ರಾಜ್ಯದ ಕೊರೊನಾ ಸ್ಥಿತಿಗತಿ; ಸಿಎಂ ಪ್ರಕಟಿಸಿದ ಮಹತ್ವದ ತೀರ್ಮಾನಗಳು

ಬೆಂಗಳೂರು, ಆಗಸ್ಟ್‌ 14: ರಾಜ್ಯದ ಕೊರೊನಾ ಸ್ಥಿತಿಗತಿ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಶನಿವಾರ ಸಭೆ ನಡೆಸಿದ್ದು, ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದ್ದಾರೆ.

ಮುಖ್ಯಮಂತ್ರಿಗಳ ಗೃಹ ಕಚೇರಿ "ಕೃಷ್ಣಾ"ದಲ್ಲಿ ಶನಿವಾರ ಸಂಜೆ ತಜ್ಞರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಹಲವು ಮಹತ್ವದ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ. ಪ್ರಮುಖವಾಗಿ, ರಾಜ್ಯದಲ್ಲಿ ಶಾಲೆಗಳನ್ನು ಪುನರಾರಂಭಿಸುವ ಸಂಬಂಧ ನಿರ್ಧಾರ ಪ್ರಕಟಿಸಲಾಗಿದೆ.

ಕರ್ನಾಟಕದಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇಕಡಾ 2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಮಾತ್ರ ಒಂಬತ್ತನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗಿನ ವಿದ್ಯಾರ್ಥಿಗಳಿಗೆ ಭೌತಿಕವಾಗಿ ತರಗತಿಗಳನ್ನು ಆರಂಭಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

CM Basavaraj Bommai Took Several Important Measures Over Corona Situation In State

ಶೇ.2ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇರುವ ಜಿಲ್ಲೆಗಳಲ್ಲಿ ಹಾಗೂ ಗಡಿ ಭಾಗದ ತಾಲ್ಲೂಕಿನಲ್ಲಿ ಪರಿಸ್ಥಿತಿ ಅವಲೋಕಿಸಿ ಕ್ರಮ ಕೈಗೊಳ್ಳಲಾಗುವುದಾಗಿ ಹೇಳಿದ್ದಾರೆ. ಶಿಕ್ಷಕರು ಹಾಗೂ ಪೋಷಕರು ಕಡ್ಡಾಯವಾಗಿ ಲಸಿಕೆ ಪಡೆದಿರಬೇಕು. ಮಕ್ಕಳಲ್ಲಿ ಸೋಂಕು ಪತ್ತೆಯಾದರೆ ಶಾಲೆಯನ್ನು ಒಂದು ವಾರ ಬಂದ್ ಮಾಡಿ ಸ್ಯಾನಿಟೈಸ್ ಮಾಡಲಾಗುವುದು ಎಂದರು.

ಕೊರೊನಾ ನಿರ್ವಹಣೆಗೆ ಜಿಲ್ಲಾವಾರು ಯೋಜನೆ:
ಕೊರೊನಾ ನಿರ್ವಹಣೆಗೆ ಜಿಲ್ಲಾವಾರು ಯೋಜನೆ ರೂಪಿಸಲು ಸೂಚನೆ ನೀಡಲಾಗುವುದು. ಆಯಾ ಜಿಲ್ಲೆಗಳ ಪರಿಸ್ಥಿತಿಗೆ ತಕ್ಕಂತೆ ಯೋಜನೆಗಳನ್ನು ರೂಪಿಸಲಾಗುವುದು. ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ನೀಡಲು ಹಾಗೂ ಪರೀಕ್ಷಾ ಪ್ರಮಾಣ ಹೆಚ್ಚಿಸಲು ತೀರ್ಮಾನಿಸಲಾಗುವುದು ಎಂದು ಮಾಹಿತಿ ನೀಡಿದರು.

ಈ ಜಿಲ್ಲೆಗಳಲ್ಲಿ ಪರೀಕ್ಷಾ ಪ್ರಮಾಣ ಹೆಚ್ಚಿಸಲು ತೀರ್ಮಾನ:
ಕೇರಳ ಹಾಗೂ ಮಹಾರಾಷ್ಟ್ರ ಗಡಿ ಭಾಗದಿಂದ 10 ಕಿ.ಮೀ ವ್ಯಾಪ್ತಿಯಲ್ಲಿನ ಹಳ್ಳಿಗಳಲ್ಲಿ ಲಸಿಕೆ ನೀಡುವುದನ್ನು ತೀವ್ರಗೊಳಿಸಲು ಹಾಗೂ ಪರೀಕ್ಷಾ ಪ್ರಮಾಣ ಹೆಚ್ಚಿಸಲು ತೀರ್ಮಾನ ಮಾಡಲಾಗಿದೆ. ರಾಯಚೂರು, ಕಲಬುರಗಿ, ಬಳ್ಳಾರಿ, ಬೀದರ್, ಕೊಪ್ಪಳ, ಹಾವೇರಿ, ವಿಜಯಪುರ, ತುಮಕೂರು, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಪರೀಕ್ಷಾ ಪ್ರಮಾಣ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದರು.

ಮುಂದಿನ ಎರಡು ವಾರದಲ್ಲಿ ರಾಜ್ಯದಲ್ಲಿ ಬೆಂಗಳೂರು, ಮೈಸೂರು, ಶಿವಮೊಗ್ಗ, ಕಲಬುರಗಿ, ಬೆಳಗಾವಿ, ಹುಬ್ಬಳ್ಳಿಗಳಲ್ಲಿ ಆರು ಜೆನೋಮ್ ಪರೀಕ್ಷಾ ಪ್ರಯೋಗಾಲಯಗಳನ್ನು ಸ್ಥಾಪಿಸಲು ಸೂಚನೆ ನೀಡಲಾಗಿದೆ. ಡೆಲ್ಟಾ ಹಾಗೂ ಇತರೆ ರೂಪಾಂತರಗಳ ಅಧ್ಯಯನ ನಡೆಸಲು ಇದು ಅನುಕೂಲವಾಗಲಿದೆ ಎಂದರು.

CM Basavaraj Bommai Took Several Important Measures Over Corona Situation In State

ರಾಜ್ಯದಲ್ಲಿ ಈವರೆಗೆ ನಾಲ್ಕು ಕೋಟಿ ಕೊರೊನಾ ಲಸಿಕೆ ವಿತರಣೆ:
ರಾಜ್ಯದಲ್ಲಿ ಇಂದಿನವರೆಗೆ ಸುಮಾರು ನಾಲ್ಕು ಕೋಟಿ ಲಸಿಕೆ ಹಾಕಲಾಗಿದೆ. 14.89 ಲಕ್ಷ ಡೋಸ್ ಲಸಿಕೆ ಲಭ್ಯವಿದ್ದು, ಶೀಘ್ರದಲ್ಲಿಯೇ ಕೇಂದ್ರ ಆರೋಗ್ಯ ಸಚಿವರನ್ನು ಭೇಟಿಯಾಗಿ ರಾಜ್ಯಕ್ಕೆ ಹಂಚಿಕೆಯಾಗುವ ಲಸಿಕೆಯ ಡೋಸ್‌ಗಳನ್ನು 65 ಲಕ್ಷದಿಂದ ಒಂದು ಕೋಟಿಗೆ ಹೆಚ್ಚಿಸಲು ಮನವಿ ಮಾಡಲಾಗುವುದು ಎಂದರು.

Recommended Video

      ಮಗನನ್ನು ರಾಜಕೀಯಕ್ಕೆ ತರಲು ಸೈಲೆಂಟಾಗಿ ಪ್ಲಾನ್ ಮಾಡ್ತಿದ್ದಾರಾ CM ಬೊಮ್ಮಾಯಿ? | Oneindia Kannada

      ಬೆಂಗಳೂರು ನಗರ ಪ್ರದೇಶದಲ್ಲಿ ಹಲವು ಕ್ರಮ:
      ಬೆಂಗಳೂರು ನಗರ ಪ್ರದೇಶದಲ್ಲಿ ಕೊರೊನಾ ನಿರ್ವಹಣೆ ಕುರಿತಂತೆ ಹಲವು ಕ್ರಮಗಳನ್ನು ಕೈಗೊಳ್ಳಲಾಗುವುದು. ಮಕ್ಕಳಿಗೆ ಐಸಿಯು ಬೆಡ್‌ಗಳನ್ನು ಮೀಸಲಿರಿಸಲು ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಶೇ 0.75ರಷ್ಟು ಪಾಸಿಟಿವಿಟಿ ದರ ಇದೆ. ಶೇ. 2ರಷ್ಟು ಪಾಸಿಟಿವಿಟಿ ದರ ಹಾಗೂ ಶೇ 40ರಷ್ಟು ಆಕ್ಸಿಜನ್ ಬೆಂಬಲಿತ ಹಾಸಿಗೆಗಳಿಗೆ ಸೋಂಕಿತರು ದಾಖಲಾದರೆ, ಮುಂದೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಅಧಿಕಾರವಿದೆ ಎಂದು ತಿಳಿಸಿದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+