ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎರಡೂ ಕ್ಷೇತ್ರಗಳಲ್ಲಿ ಗೆಲುವು ನಮ್ಮದೇ: ಬಸವರಾಜ ಬೊಮ್ಮಾಯಿ

|
Google Oneindia Kannada News

ಬೆಂಗಳೂರು ಸೆಪ್ಟೆಂಬರ್,28, ರಾಜ್ಯದಲ್ಲಿ ಎರಡು ಕ್ಷೇತ್ರಗಳಲ್ಲಿ ಉಪಚುನಾವಣೆ ಘೋಷಣೆಯಾಗಿದ್ದು, ಜನರು ನಮ್ಮ ಪರವಾಗಿ ಇದ್ದಾರೆ. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಜಯಗಳಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.

ಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಈ ಸಂಬಂಧ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಈ ಕ್ಷೇತ್ರಗಳಿಗೆ ಸದ್ಯದಲ್ಲಿಯೇ ವೀಕ್ಷಕರನ್ನು ಕಳುಹಿಸಲಿದ್ದಾರೆ. ಅವರು ನೀಡುವ ವರದಿ ಅಧಾರದ ಮೇಲೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗುವುದು ಎಂದು ಅವರು ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.

"ಇತ್ತೀಚೆಗೆ ನಡೆದ ಕೋರ್ ಕಮಿಟಿ ಸಭೆಯಲ್ಲಿಯೂ ಸಹ ಈ ಸಂಬಂಧ ಚರ್ಚೆಯಾಗಿದೆ. ನಮ್ಮ ಪಕ್ಷದ ಹಿರಿಯ ನಾಯಕರಾಗಿದ್ದ ಸಿ.ಎಂ. ಉದಾಸಿ ಅವರು ಹಾನಗಲ್ ಕ್ಷೇತ್ರದಲ್ಲಿ ಆರು ಬಾರಿ ಶಾಸಕರಾಗಿದ್ದು, ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಇದು ನಮಗೆ ವರದಾನಗವಾಗಲಿದೆ. ಅಲ್ಲದೆ, ಸಿಂದಗಿ ಕ್ಷೇತ್ರದಲ್ಲಿಯೂ ಸಹ ಹಿಂದೆ ಎರಡು ಬಾರಿ ಬಿಜೆಪಿಯವರೇ ಶಾಸಕರಾಗಿದ್ದರು. ಆದರೆ, ಈ ಬಾರಿ ಅದು ಜೆಡಿಎಸ್ ಪಾಲಾಗಿತ್ತು. ಇಲ್ಲೂ ಸಹ ಜಯಗಳಿಸುವುದರಲ್ಲಿ ಯಾವುದೇ ಅನುಮಾನ ಇಲ್ಲ" ಎಂದರು.

CM Basavaraj Bommai Reaction to Sindagi, Hanagal By Election

ನೀವು ಮುಖ್ಯಮಂತ್ರಿಯಾದ ನಂತರ ನಡೆಯುತ್ತಿರುವ ಮೊದಲ ಚುನಾವಣೆ, ನಿಮ್ಮ ನೇತೃತ್ವದಲ್ಲಿ ನಡೆಯುತ್ತದೆಯೇ? ಎಂಬ ಪ್ರಶ್ನೆಗೆ, "ಇಲ್ಲಿ ನನ್ನ ನಾಯಕತ್ವ ಎನ್ನುವುದಕ್ಕಿಂತ ಪಕ್ಷದ ನಾಯಕತ್ವದಲ್ಲಿ ಚುನಾವಣೆ ನಡೆಯುತ್ತದೆ ಎಂದು ಹೇಳುತ್ತೇನೆ. ರಾಜ್ಯದ ಜನರು ಮತ್ತು ಕ್ಷೇತ್ರದ ಮತದಾರರು ನಮ್ಮ ಪರವಾಗಿ ಇದ್ದಾರೆ. ಬೂತ್ ಮಟ್ಟದಲ್ಲಿ ಸಶಕ್ತ ಕಾರ್ಯಕರ್ತರ ಪಡೆ ಇದೆ. ಇವರೆಲ್ಲರ ಶ್ರಮದಿಂದ ಎರಡೂ ಕ್ಷೇತ್ರಗಳನ್ನು ನಮ್ಮದಾಗಿಸಿಕೊಳ್ಳುತ್ತೇವೆ" ಎಂದು ಬೊಮ್ಮಾಯಿ ಹೇಳಿದರು.

ಬಿಜೆಪಿ ಟಿಕೆಟ್ ಆಕಾಂಕ್ಷಿಗಳು:

ಉಪಚುನಾವಣೆಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಹಾನಗಲ್ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷೆಗಳು ಬಿರುಸಿನ ಚಟುವಟಿಕೆ ಆರಂಭಿಸಿದ್ದಾರೆ. ಈ ಮೊದಲು ಶಾಸಕರಾಗಿದ್ದ ದಿವಂಗತ ಸಿ.ಎಂ. ಉದಾಸಿ ಅವರ ಕುಟುಂಬಕ್ಕೇ ಟಿಕೆಟ್ ನೀಡಬೇಕು ಎಂಬ ಮಾತುಗಳು ಕೇಳಿಬರುತ್ತಿವೆ. ಉದಾಸಿ ಅವರ ಸೊಸೆ ಹಾಗೂ ಹಾವೇರಿ ಸಂಸದ ಶಿವಕುಮಾರ ಉದಾಸಿ ಪತ್ನಿ ರೇವತಿ ಶಿವಕುಮಾರ್ ಅವರ ಹೆಸರು ಪ್ರಬಲವಾಗಿ ಕೇಳಿಬರುತ್ತಿದೆ. ಆದರೆ, ಆರ್‌ಎಸ್‌ಎಸ್‌ ಪ್ರಮುಖರು ಕಲ್ಯಾಣ್ ಕುಮಾರ್ ಶೆಟ್ಟರ್ ಪರ ಒಲವು ಹೊಂದಿದ್ದಾರೆ ಎನ್ನಲಾಗಿದೆ. ಕಲ್ಯಾಣ್ ಕುಮಾರ್ ಶೆಟ್ಟರ್ ಹಾನಗಲ್ ಪುರಸಭೆ ಮಾಜಿ ಅಧ್ಯಕ್ಷರಾಗಿದ್ದು, ಮೂಲ ಬಿಜೆಪಿಗ ಹಾಗೂ ಆರ್‌ಎಸ್‌ಎಸ್‌ ಜೊತೆಗೂ ಉತ್ತಮ ನಂಟು ಹೊಂದಿದ್ದಾರೆ ಎನ್ನಲಾಗಿದೆ.

ಇದಲ್ಲದೆ, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಹಾವೇರಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೃಷ್ಣ ಈಳಗೇರ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದರಾಜ ಕುಲಕೋಟಿ, ಹಾನಗಲ್ ತಾಲೂಕಾ ಬಿಜೆಪಿ ಘಟಕದ ಅಧ್ಯಕ್ಷ ಹಾಗೂ ಮಾಜಿ ಜಿ.ಪಂ. ಸದಸ್ಯ ಮಹಾಂತೇಶ ಸೊಪ್ಪಿನ್, ಹಾವೇರಿಯ ಕ್ಷೇತ್ರದ ಮಾಜಿ ಶಾಸಕ ಶಿವರಾಜ ಸೊಪ್ಪಿನ ಅವರ ಹೆಸರುಗಳೂ ಕೇಳಿಬರುತ್ತಿವೆ.

Recommended Video

ಈ ಸ್ಟಾರ್ ಆಟಗಾರನ ಭವಿಷ್ಯದ ಜೊತೆ ವಿರಾಟ್ ಚೆಲ್ಲಾಟವಾಡ್ತಿರೋದು ಯಾಕೆ? | Oneindia Kannada

English summary
ECI announced by-election schedule for the Hanagal and Sindagi assembly constituencies. CM Basavaraj Bommai says both the constituency people are with BJP we will win. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X