Breaking; ಮಂಗಳೂರಿಗೆ ಹೊರಟಿದ್ದ ಸಿಎಂ ತುರ್ತಾಗಿ ವಾಪಸ್

ಬೆಂಗಳೂರು, ಏಪ್ರಿಲ್ 27; ಮಂಗಳೂರು ಪ್ರವಾಸ ಕೈಗೊಂಡಿದ್ದ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಮಾನ ನಿಲ್ದಾಣದಿಂದ ತುರ್ತಾಗಿ ವಾಪಸ್ ಆದರು.

ಬುಧವಾರ ಆರ್. ಟಿ. ನಗರದ ನಿವಾಸದಿಂದ ಬಸವರಾಜ ಬೊಮ್ಮಾಯಿ ವಿಮಾನ ನಿಲ್ದಾಣಕ್ಕೆ ತೆರಳಿದ್ದರು. ಮಂಗಳೂರಿನಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವರು ವಿಶೇಷ ವಿಮಾನದ ಮೂಲಕ ತೆರಳಬೇಕಿತ್ತು.

ಆದರೆ ವಿಮಾನ ಹೊರಡುವುದು ತಡವಾದ ಕಾರಣ ಬಸವರಾಜ ಬೊಮ್ಮಾಯಿ ತುರ್ತಾಗಿ ಗೃಹ ಕಚೇರಿ ಕೃಷ್ಣಾಗೆ ವಾಪಸ್ ಆಗಿದ್ದಾರೆ. ಮುಖ್ಯಮಂತ್ರಿಗಳು 12 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಭಾಗಿಯಾಗಬೇಕಿದೆ.

CM Basavaraj Bommai Returns From Airport

ರಾಜ್ಯಗಳ ಕೋವಿಡ್ ಪರಿಸ್ಥಿತಿ ಬಗ್ಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯನ್ನು ನಡೆಸುತ್ತಿದ್ದಾರೆ. ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಜೊತೆ ಮುಖ್ಯಮಂತ್ರಿಗಳು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಮಂಗಳೂರಿಗೆ ಭೇಟಿ ನೀಡಲಿರುವ ಬಸವರಾಜ ಬೊಮ್ಮಾಯಿ ಅಲ್ಲಿಂದಲೇ ಪ್ರಧಾನಿ ನರೇಂದ್ರ ಮೋದಿ ಸಭೆಯಲ್ಲಿ ಪಾಲ್ಗೊಳ್ಳಲು ವ್ಯವಸ್ಥೆ ಮಾಡಲಾಗಿತ್ತು. ಆದರೆ ತಾಂತ್ರಿಕ ಕಾರಣದಿಂದಾಗಿ ವಿಮಾನ ಹೊರಡುವುದು ತಡವಾದ ಕಾರಣ ಸಿಎಂ ಗೃಹ ಕಚೇರಿಗೆ ವಾಪಸ್ ಆದರು.

ತಡವಾಗಿ ಹೊರಟರೆ ಮಂಗಳೂರು ತಲುಪುವುದು ವಿಳಂಬವಾಗಿ ಮೋದಿ ನೇತೃತ್ವದ ಸಭೆಯಲ್ಲಿ ಭಾಗಿಯಾಗಲು ಸಾಧ್ಯವಿಲ್ಲ. ಆದ್ದರಿಂದ ಸಭೆಯಲ್ಲಿ ಬೆಂಗಳೂರಿನಿಂದಲೇ ಪಾಲ್ಗೊಳ್ಳಲು ಬಸವರಾಜ ಬೊಮ್ಮಾಯಿ ಗೃಹ ಕಚೇರಿಗೆ ವಾಪಸ್ ಆಗಿದ್ದಾರೆ.

ದೇಶದ ವಿವಿಧ ರಾಜ್ಯಗಳಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮುಖ್ಯಮಂತ್ರಿಗಳ ಸಭೆ ಕರೆದಿದ್ದಾರೆ. ಕರ್ನಾಟಕ ಸರ್ಕಾರ ಈಗಾಗಲೇ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ, ಸಾಮಾಜಿಕ ಅಂತರ ಕಾಪಾಡಬೇಕು ಎಂದು ಆದೇಶ ಹೊರಡಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+