹೋಗಿದ್ದರು, ಈಗ ಕಿತ್ತೂರು ಕರ್ನಾಟಕ , ಮುಂದಿನ ತಿಂಗಳು ಹೈದರಾಬಾದ್ ಕರ್ನಾಟಕ ಕ್ಕೆ ಭೇಟಿ ನೀಡಲಿದ್ದಾರೆ ಎಂದರು.

ನಮ್ಮ ಪಕ್ಷ, ಪಕ್ಷದ ಸಂಘಟನೆ ನಿರಂತರವಾಗಿ ನಡೆಯಲಿದೆ. ಕೇಂದ್ರ ಹಾಗೂ ರಾಜ್ಯದ ಯೋಜನೆಗಳ ಪ್ರಗತಿ ಉದ್ಘಾಟನೆ, ಶಿಲಾನ್ಯಾಸ ಕಾರ್ಯಕ್ರಮಗಳು ನಡೆಯುತ್ತಿವೆ. ರಾಷ್ಟ್ರೀಯ ನಾಯಕರ ಪ್ರಭಾವ ಕರ್ನಾಟಕದ ರಾಜಕಾರಣದಲ್ಲಿ ಆಗುತ್ತಿದೆ. ಪಕ್ಷ ಅದರ ಬಳಕೆ ಮಾಡುತ್ತಿದೆ ಎಂದರು.

CM Basavaraj Bommai on Amit Shah Visit to Kittur

ಎಫ್. ಎಸ್.ಎಲ್ ಲ್ಯಾಬ್ ಅಡಿಗಲ್ಲು, ಕೆ.ಎಲ್.ಇ ಸೊಸೈಟಿ ಬಿವಿಬಿ ಕಾಲುಕಿನ 75 ನೇ ವಾರ್ಷಿಕೋತ್ಸವ ದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದು, ಧಾರವಾಡ ಜಿಲ್ಲೆಯ ಬೂತ್ ಮಟ್ಟದ ವಿಜಯ ಸಂಕಲ್ಪ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಎಂ.ಕೆ ಹೋಬಳಿಯಲ್ಲಿ ಬೃಹತ್ ಸಾರ್ವಜನಿಕ ಸಭೆ ನಡೆಯಲಿದೆ. ಮಂಡಲದ ಮೇಲೆ ಇರುವ ಪದಾಧಿಕಾರಿಗಳ ಜೊತೆ ಚರ್ಚೆ ಮಾಡಲಿದ್ದಾರೆ ಎಂದರು.

ಚುನಾವಣೆ ಹತ್ತಿರವಾಗುತ್ತಿದ್ದಂತೆ ಪಕ್ಷದಲ್ಲಿ ಸಾಕಷ್ಟು ಭಿನ್ನಮತ ಸೃಷ್ಟಿಯಾಗುತ್ತಿರುವ ಕುರಿತು ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಯಾವ ಭಿನ್ನಮತವೂ ಇಲ್ಲ. ಅಂಥದ್ದು ಎಲ್ಲಿಯೂ ಅಭಿವ್ಯಕ್ತವಾಗಿಲ್ಲ. ಪಕ್ಷದ ಬೆಳವಣಿಗೆ ಮುಖ್ಯ. ಎಲ್ಲರೂ ಅದಕ್ಕೇ ಶ್ರಮಿಸಬೇಕು. ಬೆಳಗಾವಿ, ಧಾರವಾಡ, ಕಿತ್ತೂರು ಕರ್ನಾಟಕ, ಹೈದರಾಬಾದ್ ಕರ್ನಾಟಕ, ದಕ್ಷಿಣ ಕರ್ನಾಟಕಕ್ಕೆ ಒಂದು ಗುರಿಯಿದೆ. ಗುರಿ ಸಾಧನೆಗಾಗಿ ಈ ಸಂಘಟನೆ ಮಾಡುತ್ತಿದ್ದೇವೆ ಎಂದು ಹೇಳಿದರು.

CM Basavaraj Bommai on Amit Shah Visit to Kittur

ಡಿ.ಕೆ.ಶಿವಕುಮಾರ್ ಅವರಿಗೆ ಬಿಜೆಪಿ ಸಿಂಹಸ್ವಪ್ನವಾಗಿದೆ. ಹೀಗಾಗಿ ಕನಸಿನಲ್ಲೂ ಬಿಜೆಪಿ ಕಾಣುತ್ತಾರೆ ಎಂದರು.

English summary
Amit Shah to visit Hyderabad Karnataka next month Said Basavaraj Bommai,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X