ಇಡಿ ವಿರುದ್ಧ ಹೋರಾಟ ಕಾಂಗ್ರೆಸ್ ಅವನತಿಗೆ ಕಾರಣವಾಗುತ್ತದೆ: ಸಿಎಂ ಬೊಮ್ಮಾಯಿ
ದಾವಣಗೆರೆ, ಜೂನ್ 16: ಭ್ರಷ್ಟಾಚಾರ ಆರೋಪ ಪ್ರಕರಣದ ತನಿಖೆ ಮಾಡುವ ತನಿಖಾ ಸಂಸ್ಥೆಗಳ ಮೇಲೆ ಪ್ರಭಾವ ಬೀರುವುದು, ಒತ್ತಡ ಹಾಕುವುದು ಕಾನೂನುಬಾಹಿರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ದಾವಣಗೆರೆಯಲ್ಲಿ ಇಂದು ಮಾಧ್ಯದವರೊಂದಿಗೆ ಮಾತನಾಡಿದ ಅವರು, ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ಹಾಗೂ ಎಲ್ಲ ಕಡೆ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿರುವುದು ಕಾನೂನುಬಾಹಿರ. 144 ಸೆಕ್ಷನ್ ಉಲ್ಲಂಘನೆಯನ್ನು ಮಾಡಲಾಗುತ್ತಿದೆ ಎಂದು ಹೇಳಿದರು.
ಇದು ಜವಾಬ್ದಾರಿಯುತ ರಾಷ್ಟ್ರೀಯ ಪಕ್ಷದ ಕೆಲಸ ಅಲ್ಲ. ಭ್ರಷ್ಟಾಚಾರದ ವಿರುದ್ಧ ನಾವೆಲ್ಲರೂ ಧ್ವನಿ ಎತ್ತುವ ಸಂದರ್ಭದಲ್ಲಿ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿಯೂ ವಿಚಾರಣೆ ಮಾಡಬಾರದು ಎನ್ನುವುದು ನ್ಯಾಯಸಮ್ಮತ ಅಲ್ಲ. ಇದು ಖಂಡಿತವಾಗಿಯೂ ಕಾಂಗ್ರೆಸ್ ಪಕ್ಷದ ಅವನತಿಗೆ ಕಾರಣವಾಗುತ್ತದೆ ಎಂದರು.

ಕಾಂಗ್ರೆಸ್ ನಾಯಕರ ಗುಲಾಮಿತನದ ಅನಾವರಣ:
ಮತ್ತೊಂದೆಡೆ ಬೆಂಗಳೂರಿನಲ್ಲಿ ಮಾತನಾಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, "ಕೇಂದ್ರ ತನಿಖಾ ಸಂಸ್ಥೆ, ಇ ಡಿ ವಿರುಧ್ದ ಕಾಂಗ್ರೆಸ್ ನಾಯಕರ ಪ್ರತಿಭಟನೆಯನ್ನು ಖಂಡಿಸಿದ ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು, "ಕಾಂಗ್ರೆಸ್ ನಾಯಕರ ವರ್ತನೆ ಗುಲಾಮಿತನದ ಅನಾವರಣ" ಎಂದು ಟೀಕಿಸಿದ್ದಾರೆ.
ಕಾಂಗ್ರೆಸ್ ನಾಯಕರ ವರ್ತನೆಯಿಂದ ದೇಶದಲ್ಲಿ ಕಾಂಗ್ರೆಸ್ ನಾಯಕರಿಗೊಂದು ಕಾನೂನು, ಜನ ಸಾಮಾನ್ಯರಿಗೆ ಇನ್ನೊಂದು ಕಾನೂನು, ಸಂವಿಧಾನ ಇದೆಯೇ ಎಂದು ಜನತೆಯೇ ಪ್ರಶ್ನಿಸುತ್ತಿದ್ದಾರೆ ಎಂದು ಹೇಳಿದರು.
ಕಾಂಗ್ರೆಸನ ನಾಯಕರು ಹಾಗೂ ಅವರ ಹಿಂಬಾಲಕರು ಯಾಕೆ ಪ್ರತಿಭಟನೆ ಮಾಡಬೇಕು ಎಂದು ಪ್ರಶ್ನಿಸಿದ ಗೃಹ ಸಚಿವರು, "130 ವರ್ಷಗಳ ಇತಿಹಾಸ ಹೊಂದಿರುವ ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಅದರ ನಾಯಕರುಗಳಿಗೆ ಸಾಂವಿಧಾನಿಕ ಸಂಸ್ಥೆಗಳ ಮೇಲೆ ನಂಬಿಕೆ ಇಲ್ಲದಿದ್ದರೆ ಹೇಗೆ?" ಎಂದು ಪ್ರಶ್ನಿಸಿದರು.
ಕೋವಿಡ್ ವಿರುದ್ದದ ಹೋರಾಟ ಇನ್ನೂ ನಡೆಯುತ್ತಿದೆ, ಬೆಂಗಳೂರಿನ ಎರಡು ಶಾಲೆಗಳಲ್ಲಿ. ಕೊರೋನ ಸ್ಫೋಟಗೊಂಡಿದ್ದು ಎಲ್ಲಾ ಮುನ್ನೆಚ್ಚರಿಕೆ ತೆಗೆದುಕೊಳ್ಳಲಾಗುತ್ತಿದೆ, ಇಂಥಹ ಸಂದರ್ಬದಲ್ಲಿ ಕಾಂಗ್ರೆಸ್ ನಾಯಕರು ಜನ ಸೇರಿಸುವುದು, ಅಪಾಯಕ್ಕೆ ಆಹ್ವಾನ ಕೊಟ್ಟಂತೆ" ಎಂದರು.












Click it and Unblock the Notifications