• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಯಾರೇ ಅಡ್ಡಿ ಬಂದರೂ ಮೇಕೆದಾಟು ಯೋಜನೆ ನಿಲ್ಲುವುದಿಲ್ಲ: ಸಿಎಂ ಬೊಮ್ಮಾಯಿ

|
Google Oneindia Kannada News

ಬೆಂಗಳೂರು, ಜುಲೈ 31: ಯಾರೇ ಅಡ್ಡಿ ಬಂದರೂ ಮೇಕೆದಾಟು ಯೋಜನೆ ನಿಲ್ಲುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುನರುಚ್ಚರಿಸಿದ್ದಾರೆ.

ಕರ್ನಾಟಕದ ಕಾವೇರಿ ನದಿಗೆ ಮೇಕೆದಾಟು ಬಳಿ ಡ್ಯಾಂ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದಾಗಿದ್ದು, ಇದಕ್ಕೆ ತಮಿಳುನಾಡು ಸರ್ಕಾರ ವಿರೋಧಿಸುತ್ತಿದೆ.

ಮೇಕೆದಾಟು ಯೋಜನೆ ವಿರೋಧಿಸಿ ಕೆ. ಅಣ್ಣಾಮಲೈ ಉಪವಾಸ ಮೇಕೆದಾಟು ಯೋಜನೆ ವಿರೋಧಿಸಿ ಕೆ. ಅಣ್ಣಾಮಲೈ ಉಪವಾಸ

ಇನ್ನು ಈ ವಿಚಾರಕ್ಕೆ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ತಮಿಳುನಾಡು ಬಿಜೆಪಿ ಘಟಕ ಸರ್ಕಾರದ ಪರ ನಿಲ್ಲುತ್ತೇನೆ ಎಂದು ಈ ಹಿಂದೆಯೇ ತಿಳಿಸಿದ್ದರು. ಆದ್ರೆ ಈಗ ಮೇಕೆದಾಟು ಯೋಜನೆ ವಿರೋಧಿಸಿ ಕೆ.ಅಣ್ಣಾಮಲೈ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ಅಣ್ಣಾಮಲೈ ವಿಚಾರ ಕುರಿತು ಪರೋಕ್ಷವಾಗಿ ಮಾತನಾಡಿರುವ ಬಸವರಾಜ ಬೊಮ್ಮಾಯಿ ಯಾರೇ ವಿರೋಧಿಸಿದರೂ ಡ್ಯಾಂ ನಿರ್ಮಾಣವಾಗಿಯೇ ಆಗುತ್ತದೆ ಎಂದಿದ್ದಾರೆ.

ಕುಡಿಯುವ ನೀರಿನ ಉದ್ದೇಶದಿಂದ ರೂಪಿಸಿರುವ ಮೇಕೆದಾಟು ಯೋಜನೆ ನಿಲ್ಲುವುದಿಲ್ಲ. ಯೋಜನೆ ಜಾರಿ ಸಂಬಂಧ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ನ್ಯಾಯ ಒದಗಿಸುವ ವಿಶ್ವಾಸವಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಈ ಮೊದಲೇ ಹೇಳಿದ್ದರು.

ಮೇಕೆದಾಟು ಯೋಜನೆಯ ಸಮಗ್ರ ಯೋಜನಾ ವರದಿಯನ್ನು ಈಗಾಗಲೇ ಕೇಂದ್ರ ಜಲ ಆಯೋಗಕ್ಕೆ ಸಲ್ಲಿಸಲಾಗಿದೆ. ಹೆಚ್ಚುವರಿ ಕಾವೇರಿ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕೆ ಬಳಸುವ ಯೋಜನೆಯನ್ನು ಜಾರಿಗೊಳಿಸುವ ಎಲ್ಲಾ ಹಕ್ಕು ರಾಜ್ಯಕ್ಕಿದೆ. ರಾಜ್ಯದ ಜನರ ಹಿತ ರಕ್ಷಣೆಗಾಗಿ 100ಕ್ಕೆ 100ರಷ್ಟು ಯೋಜನೆ ಜಾರಿಗೊಳಿಸಲಾಗುವುದು.
ರಾಜ್ಯ ಸರ್ಕಾರದ ಈ ಮನವಿಯನ್ನು ನಿಯಮಾನುಸಾರ ಕೇಂದ್ರ ಸರಕಾರ ಪರಿಗಣಿಸಬೇಕು ಎಂದು ಹೇಳಿದರು.

ಕುಡಿಯುವ ನೀರಿನ ಉದ್ದೇಶದ ಮೇಕೆದಾಟು ಯೋಜನೆಯನ್ನು ನಿಲ್ಲಿಸಲು ರಾಜ್ಯಕ್ಕೆ ಯಾವುದೇ ಸಕಾರಣಗಳಿಲ್ಲ. ಯೋಜನೆ ಜಾರಿಗ ಅಗತ್ಯವಿರುವ ಎಲ್ಲಾಒಪ್ಪಿಗೆಯನ್ನು ಕೇಂದ್ರದಿಂದ ಪಡೆಯಲು ಶಕ್ತಿ ಮೀರಿ ಪ್ರಯತ್ನಿಸಲಾಗುವುದು. ಎಂದು ಅವರು ತಿಳಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌, ಇನ್ನೂ ನೂರು ವರ್ಷ ಕಳೆದರೂ ತಮಿಳುನಾಡು ಮೇಕೆದಾಟು ಯೋಜನೆಗೆ ತಗಾದೆ ಎತ್ತುತ್ತಲೇ ಇರುತ್ತದೆ. ರಾಜ್ಯದಲ್ಲಿ ಡಬಲ್‌ ಎಂಜಿನ್‌ ಸರಕಾರವಿದೆ ಎನ್ನುವ ಬಿಜೆಪಿಯು ಕೇಂದ್ರದಿಂದ ಅಗತ್ಯ ಅನುಮತಿ ಪಡೆದು ಯೋಜನೆಗೆ ನಾಳೆಯೇ ಭೂಮಿ ಪೂಜೆ ಮಾಡಲಿ. ರಾಜಕೀಯ ಭಿನ್ನಾಭಿಪ್ರಾಯ ಮರೆತು ನಾವೆಲ್ಲ ಸರಕಾರದೊಂದಿಗೆ ನಿಲ್ಲುತ್ತೇವೆ,'' ಎಂದು ಹೇಳಿದ್ದರು.

ಮೇಕೆದಾಟು ಯೋಜನೆ ನನ್ನ ಕ್ಷೇತ್ರದಲ್ಲೇ ಬರಲಿದೆ. ಬೆಂಗಳೂರಿನ ಜನರಿಗೆ ಕುಡಿಯುವ ನೀರು ಪೂರೈಕೆ ಹಾಗೂ ವಿದ್ಯುತ್‌ ಉತ್ಪಾದನೆಗೆ ಸೀಮಿತವಾದ ಯೋಜನೆಯಾಗಿದೆ. ನನ್ನ ಕ್ಷೇತ್ರದ 10 ಎಕರೆಗೂ ಈ ನೀರು ಬಳಸಿಕೊಳ್ಳುವುದಿಲ್ಲ. ಯೋಜನೆಗೆ 500ರಿಂದ 1000 ಎಕರೆಯಷ್ಟು ಕಂದಾಯ ಜಾಗವಷ್ಟೇ ಬೇಕಾಗಿದೆ. ಯಾವ ಪ್ರದೇಶವೂ ಮುಳುಗಡೆಯಾಗುವ ಭೀತಿ ಇಲ್ಲ ಎಂದು ಹೇಳಿದ್ದರು.

ಅಣ್ಣಾಮಲೈ ನೇತೃತ್ವದಲ್ಲಿ ಆಗಸ್ಟ್ 5ರಂದು ಕರ್ನಾಟಕ ಸರ್ಕಾರದ ವಿರುದ್ಧ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಅಣ್ಣಾಮಲೈ ತಿಳಿಸಿದ್ದಾರೆ. ನಾವು ಒಂದೇ ಪಕ್ಷದಲ್ಲಿದ್ದರೂ ಈ ನಿರ್ಧಾರ ವಿರೋಧಿಸುತ್ತೇವೆ. ಕರ್ನಾಟಕ ಸರ್ಕಾರದ ನಿರ್ಧಾರದ ವಿರುದ್ಧ ಉಪವಾಸ ಸತ್ಯಾಗ್ರಹ ನಡೆಸುತ್ತೇವೆ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಹೇಳಿಕೆ ನೀಡಿದ್ದಾರೆ.

ಈ ಹಿಂದೆ ಮೇಕೆದಾಟು ಡ್ಯಾಂ ವಿಷಯವಾಗಿ ತಮಿಳುನಾಡು ಬಿಜೆಪಿ ಸರ್ಕಾರದ ಪರ ನಿಲ್ಲುತ್ತೇನೆ ಎಂದು ಅಣ್ಣಾಮಲೈ ತಿಳಿಸಿದ್ದರು. ತಿಮೇಕೆದಾಟು ವಿಷಯವಾಗಿ ನಮ್ಮ ಪಕ್ಷದ ನಿಲುವು ಸ್ಪಷ್ಟವಾಗಿದೆ. ನಾವು ಈ ವಿಷಯವಾಗಿ ರಾಜಕೀಯ ಮಾಡಲು ಬಯಸುವುದಿಲ್ಲ.

ಕರ್ನಾಟಕದಲ್ಲಿ ಬಿಜೆಪಿ ಆಡಳಿತದ ಸರ್ಕಾರವಿದ್ದರೂ, ತಮಿಳುನಾಡು ಬಿಜೆಪಿ ಮತ್ತು ಇಲ್ಲಿನ ಜನರ, ರೈತರ ಹಿತಾಸಕ್ತಿಯ ಪರವಾಗಿ ಕಾರ್ಯ ನಿರ್ವಹಿಸಲಿದೆ. ತಮಿಳುನಾಡು ರೈತರು ಯಾವುದೇ ಸಮಸ್ಯೆಯನ್ನು ಎದುರಿಸಬಾರದು. ಸುಪ್ರೀಂಕೋರ್ಟ್ ಆದೇಶದಂತೆ ರಾಜ್ಯ ತನ್ನ ಪಾಲಿನ ಕಾವೇರಿ ನೀರನ್ನು ಪಡೆಯಬೇಕು ಎಂದು ಹೇಳಿದ್ದರು.

ಮೇಕೆದಾಟು ವಿಷಯವಾಗಿ ನಮ್ಮ ಪಕ್ಷದ ನಿಲುವು ಸ್ಪಷ್ಟವಾಗಿದೆ. ನಾವು ಈ ವಿಷಯವಾಗಿ ರಾಜಕೀಯ ಮಾಡಲು ಬಯಸುವುದಿಲ್ಲ. ಕರ್ನಾಟಕದಲ್ಲಿ ಬಿಜೆಪಿ ಆಡಳಿತದ ಸರ್ಕಾರವಿದ್ದರೂ, ತಮಿಳುನಾಡು ಬಿಜೆಪಿ ಇಲ್ಲಿನ ಜನರ, ರೈತರ ಹಿತಾಸಕ್ತಿಯ ಪರವಾಗಿ ಕಾರ್ಯ ನಿರ್ವಹಿಸಲಿದೆ. ತಮಿಳುನಾಡು ರೈತರು ಯಾವುದೇ ಸಮಸ್ಯೆಯನ್ನು ಎದುರಿಸಬಾರದು. ಸುಪ್ರೀಂಕೋರ್ಟ್ ಆದೇಶದಂತೆ ರಾಜ್ಯ ತನ್ನ ಪಾಲಿನ ಕಾವೇರಿ ನೀರನ್ನು ಪಡೆಯಬೇಕು ಎಂದು ಹೇಳಿದ್ದಾರೆ.

ಬಸವರಾಜ ಬೊಮ್ಮಾಯಿ
Know all about
ಬಸವರಾಜ ಬೊಮ್ಮಾಯಿ

English summary
Chief Minister CM Basavaraj Bommai Says Mekedatu Project Will Be Implemented At Any Cost & Doesn't Matter Who Opposes It.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X