Karnataka Bandh : ಕರ್ನಾಟಕ ಬಂದ್‌ಗೆ ಕಾಂಗ್ರೆಸ್ ಕರೆ: ಸಿಎಂ ಬೊಮ್ಮಾಯಿ ಹೇಳಿದ್ದೇನು?
ಕಾಂಗ್ರೆಸ್ ಅವಧಿಯಲ್ಲಿ ನಡೆದ ಭ್ರಷ್ಟಾಚಾರಗಳ ಬಗ್ಗೆ ನಾಡಿನ ಜನರಿಗೆ ಗೊತ್ತಿದೆ. ಹೀಗಾಗಿ ಕಾಂಗ್ರೆಸ್ ನೀಡಿದ ರಾಜ್ಯ ಬಂದ್‌ಗೆ ಜನರು ಬೆಲೆ ಕೊಡಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರತಿಕ್ರಿಯಿಸಿದರು.
ಬೆಂಗಳೂರು, ಮಾರ್ಚ್ 06: ಕಾಂಗ್ರೆಸ್ ಅವಧಿಯಲ್ಲಿ ನಡೆದ ಭ್ರಷ್ಟಾಚಾರಗಳ ಬಗ್ಗೆ ನಾಡಿನ ಜನರಿಗೆ ಗೊತ್ತಿದೆ. ಹೀಗಾಗಿ ಕಾಂಗ್ರೆಸ್ ನೀಡಿದ ರಾಜ್ಯ ಬಂದ್‌ಗೆ ಜನರು ಬೆಲೆ ಕೊಡಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರತಿಕ್ರಿಯಿಸಿದರು.
ಹುಬ್ಬಳ್ಳಿಯಲ್ಲಿ ಸೋಮವಾರ ಕಾಂಗ್ರೆಸ್ ಬಂದ್ ಗೆ ಕರೆ ನೀಡಿದ್ದರ ಬಗ್ಗೆ ಬೊಮ್ಮಾಯಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು. ಭ್ರಷ್ಟಾಚಾರ ಕುರಿತು ಆಪಾದನೆ ಮಾಡುವವರು ಶುದ್ಧಹಸ್ತರಿರಬೇಕು. ಆದರೆ ಕಾಂಗ್ರೆಸ್‌ನವರು ಆ ರೀತಿ ಇಲ್ಲ ಎಂದು ಬೊಮ್ಮಾಯಿ ತಿರುಗೇಟು ನೀಡಿದರು.

ಕಾಂಗ್ರೆಸ್ ಅವಧಿಯಲ್ಲಿ ತಲೆದಿಂಬು, ಹಾಸಿಗೆ, ಬಿಸ್‌ಗತ್ತು, ಕಾಫಿ ವಿಚಾರದಲ್ಲಿ ಕಾಂಗ್ರೆಸ್‌ನವರು ಭ್ರಷ್ಟಾಚಾರ ನಡೆಸಿದ್ದಾರೆ. ಅಲ್ಲದೇ ಬೃಹತ್ ನೀರಾವರಿ ಯೋಜನೆಗಳಲ್ಲಿ ಸಹ ಕಾಂಗ್ರೆಸ್ ನವರು ಭ್ರಷ್ಟಾಚಾರ ನಡೆಸಿದ್ದಾರೆ. ಸಿದ್ದರಾಮಯ್ಯ ಅವರು ತಮ್ಮ ಅವಧಿಯಲ್ಲಿ ಎಲ್ಲ ಸಚಿವರಿಗೆ ಟಾರ್ಗೆಟ್ ಕೊಟ್ಟಿದ್ದರು.
ಟಾರ್ಗೆಟ್ ಕುರಿತು ಕಾಂಗ್ರೆಸ್ ಮುಖಂಡರು ಹಾಗೂ ಮಾಜಿ ಸಚಿವರಾದ ಎಂ.ಬಿ.ಪಾಟೀಲ್, ಮಹದೇವಪ್ಪ ಹಾಗೂ ಕೆ,ಜೆ ಜಾರ್ಜ್ ಅವರನ್ನು ಬೇಕಿದ್ದರೆ ಕೇಳಿ ಎಂದರು. ಕಾಂಗ್ರೆಸ್ ನವರ 'ಕೈ' ಸಂಪೂರ್ಣವಾಗಿ ಭ್ರಷ್ಟಾಚಾರದಿಂದ ಕೂಡಿದೆ. ಇತರರ ಮೇಲೆ ಆಪಾದನೆ ಮಾಡುವಾಗ ಶುದ್ಧಹಸ್ತರಿರಬೇಕು. ಇಲ್ಲವಾದರೆ ಅಂತವರಿಗೆ, ಅಂತವರ ರಾಜ್ಯ ಬಂದ್ ಕರೆಗೆ ಜನರು ಬೆಲೆ ನೀಡುವುದಿಲ್ಲ. ಜನರಿಗೆ ಕಾಂಗ್ರೆಸ್‌ನವರು ಆಟ ಏನೆಂಬುದು ಗೊತ್ತಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಮಾರ್ಚ್ 9 ರಂದು ಬಂದ್‌ಗೆ ಕರೆ
ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಚಾರ ವಿರೋದಿಸಿ ಮಾರ್ಚ್ 9 ರಂದು ಎರಡು ಗಂಟೆಗಳ ಕಾಲ ಕರ್ನಾಟಕ ಬಂದ್‌ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಭಾನುವಾರ ತುಮಕೂರಿನ ಕೊರಟಗೆರೆಯಲ್ಲಿ ಕರೆ ನೀಡಿದ್ದರು.
ರಾಜ್ಯ ಬಿಜೆಪಿ ಸರ್ಕಾರದಲ್ಲಿ ಆದ ಭ್ರಷ್ಟಾಚಾರ, ಲೂಟಿ ಪ್ರಕರಣಗಳ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಈ ಸಂಬಂಧ ಒತ್ತಾಯಿಸಿ ಕಾಂಗ್ರೆಸ್ ಬಂದ್ ಮಾಡಲು ಸಿದ್ಧವಾಗುತ್ತಿದೆ. ಅಂದು ಬೆಳಗ್ಗೆ 09 ಗಂಟೆಯಿಂದ 11 ಗಂಟೆವರೆಗೆ ಬಂದ್ ನಡೆಯಲಿದೆ. ವ್ಯಾಪಾರಿಗಳು, ಅಂಗಡಿ ಮುಂಗಟ್ಟುಗಳು, ಸಾರ್ವಜನಿಕರು ಸಹಕರಿಸಬೇಕು ಎಂದು ಡಿಕೆ ಶಿವಕುಮಾರ್ ಹೇಳಿದರು.












Click it and Unblock the Notifications