ಶಿವಾಜಿ ಪ್ರತಿಮೆ ಪಾಲಿಟಿಕ್ಸ್: ಸಿದ್ದರಾಮಯ್ಯ ವಿರುದ್ದ ಬಸವರಾಜ ಬೊಮ್ಮಾಯಿ ಸವಾಲ್
ಚುನಾವಣೆ ಹತ್ತಿರವಾಗುತ್ತಿದ್ದಂತೆ ಪ್ರತಿಮೆ ಪಾಲಿಟಿಕ್ಸ್ ಜೋರಾಗಿದ್ದು, ರಾಜಹಂಸಗಡ ಕೋಟೆಗೆ ಸಿದ್ದರಾಮಯ್ಯ ಹಣ ಕೊಟ್ಟಿದ್ರೆ ಅವರಿಂದಲೇ ಪ್ರತಿಮೆ ಉದ್ಘಾಟಿಸುತ್ತಿದ್ದೆ ಎಂದು ಸಿಎಂ ಹೇಳಿದ್ದಾರೆ.
ಬೆಳಗಾವಿ,ಮಾರ್ಚ್2: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಪ್ರತಿಮೆ ಪೊಲಿಟಿಕ್ಸ್ ಜೋರಾಗಿದ್ದು, ಬೆಳಗಾವಿ ಜಿಲ್ಲೆಯಲ್ಲಿ ನಿರ್ಮಾಣವಾಗಿರುವ ಶಿವಾಜಿ ಪ್ರತಿಮೆ ಕ್ರೆಡಿಟ್ ಫೈಟ್ ಗಾಗಿ ಗೋಕಾಕ್ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಮತ್ತು ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ಕದನ ಶುರುವಾಗಿದೆ.
ಬೆಳಗಾವಿಯ ರಾಜಹಂಸಗಡ ಕೋಟೆಯಲ್ಲಿ ಶಿವಾಜಿ ಮೂರ್ತಿಯನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನಾವರಣಗೊಳಿಸಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದದ ಅವರು, ಸಿದ್ದರಾಮಯ್ಯ ಅವರು 2013- 2018 ರವರೆಗೆ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ರಾಜಹಂಸಗಡ ಕೋಟೆ ಅಭಿವೃದ್ಧಿಗೆ ಒಂದು ರೂಪಾಯಿ ಅನುದಾನ ಬಿಡುಗಡೆ ಮಾಡಿದ್ದರೂ ನಾಳೆ ಅವರನ್ನೇ ಕರೆತಂದು ಶಿವಾಜಿ ಮೂರ್ತಿ ಉದ್ಘಾಟನೆ ಮಾಡಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸವಾಲು ಹಾಕಿದರು.

ನಮ್ಮ ಸರಕಾರದ ಅವಧಿಯಲ್ಲಿ ಇಲ್ಲಿನ ಕೋಟೆ ಅಭಿವೃದ್ಧಿಗೆ 5. ಕೋಟಿ ರೂ. ಮೂರ್ತಿ ಪ್ರತಿಷ್ಠಾಪನೆಗೆ 50 ಲಕ್ಷ ರೂ. ಕೊಟ್ಟಿದ್ದೇವೆ ಎಂದು ಹೇಳಿದರು.
ಇನ್ನೂ ಮಾರ್ಚ್ 5 ರಂದು ಸ್ಥಳೀಯ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮತ್ತೊಮ್ಮೆ ಶಿವಾಜಿ ಮೂರ್ತಿ ಉದ್ಘಾಟಿಸುತ್ತಿರುವ ಕುರಿತು ಮಾತನಾಡಿ, ಇದು ಸರಕಾರಿ ಕಾರ್ಯಕ್ರಮ, ಹಾಗಾಗಿ ಉದ್ಘಾಟನೆಯ ದಿನವನ್ನು ನಾವು ನಿರ್ಧಾರ ಮಾಡುತ್ತೇವೆ. ಇಂದು ಉದ್ಘಾಟನೆಯಾಗಿದೆ. ಮತ್ತೊಮ್ಮೆ ಉದ್ಘಾಟನೆ ಮಾಡಲು ಬರುವುದಿಲ್ಲ. ಅವರ ಪಕ್ಷದ ಕಾರ್ಯಕ್ರಮ ಬೇಕಿದ್ದರೆ ಮಾಡಿಕೊಳ್ಳಲಿ ಎಂದರು.

ಕಾಂಗ್ರೆಸ್ ಕಾರ್ಯಕ್ರಮಕ್ಕೆ ತಲಾ 500 ರೂ. ಕೊಟ್ಟು ಜನರನ್ನು ಕರೆತರಬೇಕು ಎಂದು ಸಿದ್ದರಾಮಯ್ಯ ಅವರು ಹೇಳಿರುವ ವಿಡಿಯೋ ವೈರಲ್ ಆಗಿರುವ ಬಗ್ಗೆ ಮಾತನಾಡಿಡ, ಅವರು ಮೊದಲಿಂದಲೂ ಹೀಗೆ ದುಡ್ಡು ಕೊಟ್ಟು ಜನರನ್ನು ಕರೆತರುತ್ತಾ ಬಂದಿದ್ದಾರೆ. ಅದರಲ್ಲಿ ಆಶ್ಚರ್ಯದ ಸಂಗತಿ ಏನೂ ಇಲ್ಲ. ಈಗ ಅವರ ಹೇಳಿಕೆ ಹೊರಬಿದ್ದಿದೆ ಅಷ್ಟೇ ಎಂದು ಹೇಳಿದರು.
ಈಗಾಗಲೇ ಮಾರ್ಚ್ 5ರಂದು ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ಆಯೋಜಿಸಿ ಶಿವಾಜಿ ಮೂರ್ತಿ ಉದ್ಘಾಟಿಸಬೇಕು ಎಂಬ ಸ್ಥಳೀಯ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪ್ಲಾನ್ ಹಾಕಿಕೊಂಡಿದರು. ಈ ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿ ಕರ್ನಾಟಕ ಮಹಾರಾಷ್ಟ್ರದ ಹಲವು ಕಾಂಗ್ರೆಸ್ ನಾಯಕರು ಆಗಮಿಸಲಿದ್ದಾರೆಂದು ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದರು. ಆದರೆ, ಈ ಪ್ರತಿಮೆ ವಿಚಾರದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಎಂಟ್ರಿ ಕೊಟ್ಟಿದ್ದು, ಮುಖ್ಯಮಂತ್ರಿಗಳಿಂದ ಗುರುವಾರವೇ ಉದ್ಘಾಟನೆ ಮಾಡಿಸಿದ್ದು. ಸ್ಥಳೀಯ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಹಿನ್ನಡೆಯಾಗಿದೆ.












Click it and Unblock the Notifications