ಹಿಜಾಬ್ ಕುರಿತು ಹೈಕೋರ್ಟ್ ತೀರ್ಪು ಪಾಲಿಸಲು ಎಲ್ಲರೂ ಸಹಕರಿಸಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು, ಮಾ. 15: ಮಕ್ಕಳಿಗೆ ವಿದ್ಯೆಗಿಂತ ಮುಖ್ಯ ಯಾವುದೂ ಇಲ್ಲ. ಹೈಕೋರ್ಟ್ ತ್ರಿಸದಸ್ಯ ಪೀಠದ ಆದೇಶ ನಾವೆಲ್ಲರೂ ಪಾಲಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಹೈಕೋರ್ಟ್ ಆದೇಶ ಅನುಷ್ಠಾನಗೊಳಿಸಲು ಎಲ್ಲರೂ ಸಹಕರಿಸಬೇಕು, ಸಮಾಜದಲ್ಲಿ ಶಾಂತಿ ಕಾಪಾಡಬೇಕು. ಎಲ್ಲ ಪಾಲಕರು, ವಿದ್ಯಾರ್ಥಿಗಳು, ಸಮುದಾಯದ ಮುಖಂಡರಿಗೆ ಕಳಕಳಿಯ ವಿನಂತಿ ಮಾಡುತ್ತೇನೆ. ಈ ಆದೇಶ ಒಪ್ಪಿಕೊಂಡು ಶಾಂತಿ ಸುವ್ಯವಸ್ಥೆ ಕಾಪಾಡಿ ಎಂದರು.
ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯಲು ಎಲ್ಲರೂ ಸಹಕಾರ ನೀಡಬೇಕು. ವಿದ್ಯಾರ್ಥಿಗಳು ಹೈಕೋರ್ಟ್ ಆದೇಶ ಪಾಲನೆ ಮಾಡಿ, ನಿಮಗೆ ಶಿಕ್ಷಣ ಬಹಳ ಮುಖ್ಯವಾಗಿದೆ. ತರಗತಿ, ಪರೀಕ್ಷೆಗಳಿಂದ ಹೊರಗೆ ಉಳಿಯುವ ನಿರ್ಧಾರ ಬಿಟ್ಟು ಶೈಕ್ಷಣಿಕ ಚಟುವಟಿಕೆಗಳಲ್ಲಿ ಭಾಗಿಯಾಗಬೇಕು ಎಂದು ಮನವಿ ಮಾಡಿದರು.

ಹೈಕೋರ್ಟ್ ತೀರ್ಪು ಎಲ್ಲರೂ ಪಾಲಿಸಬೇಕು. ಒಂದು ವೇಳೆ ಎಲ್ಲಿಯಾದರೂ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾದರೆ ಗೃಹ ಇಲಾಖೆ ಸೂಕ್ತ ಕ್ರಮ ಕೈಗೊಳ್ಳುತ್ತದೆ ಎಂಬ ಎಚ್ಚರಿಕೆಯನ್ನೂ ನೀಡಿದರು.
Recommended Video
ಹಿಜಾಬ್ ಧರಿಸುವುದು ಇಸ್ಲಾಂನ ಅತ್ಯಗತ್ಯ ಭಾಗ ಅಲ್ಲ: ಹೈಕೋರ್ಟ್ ಮಹತ್ವದ ತೀರ್ಪು | Oneindia Kannada












Click it and Unblock the Notifications