ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Budget 2023; ಅಮೃತ ಕಾಲದಲ್ಲಿ ರಾಷ್ಟ್ರದ ಪ್ರಗತಿಗೆ ಭದ್ರ ಬುನಾದಿ: ಬಸವರಾಜ ಬೊಮ್ಮಾಯಿ

ಕೇಂದ್ರ ಬಜೆಟ್ ನಲ್ಲಿನ ಎಲ್ಲ ಯೋಜನೆಗಳಿಂದ ಕರ್ನಾಟಕದ ಪಾಲು ಬರಲಿದೆ. ಎಂಎಸ್ ಎಂ ಇ, ಜಲಜೀವನ ಮಿಷನ್, ಗ್ರಾಮೀಣಾಭಿವೃದ್ಧಿ,ಪ್ರಧಾನ ಮಂತ್ರಿ ಆವಾಸ ಯೋಜನೆ, ನಗರಮೂಲ ಸೌಕರ್ಯ ಸೇರಿದಂತೆ ಹಲವು ಯೋಜನೆಗಳಿಂದ ಕರ್ನಾಟಕಕ್ಕೆ ಪಾಲು ದೊರೆಯಲಿದೆ ಎಂದು ಬಸವರಾಜ ಬೊಮ್ಮಾಯಿ ಹೇಳ

|
Google Oneindia Kannada News

ಬೆಂಗಳೂರು,ಫೆಬ್ರವರಿ 2: ಅಮೃತ ಕಾಲದಲ್ಲಿ ರಾಷ್ಟ್ರದ ಪ್ರಗತಿಗೆ ಭದ್ರ ಬುನಾದಿ ಹಾಕುವ ಎಲ್ಲ ಅಂಶಗಳಿದ್ದು, ಸಮಗ್ರ ಅಭಿವೃದ್ಧಿಯ ದೃಷ್ಟಿಕೋನದ ಪ್ರಗತಿಪರ ಬಜೆಟ್ ಆಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಗುರುವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕೇಂದ್ರ ಬಜೆಟ್ ಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪ್ರಧಾನ ಮಂತ್ರಿಯವರು ಭಾರತವನ್ನು ಅತ್ಯಂತ ವೇಗವಾಗಿ ಪ್ರಗತಿಯತ್ತ ಒಯ್ಯುವ ಗುರಿಯನ್ನು ಹೊಂದಿದ್ದಾರೆ. ಸ್ವಚ್ಛಭಾರತ ದಿಂದ ಹಿಡಿದು ಆರ್ಥಿಕ ಸುಧಾರಣೆಗಾಗಿ ದಿಟ್ಟ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.

Today's Chanakya: ಪಿಣರಾಯಿ ವಿಜಯನ್ ಸೀಟು ಭದ್ರToday's Chanakya: ಪಿಣರಾಯಿ ವಿಜಯನ್ ಸೀಟು ಭದ್ರ

ಕೇಂದ್ರ ಬಜೆಟ್ ನಲ್ಲಿನ ಎಲ್ಲ ಯೋಜನೆಗಳಿಂದ ಕರ್ನಾಟಕದ ಪಾಲು ಬರಲಿದೆ. ಎಂಎಸ್ ಎಂ ಇ, ಜಲಜೀವನ ಮಿಷನ್, ಗ್ರಾಮೀಣಾಭಿವೃದ್ಧಿ,ಪ್ರಧಾನ ಮಂತ್ರಿ ಆವಾಸ ಯೋಜನೆ, ನಗರಮೂಲ ಸೌಕರ್ಯ ಸೇರಿದಂತೆ ಹಲವು ಯೋಜನೆಗಳಿಂದ ಕರ್ನಾಟಕಕ್ಕೆ ಪಾಲು ದೊರೆಯಲಿದೆ. ಕರ್ನಾಟಕ ಪ್ರಗತಿಪರ ರಾಜ್ಯವಾಗಿದ್ದು, ಮೂಲಭೂತಸೌಕರ್ಯಕ್ಕೆ ಮಹತ್ವ ನೀಡಲಾಗುತ್ತಿದೆ ಎಂದರು.

CM Basavaraj Bommai Reaction on Union Budget 2023

ಇಂದು ಭಾರತ ದೇಶದ ಆರ್ಥಿಕ ಸ್ಥಿತಿಯನ್ನು ವಿಶ್ವದ ಇತರ ಪ್ರಗತಿ ಹೊಂದಿರುವ ದೇಶಗಳಿಗೆ ಹೋಲಿಸಿದಾಗ ನಮ್ಮ ದೇಶ ಪ್ರಗತಿಯಾಗುತ್ತಿರುವುದು ಕಂಡುಬರುತ್ತದೆ. ನಮ್ಮ ಬೆಳವಣಿಗೆಪ್ರಮಾಣ 6ರಿಂದ 6.8 ರಷ್ಟಿದೆ. ಬೇರೆ ಅಭಿವೃದ್ಧಿ ಹೊಂದಿದ ದೇಶಗಳ ಪ್ರಗತಿ ಕೇವಲ 2% ರಷ್ಟಿದೆ. ದೇಶದ ಆರ್ಥಕತೆಗೆ ಭದ್ರ ಬುನಾದಿಯಿದೆ. ಕೃಷಿ, ಸೇವಾ ಹಾಗೂ ಉತ್ಪದನಾ ವಲಯದಲ್ಲಿ ಅಭಿವೃದ್ಧಿಯನ್ನು ಕಾಣುತ್ತಿದ್ದು, ಒಟ್ಟಾರೆ ಜಿಡಿಪಿ ಆರೋಗ್ಯಕರವಾಗಿದೆ ಈ ಬಜೆಟ್ನ ಪರಿಣಾಮಗಳ ಬಗ್ಗೆ ತಿಳಿಯುವುದು ಮುಖ್ಯ. ಈಗಿರುವ ಅಭಿವೃದ್ಧಿಗೆ ಇನ್ನಷ್ಟು ಬಲ ತುಂಬುವ ಮೂಲಭೂತ ಬದಲಾವಣೆಗಳು ಆಗಿವೆ ಎಂದರು.

ಕೇಂದ್ರದ ಬಜೆಟ್ ನಲ್ಲಿ ಕ್ಯಾಪಿಟಲ್ ಔಟ್ ಲೇ 10 ಲಕ್ಷ‌ ಕೋಟಿ ಹೆಚ್ಚಳವಾಗಿದೆ. ಹಿಂದಿನ ಸರ್ಕಾರಗಳ ಅವಧಿಯಲ್ಲಿ ನೋಡಿದಾಗ 25000 ದಷ್ಟು ಹೆಚ್ಚಳವಾಗುತ್ತಿತ್ತು. ಈಗಿನ ಹೆಚ್ಚಳ ಮಾದರಿ ಬದಲಾವಣೆಯಾಗಿದ್ದು, ದೇಶದ ಅಭಿವೃದ್ಧಿಯ ವೇಗವನ್ನೂ ಹೆಚ್ಚಿಸಲಿದೆ. ಈ ಹೆಚ್ಚಳದಿಂದ ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿಯೂ ಸಾಧ್ಯವಾಗುತ್ತದೆ.ಇದಲ್ಲದೇ ಸಾಮಾಜಿಕ ಮೂಲಸೌಕರ್ಯಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದ್ದು, ಬರುವಂತ ದಿನಗಳಲ್ಲಿ ಸಕಾರಾತ್ಮಕ ಅಭಿವೃದ್ಧಿ ನೋಡಲು ಸಾಧ್ಯವಾಗುತ್ತದೆ ಎಂದರು.

ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿಗೆ ಕೇಂದ್ರ ಬಜೆಟ್ ನಲ್ಲಿ ಒತ್ತು ನೀಡಲಾಗಿದ್ದು, ಹಳ್ಳಿಗಾಡಿನಲ್ಲಿ ಮನೆಗಳ ನಿರ್ಮಾಣಕ್ಕೆ ಹೆಚ್ಚಿನ ಪ್ರಮಾಣದ ಅನುದಾನ, ಗ್ರಾಮೀಣ ಮನೆಗಳಿಗೆ ಕುಡಿಯುವ ನೀರು ಯೋಜನೆಗೆ 70 ಸಾವಿರ ಕೋಟಿ ರೂ. ಅನುದಾನ ಇರಿಸಲಾಗಿದೆ. 2024-25ರೊಳಗೆ ಎಲ್ಲ ಮನೆಗಳಿಗೆ ಕುಡಿಯುವ ನೀರು ಒದಗಿಸುವ ಗುರಿ ಸಾಧಿಸಲು ಹಾಗೂ ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಅನುದಾನ ಹೆಚ್ಚಳ ಮಾಡಿದ್ದಾರೆ‌. ಪ್ರತಿಬಾರಿ ಸಣ್ಣ ಉದ್ಯಮಗಳಿಗೆ ಮಹತ್ವ ಕೊಡುತ್ತಿಲ್ಲ ಎಂಬ ಆರೋಪವಿತ್ತು. ಎಂಎಸ್ ಎಂ ಇಗಳಿಗೆ ಮಿತಿಗಳನ್ನು ಹೆಚ್ಚಿಸಿದ್ದಾರೆ. 3 ಕೋಟಿ ರೂ ವರೆಗಿನ ಉದ್ಯಮಗಳಿಗೆ ತೆರಿಗೆ ಲಾಭವನ್ನು ನೀಡಿದ್ದಾರೆ. ಸಣ್ಣ ಉದ್ಯಮಗಳಿಗೆ 2 ಲಕ್ಷ ಕೋಟಿಯಷ್ಟು ಕೊಲಾಟರಲ್ ಗ್ಯಾರಂಟಿಯನ್ನು ಕೇಂದ್ರ ಸರ್ಕಾರ ನೀಡುತ್ತಿದೆ. ಸಾಲದ ಬಡ್ಡಿಯನ್ನು ಶೇ. 1 ರಷ್ಟು ಕಡಿಮೆ ಮಾಡಲಾಗಿದೆ. ಈ ಎಲ್ಲ ಕ್ರಮಗಳಿಂದ ಸಣ್ಣ ಉದ್ದಿಮೆಗಳಿಗೆ ಪ್ರೋತ್ಸಾಹ ನೀಡಲಾಗಿದೆ ಎಂದರು.

CM Basavaraj Bommai Reaction on Union Budget 2023

ಆರೋಗ್ಯ ಮತ್ತು ಶಿಕ್ಷಣದ ಅನುದಾನವನ್ನು ಹೆಚ್ಚಿಸಲಾಗಿದೆ. ಮಹಿಳೆಯರ ಸ್ವಸಹಾಯ ಗುಂಪುಗಳಿಗೆ ಆರ್ಥಿಕ ಸಹಾಯ ನೀಡಿ, ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುವ ಯೋಜನೆಯ ಮೂಲಕ ಮಹಿಳೆಯರ ಸಾಮರ್ಥ್ಯ ಉಪಯೊಗ ಮಾಡಿಕೊಳ್ಳುವ ಕೆಲಸವನ್ನು ಮಾಡಿದ್ದಾರೆ. ಉದ್ಯೋಗ ಹೆಚ್ಚಳ ಹಾಗೂ ಕೌಶಲ್ಯ ಅಭಿವೃದ್ದಿಗೆ ಆದ್ಯತೆ ನೀಡಿದ್ದಾರೆ. ಕೃಷಿಗೆ 1 ಲಕ್ಷ ಕೋಟಿ ಗಿಂತ ಹೆಚ್ಚಿನ ಅನುದಾನ ನೀಡಿ ಕೃಷಿಗೆ ಆದ್ಯತೆ ನೀಡಲಾಗಿದೆ ಎಂದರು.

ಭದ್ರಾ ಮೇಲ್ದಂಡೆ ಯೋಜನೆ 1964 ರಿಂದಲೇ ಬೇಡಿಕೆಯಿದ್ದರೂ, 2008 ರ ವರೆಗೂ ಯಾವುದೇ ನಿರ್ಧಿಷ್ಟ ಕ್ರಮ ಆಗಿರಲಿಲ್ಲ. ನಮ್ಮ ಸರ್ಕಾರ ಬಂದ ಮೇಲೆ ಈ ಯೋಜನೆ ಜಾರಿಗೆ ಕ್ರಮ ಕೈಗೊಳ್ಳಲಾಗಿದೆ. ಪ್ರತಿ ಪಕ್ಷದವರು ಈ ಯೋಜನೆಗೆ ಈ ವರ್ಷ ಹಣ ಬರುವುದಿಲ್ಲ ಎನ್ನುತ್ತಾರೆ. ಆಯವ್ಯಯ ಇರುವುದೇ 2023-24 ನೇ ಸಾಲಿಗೆ. ಮೊದಲು 16 ಟಿಎಂಸಿ ಇದ್ದದ್ದು, ಈಗ 23 ಟಿಎಂಸಿ ನೀರು ಹೆಚ್ಚಿಗೆ ಮಾಡಿದ್ದರಿಂದ ಯೋಜನೆಯ ವೆಚ್ಚವೂ ಹೆಚ್ಚಾಗಿದೆ. ರಾಷ್ಟ್ರೀಯ ಯೋಜನೆ ಘೋಷಣೆಯಾಗುವುದಕ್ಕೆ ಜಲಸಂಪನ್ಮೂಲ ಇಲಾಖೆ, ಸಿಡಬ್ಲ್ಯೂಸಿ, ಆರ್ಥಿಕ ಇಲಾಖೆಯ ಕ್ಲಿಯರೆನ್ಸ್ ದೊರೆತು, ಸಚಿವಸಂಪುಟದಲ್ಲಿಯೂ ಅನುಮೋದನೆ ಪಡೆದು, ಬಜೆಟ್ ನಲ್ಲಿಯೂ ಘೋಷಣೆಯಾಗಿರುವುದುದರಿಂದ ರಾಷ್ಟ್ರೀಯ ಯೋಜನೆ ಒಪ್ಪಿಗೆಯನ್ನು ಕೊಟ್ಟಂತೆಯೇ ಎಂದು ತಿಳಿಸಿದರು.

ಮೊದಲು ಎಐಬಿಪಿ ಕಾರ್ಯಕ್ರಮದಂತೆ ನೀರಾವರಿ ಯೋಜನೆಗಳ ಪ್ರಗತಿಯಂತೆ ಹಣ ಬಿಡುಗಡೆಯಾಗುತ್ತಿದ್ದು, ಯುಪಿಎ ಸರ್ಕಾರ 2012ರಲ್ಲಿ ಅನುದಾನ ಖರ್ಚು ಮಾಡಿದ ಮೇಲೆಯೇ ಹೆಚ್ಚಿನ ಅನುದಾನ ನೀಡುವ ನಿರ್ಬಂಧ ಹಾಕಿದ್ದರ ಕಾರಣ, ಎಐಬಿಪಿಯಲ್ಲಿ ಹಲವಾರು ಕರ್ನಾಟಕ ಯೋಜನೆಗಳು ಅನುದಾನವೇ ಬರಲಿಲ್ಲ. ನಂತರ ಎನ್ ಡಿ ಎ ಸರ್ಕಾರ ಬಂದ ನಂತರ ಈ ಪರಿಸ್ಥಿತಿಯನ್ನು ಬದಲಾಯಿಸಿ, ಯೋಜನೆಗಳಿಗೆ ನೇರವಾಗಿ ಅನುದಾನ ಬಿಡುಗಡೆ ಮಾಡುವ ವ್ಯವಸ್ಥೆಯಾಗಿದೆ. ಆದ್ದರಿಂದ ಕೇಂದ್ರದಿಂದ ಯಾವುದೇ ಕರಾರಿಲ್ಲದೇ 5300 ಕೋಟಿ ರೂ. ಅನುದಾನ ನೀಡಿದೆ.

ಮೆಟ್ರೋ 2 ನೇ ಹಂತದ ಕಾಮಗಾರಿಗೆ 23 ಕೋಟಿ ರೂ.ಗಳ ಅನುದಾನ ದೊರೆತಿದೆ. ವಿಸ್ತರಣೆ ಮಾಡುವುದು 4 ನೇ ಹಂತದ ವ್ಯಾಪ್ತಿಗೆ ಬರಲಿದೆ. ನಂತರ ಡಿಪಿಆರ್ ಆಗಬೇಕು. 2024 ಕ್ಕೆ 2 ನೇ ಹಂತದ ಎಲ್ಲಾ ಕಾಮಗಾರಿಗಳೂ ಮುಗಿಯಲಿವೆ. ನಂತರ 3 ನೇ ಹಂತ ಕೈಗೆತ್ತಿಕೊಳ್ಳಲಾಗುವುದು. ನಂತರ 4 ನೇ ಹಂತದ ಕೆಲಸವನ್ನು ಕೈಗೆತ್ತಿಕೊಳ್ಳಲಾಗುವುದು. ನಂತರ ಅನುದಾನ ಬರಲಿದೆ. 3ನೇ ಹಂತದಲ್ಲಿ ಸೇರ್ಪಡೆಯಾಗಿರುವ ಬೆಂಗಳೂರಿಗೆ ಗ್ರಾಮೀಣ ಪ್ರದೇಶಗಳಿಗೆ ಹಾಗೂ 4 ನೇ ಹಂತದಲ್ಲಿ ಮಾಗಡಿ ಮುಂತಾದ ಊರುಗಳಿಗೆ ಮೆಟ್ರೋ ವಿಸ್ತರಣೆ ಮಾಡಲಾಗುವುದು ಎಂದರು.

English summary
Budget 2023 Reactions : Chief Minister basavaraj bommai about Union Budget 2023-24.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X