ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಂಗಳೂರಿನ ಸಮಸ್ಯೆಗಳಿಗೆ ಶೀಘ್ರ ಪರಿಹಾರ: ಸಿಎಂ ಬಸವರಾಜ ಬೊಮ್ಮಾಯಿ

|
Google Oneindia Kannada News

ಬೆಂಗಳೂರು, ನವೆಂಬರ್ 18: ಬೆಂಗಳೂರಿನ ಸಮಸ್ಯೆಗೆ ಶೀಘ್ರವೇ ಪರಿಹಾರ ‌ದೊರಕಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಪ್ರವಾಸೋದ್ಯಮ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ದಕ್ಷಿಣ ಭಾರತೀಯ ಹೋಟೆಲ್ ಮತ್ತು ರೆಸ್ಟರಾಂಟ್‌ಗಳ ಸಂಘದ ವಾರ್ಷಿಕ ಸಮ್ಮೇಳನವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದ ಅವರು, ಬೆಂಗಳೂರಿಗೆ ನಿತ್ಯ ಲಕ್ಷಾಂತರ ಜನರು ಬರುತ್ತಿರುವುದರಿಂದ ಇಲ್ಲಿ ಹೂಡಿಕೆ ಹಾಗೂ ಕೆಲಸ ಮಾಡುವವರು ಹೆಚ್ವಿರುವುದರಿಂದ ಸಂಚಾರ ದಟ್ಟಣೆ ಸಾಮಾನ್ಯ.ರಾಜ್ಯದಲ್ಲಿ ಐದು ಹೊಸ ನಗರಗಳ ನಿರ್ಮಾಣ ಮಾಡಲು ತೀರ್ಮಾನಿಸಿದ್ದು, ನಗರದಲ್ಲಿ ಆಧುನಿಕ ಸೌಲಭ್ಯಗಳುಳ್ಳ ವ್ಯವಸ್ಥೆ ಕಲ್ಪಿಸಲಾಗುವುದು. ಇದ್ದನ್ನು ನಾವು ನವ ಕರ್ನಾಟಕ ಎಂದು ಕರೆಯುತ್ತೇವೆ. ಈ ವರ್ಷ ಮೂರು ವಿಮಾನ ನಿಲ್ದಾಣಗಳ ಆರಂಭಿಸಲಿದ್ದು, ಮುಂದಿನ ವರ್ಷ ಮತ್ತೆ ಮೂರು ಹೊಸ ವಿಮಾನ ನಿಲ್ದಾಣಗಳನ್ನು ನಿರ್ಮಾಣ ಮಾಡಲಿದ್ದೇವೆ. ದೂರದ ಸ್ಥಳಗಳನ್ನು ತಲುಪಲು ಏರ್ ಸ್ಟ್ರಿಪ್ಸ್ ನಿರ್ಮಾಣವಾಗಲಿದೆ ಎಂದರು.

ರಾಜ್ಯದಲ್ಲಿ ಆರು ಹೊಸ ನಗರ ನಿರ್ಮಿಸಲು ಸರ್ಕಾರ ನಿರ್ಧಾರ: ಬಸವರಾಜ ಬೊಮ್ಮಾಯಿರಾಜ್ಯದಲ್ಲಿ ಆರು ಹೊಸ ನಗರ ನಿರ್ಮಿಸಲು ಸರ್ಕಾರ ನಿರ್ಧಾರ: ಬಸವರಾಜ ಬೊಮ್ಮಾಯಿ

ರಾಜ್ಯದ ಅನೇಕ ಪ್ರವಾಸೋದ್ಯಮ ಸ್ಥಳಗಳ ಅಭಿವೃದ್ದಿ ಮಾಡಲಿದ್ದೇವೆ‌. ಅಂಜನಾದ್ರಿ ಹಾಗೂ ಜೋಗ ಫಾಲ್ಸ್ ಸೇರಿದಂತೆ ಒಟ್ಟು ಆರು ರೋಪ್ ವೇಗಳ ನಿರ್ಮಾಣವಾಗುತ್ತಿದೆ. ಪ್ರಗತಿಪರ, ಸ್ನೇಹಮಯಿ ರಾಜ್ಯ ವಾಗಿದ್ದು ಪ್ರವಾಸೋದ್ಯಮ ಕ್ಷೇತ್ರದಲ್ಲಿ ಅತಿಥ್ಯ ಪ್ರಮುಖ ಪ್ರಾತ್ರ ವಹಿಸುತ್ತದೆ. ಉತ್ತಮ ಆತಿಥ್ಯ ಜನರನ್ನು ಆಕರ್ಷಿಸುತ್ತದೆ ಮಾತ್ರವಲ್ಲದೆ ರಾಜ್ಯದ ಬಗ್ಗೆಯೂ ಉತ್ತಮ ಅಭಿಪ್ರಾಯ ಮೂಡಿಸುತ್ತದೆ. ಸಂಘದ ಬೇಡಿಕೆಗಳನ್ನು ಪರಿಗಣಿಸಲಾಗುವುದು ಎಂದು ಭರವಸೆ ನೀಡಿದರು. ಜಿ.ಎಸ್.ಟಿ ಯಲ್ಲಿ ರಿಯಾಯಿತಿ ನೀಡುವ ಬಗ್ಗೆ ಪರಿಶೀಲಿಸಿ ತೀರ್ಮಾನಕ್ಕೆ ಬರಲಾಗುವುದು ಎಂದರು.

CM Basavaraj Bommai Says we will give solutions for bengaluru problems very soon

ಒಂದು ರಾಜ್ಯ ಹಲವು ಜಗತ್ತು ಎಂಬ ರಾಜ್ಯದ ಪ್ರವಾಸೋದ್ಯಮ ಘೋಷವಾಕ್ಯಕ್ಕೆ ಗಾಡ್ಸ್ ಮೋಸ್ಟ್ ಲವ್ಡ್ ಕಂಟ್ರಿ ಎಂದು ಹೊಸ ಟ್ಯಾಗ್ ಲೈನ್ ನೀಡಬೇಕು ಎಂದು ಸಲಹೆ ನೀಡಿದರು. ಹೊಸ ಆಲೋಚನೆ ಹೊಸ ವಿಚಾರ ಗಳೊಂದಿಗೆ ಬನ್ನಿ ನಮ್ಮ ಸರ್ಕಾರ ನಿಮಗೆ ಹೆಗಲಿಗೆ ಹೆಗಲು ಕೊಟ್ಟು ನಿಲ್ಲಲಿದೆ ಎಂದು ಹೇಳಿದರು.

ಕರ್ನಾಟಕ, ತಮಿಳುನಾಡು, ಕೇರಳ ಎಲ್ಲ ರಾಜ್ಯಗಳು ಒಂದೆ ರೀತಿಯಲ್ಲಿ ಪ್ರವಾಸಿಗರನ್ನು ಸೆಳೆಯಬೇಕು. ಕರ್ನಾಟಕ ಅತಿ ಉದ್ದವಾದ ಪಶ್ಚಿಮ ಘಟ್ಟ ಪ್ರದೇಶ ಹೊಂದಿದೆ. ಪಶ್ಚಿಮ ಘಟ ಸ್ವಿಡ್ಜರ್ ಲ್ಯಾಂಡ್ ಗಿಂತ ಸುಂದರವಾಗಿದೆ. ಆದರೆ, ನಾವು ಅದನ್ನು ಗುರುತಿಸುತ್ತಿಲ್ಲ. ನಮ್ಮಲ್ಲಿ ಧಾರ್ಮಿಕ ಸ್ಥಳಗಳೂ ಇವೆ. ಪ್ರವಾಸೋದ್ಯಮ ವಲಯದಲ್ಲಿ ಕರ್ನಾಟಕ ಒಳ್ಳೆಯ ಸೇವೆ ಸಲ್ಲಿಸುತ್ತಿದೆ. ಪ್ರವಾಸೋದ್ಯಮ ನೀತಿ ಹೊಂದಿದ್ದು, ಮೈಸೂರು ಹಾಗೂ ಹಂಪಿ ಪ್ರವಾಸಿ ಸರ್ಕಿಟ್ ಹೊಂದಲಿದ್ದೇವೆ. ಒಂದು ಟಿಕೆಟ್ ನಲ್ಲಿ ಎಲ್ಲವನ್ನು ನೋಡುವ ವ್ಯವಸ್ಥೆ ಕಲ್ಪಿಸಲಾಗುವುದು. ಅತ್ಯಂತ ವೇಗವಾಗಿ ಬೆಳೆಯುತ್ತಿರುವ ರಾಜ್ಯ. ಬೆಂಗಳೂರನ್ನು ಎಲ್ಲರೂ ಪ್ರೀತಿಸುತ್ತಾರೆ. ಪ್ರತಿ ದಿನ ಐದರಿಂದ ಹತ್ತು ಸಾವಿರ ವಿಜ್ಞಾನಿಗಳು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದು ಹೋಗುತ್ತಾರೆ. ವಿಶ್ವದ ಯಾವುದೇ ರಾಜ್ಯದಲ್ಲಿರದ 400 ಆರ್ ಆಂಡ್ ಡಿ ಕೇಂದ್ರಗಳು ಬೆಂಗಳೂರಿನಲ್ಲಿವೆ. ದೇಶದಲ್ಲಿಯೇ ಅತಿ ಹೆಚ್ಚಿನ ಜನರು ಬಂದು ಹೋಗುವ ತಾಣ ಬೆಂಗಳೂರು ಎಂದರು.

ಯೋಜನಾಬದ್ಧವಾಗಿ ಪ್ರವಾಸೋದ್ಯಮದ ಅಭವೃದ್ಧಿಗೆ ಯೋಜನೆ ರೂಪಿಸಿಕೊಳ್ಳಿ

ಪ್ರವಾಸೋದ್ಯಮ ಎಲ್ಲ ವ್ಯವಸ್ಥೆ ಕಲ್ಪಿಸಬೇಕು. ವಿವಿಧ ಕಾರಣಗಳಿಗಾಗಿ ಬರುವ ಜನರ ಅವಶ್ಯಕತೆಗಳನ್ನು ಪೂರೈಸುವ ವ್ಯವಸ್ಥೆಯತ್ತ ಗಮನಹರಿಸಬೇಕು. ಯೋಜನಾಬದ್ಧವಾಗಿ ಪ್ರವಾಸೋದ್ಯಮದ ಅಭವೃದ್ಧಿಗೆ ಯೋಜನೆ ರೂಪಿಸಿಕೊಳ್ಳಲು ಸಲಹೆ ನೀಡಿ ಪ್ರವಾಸೋದ್ಯಮಕ್ಕೆ ಯಾವುದೇ ಗಡಿಗಳ ಮಿತಿ ಇಲ್ಲ ಎಂದರು.

CM Basavaraj Bommai Says we will give solutions for bengaluru problems very soon

ಕರ್ನಾಟಕ ಅತಿ ಉದ್ದವಾದ ಪಶ್ಚಿಮ ಘಟ್ಟ ಪ್ರದೇಶ ಹೊಂದಿದೆ. ಪಶ್ಚಿಮ ಘಟ್ಟ ಸ್ವಿಡ್ಜರ್ ಲ್ಯಾಂಡ್ ಗಿಂತ ಸುಂದರವಾಗಿದೆ. ಆದರೆ, ನಾವು ಅದನ್ನು ಗುರುತಿಸುತ್ತಿಲ್ಲ. ನಮ್ಮಲ್ಲಿ ಧಾರ್ಮಿಕ ಸ್ಥಳಗಳೂ ಇವೆ. ಪ್ರವಾಸೋದ್ಯಮ ವಲಯದಲ್ಲಿ ಕರ್ನಾಟಕ ಒಳ್ಳೆಯ ಸೇವೆ ಸಲ್ಲಿಸುತ್ತಿದೆ. ನಾವು ಪ್ರವಾಸೋದ್ಯಮ ನೀತಿ ಹೊಂದಿದ್ದೆವೆ.ಕರಾವಳಿ ಭಾಗದ ಪ್ರವಾಸೋದ್ಯಮದ ಅಭಿೃದ್ಧಿಗೆ ಹೊಸ ಸಿ ಅರ್ ಝೆಡ್ ನಿಯಮಾವಳಿಗಳಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಕರ್ನಾಟಕದಲ್ಲಿ ಪ್ರಕೃತಿದತ್ತ ಬೀಚ್ ಗಳಿದ್ದು , ಇವುಗಳ ಅಭಿವೃದ್ಧಿಗೆ ಈ ನಿಯಮಗಳು ಸಹಕಾರಿಯಾಗಲಿದೆ ಎಂದರು.

ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್, ಸಂಘದ ಅಧ್ಯಕ್ಷ ಕೆ.ಶ್ಯಾಮ ರಾಜು ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

English summary
The government will give solutions to Bengaluru problems, says cm Basavaraj Bommai at South Indian Hotel and Restaurants Organization annual meeting
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X