ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking; ವರ್ಗಾವಣೆ ಪ್ರಸ್ತಾವನೆಗೆ ತಡೆ ಹಾಕಿದ ಮುಖ್ಯಮಂತ್ರಿಗಳು

|
Google Oneindia Kannada News

ಬೆಂಗಳೂರು, ಜನವರಿ 24; ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿವಿಧ ಇಲಾಖೆಗಳ ವರ್ಗಾವಣೆಗೆ ತಡೆ ಹಾಕಿದ್ದಾರೆ. ಮುಖ್ಯಮಂತ್ರಿಗಳ ಕಚೇರಿಯಿಂದ ಈ ಕುರಿತು ಟಿಪ್ಪಣಿ ಹೊರಬಿದ್ದಿದೆ.

ಕಚೇರಿಯ ಟಿಪ್ಪಣಿಯಲ್ಲಿ ವರ್ಗಾವಣೆ ಅವಧಿ ಮುಕ್ತಾಯಗೊಂಡಿರುವುದರಿಂದ ಹಾಗೂ ಮುಂದೆ ಆಯವ್ಯಯ ಅಧಿವೇಶನ ಹಾಗೂ ವಿಧಾನಸಭೆ ಸಾರ್ವತ್ರಿಕ ಚುನಾವಣೆಗಳು ಇರುವುದರಿಂದ, ಈ ಹಂತದಲ್ಲಿ ಯಾವುದೇ ವರ್ಗಾವಣೆ/ ನಿಯೋಜನೆ ಪ್ರಸ್ತಾವನೆಗಳನ್ನು ಸಲ್ಲಿಸದೇ ಇರಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

Breaking; ಐಪಿಎಸ್ ಅಧಿಕಾರಿಗಳ ವರ್ಗಾವಣೆ, ಮೈಸೂರಿಗೆ ಹೊಸ ಎಸ್ಪಿ Breaking; ಐಪಿಎಸ್ ಅಧಿಕಾರಿಗಳ ವರ್ಗಾವಣೆ, ಮೈಸೂರಿಗೆ ಹೊಸ ಎಸ್ಪಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಚೇರಿಯಿಂದ ಈ ಟಿಪ್ಪಣಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಗೆ ರವಾನೆಯಾಗಿದೆ.

Breaking; ಐಪಿಎಸ್ ಅಧಿಕಾರಿಗಳ ವರ್ಗಾವಣೆ, ಶಿವಮೊಗ್ಗಕ್ಕೆ ಹೊಸ ಎಸ್‌ಪಿ Breaking; ಐಪಿಎಸ್ ಅಧಿಕಾರಿಗಳ ವರ್ಗಾವಣೆ, ಶಿವಮೊಗ್ಗಕ್ಕೆ ಹೊಸ ಎಸ್‌ಪಿ

CM Basavaraj Bommai

ಹಾಗೂ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಗೆ ಸಹ ಸಲ್ಲಿಕೆಯಾಗಿದೆ.

Infographics; ಕರ್ನಾಟಕದ ಮತದಾರರ ಪಟ್ಟಿ, ಅಂಕಿ-ಸಂಖ್ಯೆಗಳು Infographics; ಕರ್ನಾಟಕದ ಮತದಾರರ ಪಟ್ಟಿ, ಅಂಕಿ-ಸಂಖ್ಯೆಗಳು

ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ (ಪಂಚಾಯತ್‌ರಾಜ್), ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಸಹಕಾರ ಇಲಾಖೆಗೂ ಕಳಿಸಲಾಗಿದೆ.

ಸರ್ಕಾರದ ಕಾರ್ಯದರ್ಶಿಗಳು, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ (ಸಕ್ಕರೆ), ಸರ್ಕಾರದ ಕಾರ್ಯದರ್ಶಿಗಳು, ಸಿ.ಆ.ಸು ಇಲಾಖೆ, ಸರ್ಕಾರದ ಕಾರ್ಯದರ್ಶಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಶಿಷ್ಟ ಚೇತನರ ಮತ್ತು ಹಿರಿಯರ ಸಬಲೀಕರಣ ಇಲಾಖೆಗೂ ರವಾನೆಯಾಗಿದೆ.

note

ಸರ್ಕಾರದ ಕಾರ್ಯದರ್ಶಿಗಳು, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಮತ್ತು ಸರ್ಕಾರದ ಕಾರ್ಯದರ್ಶಿಗಳು, ವಸತಿ ಇಲಾಖೆಗೆ ಸಹ ಸಲ್ಲಿಕೆ ಮಾಡಲಾಗಿದೆ.

ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಅಲ್ಲದೇ ಚುನಾವಣಾ ಆಯೋಗ ಸರ್ಕಾರಿ ನೌಕರರಿಗೆ ತರಬೇತಿಯನ್ನು ಆಯೋಜನೆ ಮಾಡುತ್ತಿದೆ. ಇಂತಹ ಸಂದರ್ಭದಲ್ಲಿಯೇ ಈ ಟಿಪ್ಪಣಿ ಹೊರಡಿಸಲಾಗಿದೆ.

ಚುನಾವಣೆಗೆ ಸಿದ್ಧತೆ; ಸಾರ್ವತ್ರಿಕ ಚುನಾವಣೆ 2023ರ ಸಂಬಂಧ ಮತದಾನ ಸಿಬ್ಬಂದಿಗಳ ಡಾಟಾಬೇಸ್ ಅನ್ನು ಎನ್‌ಐಸಿಗೆ ಒದಗಿಸುವ ಬಗ್ಗೆ ಮಾನ್ಯ ಚುನಾವಣಾಧಿಕಾರಿಗಳ ಕಛೇರಿ, ಬೆಂಗಳೂರು, ಇವರ ಪತ್ರ ಉಲ್ಲೇಖಿಸಿ ಸುತ್ತೋಲೆ ಹೊರಡಿಸಲಾಗಿದೆ.

ಈ ವಿಷಯಕ್ಕೆ ಸಂಬಂಧಿಸಿದಂತೆ. 2023ರ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಪ್ರಯುಕ್ತ, ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಗೊಳಿಡುವ ಸರ್ಕಾರಿ ಕಛೇರಿ/ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬೋಧನೆ/ ಬೋಧಕೇತರ ಸಿಬ್ಬಂದಿಗಳ ಮಾಹಿತಿಯನ್ನು ತಾಲ್ಲೂಕುವಾರು ನಿಗಧಿತ ನಮೂನೆಯಲ್ಲಿ ಸಿದ್ಧಪಡಿಸಿ ತುರ್ತಾಗಿ ಒದಗಿಸುವಂತೆ ಸೂಚಿಸಲಾಗಿದೆ.

HRMS ನಲ್ಲಿ ಲಭ್ಯವಿರುವಂತೆ ಸರ್ಕಾರಿ ಕಛೇರಿ/ ಕಾಲೇಜುಗಳ ಸಿಬ್ಬಂದಿಗಳ ಮಾಹಿತಿಯನ್ನು ಕ್ರೋಡೀಕರಿಸಲಾಗಿರುತ್ತದೆ. ಎನ್‌ಐಸಿಯಿಂದ ನೀಡಲಾಗಿರುವ ನಮೂನೆಯಲ್ಲಿ ಇನ್ನೂ ಹೆಚ್ಚಿನ ವಿವರಗಳನ್ನು ಕೋರಲಾಗಿರುವುದರಿಂದ ಸದರಿ ಮಾಹಿತಿಗಳನ್ನು EMIS ತಂತ್ರಾಂಶದಲ್ಲಿ ಸಂಗ್ರಹಿಸಲು ಕ್ರಮ ಕೈಗೊಳ್ಳಲಾಗಿದೆ.

English summary
Ahead of Karnataka assembly elections 2023. Chief Minister Basavaraj Bommai stayed transfer of employees.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X