ಸಂಪುಟ ವಿಸ್ತರಣೆ ಕುರಿತು ಹುಬ್ಬಳ್ಳಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಹೇಳಿಕೆ!
ಹುಬ್ಬಳ್ಳಿ, ಜು.29: ಬಿಜೆಪಿ ಹೈಕಮಾಂಡ್ ತಾನು ಅಂದುಕೊಂಡಂತೆ ರಾಜ್ಯದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಬದಲಾಯಿಸಿದೆ. ಅವರ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ಅವರನ್ನು ನೇಮಿಸಿ ನೂತನ ಮುಖ್ಯಮಂತ್ರಿಯನ್ನಾಗಿ ಮಾಡಿದೆ. ಜೊತೆಗೆ ಹಲವು ಸವಾಲುಗಳು ಬಿಜೆಪಿ ಹೈಕಮಾಂಡ್‌ಗೆ ಎದುರಾಗಿವೆ. ಸಿಎಂ ಬೊಮ್ಮಾಯಿ ಅವರ ಸಂಪುಟ ಸೇರುವುದಿಲ್ಲ ಎಂದು ಈಗಾಗಲೇ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ. ಜೊತೆಗೆ ಹಲವು ಹಿರಿಯ ನಾಯಕರು ಪಕ್ಷದಲ್ಲಿ ಆಂತರಿಕವಾಗಿ ಅಸಮಾಧಾನವನ್ನು ವ್ಯಕ್ತಪಡಿಸುತ್ತಿದ್ದಾರೆ ಎಂಬ ಮಾಹಿತಿ ಇದೆ.
ಜೊತೆಗೆ ರಾಜ್ಯ ಸಚಿವ ಸಂಪುಟ ವಿಸ್ತರಿಸುವ ಸವಾಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ಎದುರಾಗಿದೆ. ಒಂದೆಡೆ ಹೈಕಮಾಂಡ್ ಮತ್ತೊಂದೆಡೆ ರಾಜ್ಯ ಬಿಜೆಪಿಯ ಅಸಮಾಧಾನಿತ ಶಾಸಕರು, ಜೊತೆಗೆ ಮಾಜಿ ಸಿಎಂ ಯಡಿಯೂರಪ್ಪ ಇದ್ದಾರೆ. ಇವರೆಲ್ಲರ ಮಧ್ಯೆ ಸಂಪುಟ ವಿಸ್ತರಣೆಯ ಬಹುದೊಡ್ಡ ಸವಾಲು ಬಸವರಾಜ ಬೊಮ್ಮಾಯಿ ಅವರ ಎದುರಿಗಿದೆ. ಇದೀಗ ಉತ್ತರ ಕನ್ನಡ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆಗೆ ತೆರಳಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು ಹುಬ್ಬಳ್ಳಿಯಲ್ಲಿ ತಮ್ಮ ಸರ್ಕಾರದ ಸಂಪುಟ ವಿಸ್ತರಣೆ ಕುರಿತು ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ರಾಜ್ಯ ಸಚಿವ ಸಂಪುಟ ವಿಸ್ತರಣೆ ಯಾವಾಗ ಆಗಲಿದೆ? ಮುಂದಿದೆ ಮಾಹಿತಿ!

ನಾಳೆ ದೆಹಲಿಗೆ ತೆರಳಿ ಹೈಕಮಾಂಡ್ ಭೇಟಿ
ನಾಳೆ ಬೆಳಗ್ಗೆ ದೆಹಲಿಗೆ ತೆರಳಿ ಪಕ್ಷದ ಹೈಕಮಾಂಡ್ ಭೇಟಿ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹುಬ್ಬಳ್ಳಿಯಲ್ಲಿ ತಿಳಿಸಿದ್ದಾರೆ. ದೆಹಲಿಯಲ್ಲಿ ನಾಳೆ ಪಕ್ಷದ ನಾಯಕರು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುತ್ತೇನೆ. ಮುಂದಿನ ಎರಡ್ಮೂರು ದಿನಗಳಲ್ಲಿ ಮತ್ತೆ ದೆಹಲಿಗೆ ತೆರಳುತ್ತೇನೆ. ಆಗ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸುತ್ತೇನೆ ಎಂದು ಹೇಳಿದ್ದಾರೆ. ಆ ಮೂಲಕ ಬೊಮ್ಮಾಯಿ ಸಚಿವ ಸಂಪುಟ ಸೇರಲು ಉತ್ಸುಕರಾಗಿರುವ ಶಾಸಕರ ಆತಂಕ ಹೆಚ್ಚಿಸಿದ್ದಾರೆ.
ಇದೇ ಸಂದರ್ಭದಲ್ಲಿ ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರು ಸಚಿವ ಸಂಪುಟ ಸೇರದಿರುವ ಕುರಿತು ಮತ್ತೊಮ್ಮೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. "ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ತಮ್ಮ ಅಭಿಪ್ರಾಯವನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದಾರೆ. ಅದರೂ ಸಹ ಅವರನ್ನು ವೈಯಕ್ತಿಕವಾಗಿ ಭೇಟಿ ಮಾಡಿ ಈ ಕುರಿತು ಮಾತನಾಡುತ್ತೇನೆ. ರಾಜಕೀಯಕ್ಕೆ ಬರುವ ಮೊದಲಿನಿಂದಲೇ ನಾವಿಬ್ಬರೂ ಸ್ನೇಹಿತರು. ಅವರ ಬಗ್ಗೆ ಅಪಾರವಾದ ಅಭಿಮಾನ, ಪ್ರೀತಿ-ವಿಶ್ವಾಸ ಇದೆ. ಅವರೊಂದಿಗೆ ಮಾತನಾಡಿ ಅವರ ಬಯಕೆಯನ್ನು ತಿಳಿದುಕೊಂಡು ಪಕ್ಷದೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸುತ್ತೇನೆ" ಎಂದಿದ್ದಾರೆ. ಇದೇ ಸಂದರ್ಭದಲ್ಲಿ ಹುಬ್ಬಳಿ-ಧಾರವಾಡ ಮಹಾನಗರದ ಜನರಿಗೆ ಮಹತ್ವದ ಸಂದೇಶ ಕೊಟ್ಟಿದ್ದಾರೆ.

ಹುಬ್ಬಳ್ಳಿ ನನಗೆ ಅತ್ಯಂತ ಪ್ರೀತಿಯ ಊರು
ಇದೇ ವೇಳೆಯಲ್ಲಿ ಹುಬ್ಬಳ್ಳಿ-ಧಾರವಾಡ ಅಭಿವೃದ್ಧಿ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದ್ದಾರೆ. "ಹುಬ್ಬಳ್ಳಿ-ಧಾರವಾಡ ರಾಜ್ಯದ ಎರಡನೇ ಅತಿದೊಡ್ಡ ನಗರವಾಗಿದೆ. ಅವಳಿ ನಗರದ ಸಮಸ್ಯೆಗಳನ್ನು ಬಗೆಹರಿಸಿ, ಅಭಿವೃದ್ಧಿಗೆ ಹೆಚ್ಚಿನ ಪ್ರಾಶಸ್ತ್ಯ ಕೊಡುತ್ತೇನೆ" ಎಂದಿದ್ದಾರೆ.
"ಹುಬ್ಬಳ್ಳಿ ನನಗೆ ಅತ್ಯಂತ ಪ್ರೀತಿಯ ಊರು. ನನ್ನ ಶೈಕ್ಷಣಿಕ ಜೀವನದ ಅಪಾರ ಪ್ರಮಾಣದ ಸ್ನೇಹಿತರ ಬಳಗ ಇಲ್ಲಿದೆ. ಮುಖ್ಯಮಂತ್ರಿಯಾಗಿ ಹುಬ್ಬಳ್ಳಿಗೆ ಆಗಮಿಸುತ್ತೇನೆ ಎಂದು ಅಂದುಕೊಂಡಿರಲಿಲ್ಲ. ಪಕ್ಷ ಹಾಗೂ ಕೇಂದ್ರದ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆರ್ಶೀವಾದಿಂದ ಮುಖ್ಯಮಂತ್ರಿ ಸ್ಥಾನಕ್ಕೆ ಏರಿದ್ದೇನೆ. ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಹಿರಿಯ ನಾಯಕ ಜಗದೀಶ ಶೆಟ್ಟರ್ ಹಾಗೂ ಅನೇಕ ಶಾಸಕ ಮಿತ್ರರು ಇಲ್ಲಿರುವುದರಿಂದ ಪಕ್ಷ ಇಲ್ಲಿ ಬಲಿಷ್ಠವಾಗಿದೆ. ಪಕ್ಷ ಹಾಗೂ ಪರಿವಾರದ ಹಿರಿಯರೊಂದಿಗೆ ಚರ್ಚೆ ಮಾಡಿ ಅವರ ಸಲಹೆ ಸೂಚನೆಗಳನ್ನು ಅನುಷ್ಠಾನ ಮಾಡಲು ಎಲ್ಲ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ" ಎಂದಿದ್ದಾರೆ.

ಸುಪ್ರೀಂಕೋರ್ಟ್ ತೀರ್ಪು
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಹಿಂದೆ ಜಲಸಂಪನ್ಮೂಲ ಸಚಿವರಾಗಿ ಕೆಲಸ ಮಾಡಿದ್ದರು. ಹೀಗಾಗಿ ಈ ಕುರಿತು ಕೇಳಲಾದ ಪ್ರಶ್ನೆಗೆ ಮೊದಲನೇಯದಾಗಿ, "ಕೃಷ್ಣಾ ನದಿ ನೀರಿನ ಹಂಚಿಕೆ ಕುರಿತು ಸುಪ್ರೀಂಕೋರ್ಟ್ ಆದೇಶದಂತೆ ಬ್ರಿಜೇಶ್ ಕುಮಾರ್ ಪಟೇಲ್ ಅವರ ನೇತೃತ್ವದಲ್ಲಿ ಟ್ರಿಬ್ಯುನಲ್ ರಚಿಸಲಾಯಿತು. ಇದರ ತೀರ್ಪಿನಂತೆ ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಶನ್ ಹೊರಡಿಸುವ ಹಂತದಲ್ಲಿ ಆಂದ್ರ ಪ್ರದೇಶ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲು ಏರಿತು. ಮಹಾರಾಷ್ಟ್ರ ಹಾಗೂ ಕರ್ನಾಟಕ ಒಟ್ಟಾಗಿ ಇದನ್ನು ಎದುರಿಸುತ್ತಿದ್ದೇವೆ. ಮುಂದಿನ ಒಂದುವರೆ ತಿಂಗಳ ಒಳಗಾಗಿ ಸುಪ್ರೀಂಕೋರ್ಟ್ ತೀರ್ಪು ಬರಬಹುದು" ಎಂದು ಸಿಎಂ ಬೊಮ್ಮಾಯಿ ಭರವಸೆ ವ್ಯಕ್ತಪಡಿಸಿದ್ದಾರೆ.

ಆಲಮಟ್ಟಿ ಜಲಾಶಯದ ಎತ್ತರ
"ನಮ್ಮ ಪಾಲಿನ ನೀರಿನ ಬಳಕೆಗೆ ಅನುಮತಿ ದೊರೆಯುವ ನಿರೀಕ್ಷೆಯಿದೆ. ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಶನ್ ಹೊರಡಿಸಿದ ತಕ್ಷಣ ಪುನರ್ವಸತಿ ಕಾರ್ಯಕ್ರಮ ರೂಪಿಸಲಾಗುವುದು. ಜೊತೆಗೆ ಆಲಮಟ್ಟಿ ಜಲಾಶಯದ ಎತ್ತರವನ್ನು ಏರಿಸಲಾಗುವುದು. ಈ ಬಗ್ಗೆ ಸರ್ಕಾರಕ್ಕೆ ಸ್ಪಷ್ಟತೆಯಿದೆ. ಜಲಾಶಯದ ಎತ್ತರ ಹೆಚ್ಚಳದಿಂದ 13.50 ಲಕ್ಷ ಚದುರ ಪ್ರದೇಶ ನೀರಾವರಿಗೆ ಒಳಪಡುವುದು. ಇದಕ್ಕೆ ಪ್ರಾಶಸ್ತ್ಯ ನೀಡಿ ಕೆಲಸ ಮಾಡಲಾಗುವುದು" ಎಂದು ಕೃಷ್ಣಾ ಮೇಲ್ದಂಡೆ ಎರಡನೇ ಹಂತದ ಯೋಜನೆ ಪೂರ್ಣಗೊಳಿಸುವ ಕುರಿತು ಮಹತ್ವದ ಭರವಸೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ಕೊಟ್ಟಿದ್ದಾರೆ.
Recommended Video
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications