ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನೆರೆ ರಾಜ್ಯಗಳ ಅಕ್ರಮ ನೀರಾವರಿ ಯೋಜನೆಗಳಿಗೆ ಅನುಮತಿ ನೀಡಬೇಡಿ: ಬಸವರಾಜ ಬೊಮ್ಮಾಯಿ ಆಗ್ರಹ

|
Google Oneindia Kannada News

ಬೆಂಗಳೂರು ನ.15: ಪಕ್ಕದ ರಾಜ್ಯಗಳ ಅಕ್ರಮ ನೀರಾವರಿ ಯೋಜನೆಗಳಿಗೆ ಅನುಮತಿ ನೀಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಆಂಧ್ರಪ್ರದೇಶದ ತಿರುಪತಿಯಲ್ಲಿ ಭಾನುವಾರ ನಡೆದ ದಕ್ಷಿಣ ವಲಯ ಪರಿಷತ್ತಿನ 29ನೇ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದ್ದಾರೆ.

ದಕ್ಷಿಣ ಭಾರತದ ರಾಜ್ಯಗಳೆಲ್ಲವೂ ಪ್ರಾಕೃತಿಕವಾಗಿ ಸಂಪರ್ಕಿತವಾಗಿರುವುದರಿಂದ ನಾವೆಲ್ಲರೂ ಒಟ್ಟಾಗಿ ಕೆಲಸಮಾಡುವುದು ಅನಿವಾರ್ಯ. ದಕ್ಷಿಣದ ರಾಜ್ಯಗಳು ಸ್ವತಂತ್ರವಾಗಿ ಅಲ್ಲದೆ, ಪರಸ್ಪರ ಅವಲಂಬಿತರಾಗಿ ಕಾರ್ಯನಿರ್ವಹಿಸಬೇಕಾದ ಪರಿಸ್ಥಿತಿ ಪರಿಸ್ಥಿತಿ ಇದೆ. ರಾಷ್ಟ್ರದ ಒಳಿತಿಗಾಗಿ ಒಮ್ಮತದಿಂದ ಕೆಲಸ ಮಾಡಿದಾಗ ಭಾರತದ ಅಭಿವೃದ್ಧಿ ಸಾಧ್ಯವೆಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.

ದಕ್ಷಿಣ ರಾಜ್ಯಗಳ ನಿರ್ಲಕ್ಷಿಸಿ ಸಮಗ್ರ ಭಾರತದ ಪ್ರಗತಿ ಅಸಾಧ್ಯ: ಅಮಿತ್ ಶಾದಕ್ಷಿಣ ರಾಜ್ಯಗಳ ನಿರ್ಲಕ್ಷಿಸಿ ಸಮಗ್ರ ಭಾರತದ ಪ್ರಗತಿ ಅಸಾಧ್ಯ: ಅಮಿತ್ ಶಾ

ಅಕ್ರಮ ಯೋಜನೆಗಳಿಗೆ ಕಡಿವಾಣ ಹಾಕಿ

ಸಹ ಜಲಾನಯನ ಪ್ರದೇಶಗಳನ್ನು ಹೊಂದಿರುವ ರಾಜ್ಯಗಳ ಪಾಲನ್ನು ಇನ್ನೂ ನಿರ್ಧರಿಸಿಲ್ಲ. ಆದರೂ ಸಹ ತಮಿಳುನಾಡು ಕಾವೇರಿ- ವಗೈ- ಗುಂಡಾರ್ ಸಂಪರ್ಕ ಕಾಮಗಾರಿಯನ್ನು ಮುಂದುವರೆಸಿದೆ. ಇದಕ್ಕೆ ಕಾನೂನಿನಲ್ಲಿ ಅವಕಾಶವಿರುವುದಿಲ್ಲ. ಆದ್ದರಿಂದ ಕಾವೇರಿ- ವಗೈ- ಗುಂಡಾರ್ ಸಂಪರ್ಕದ ಪ್ರಸ್ತಾವನೆಯನ್ನು ಅನುಮೋದಿಸಬಾರದು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು.

CM Basavaraj Bommai urged the central to reject illegal water projects

ಗೋದಾವರಿ, ಕಾವೇರಿ ಮತ್ತು ಇತರೆ ನದಿಗಳ ಜೋಡಣೆ ಯೋಜನೆ ಬಗ್ಗೆ ರಾಜ್ಯ ತನ್ನ ಅಭಿಪ್ರಾಯವನ್ನು ಈಗಾಗಲೇ ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆಗೆ ತಿಳಿಸಿದೆ. ಕಾವೇರಿ, ಕೃಷ್ಣಾ ಮತ್ತು ಪೆನ್ನಾರ್ ಜಲಾನಯನ ಪ್ರದೇಶದಲ್ಲಿ ರಾಜ್ಯಕ್ಕೆ ತನ್ನ ಪಾಲಿನ ನೀರು ಹಂಚಿಕೆಯಾಗಬೇಕೆಂಬ ವಾದವನ್ನು ಸಿಎಂ ಸ್ಪಷ್ಟಪಡಿಸಿದರು.

ಕೃಷ್ಣಾ ಜಲಾಶಯದ ಮೂಲಕ ಶ್ರೀಶೈಲಂ ಜಲಾಶಯದಲ್ಲಿ ಅಪಾರ ಮೊತ್ತದ ಹೆಚ್ಚುವರಿ ನೀರನ್ನು ಬಳಸಿಕೊಂಡು ಪಲಮುರು ರಂಗಾರೆಡ್ಡಿ ಮತ್ತು ನಕ್ಕಲಗಂಡಿಯಲ್ಲಿ ಏತನೀರಾವರಿ ಯೋಜನೆಗಳನ್ನು ಕೈಗೊಳ್ಳಲು ತೆಲಂಗಾಣ ಅಥವಾ ಅಪೆಕ್ಸ್ ಮಂಡಳಿಗೆ ಯಾವುದೇ ಅಧಿಕಾರವಿಲ್ಲ. 2050 ರಲ್ಲಿ ಪರಿಶೀಲನೆಗೆ ಒಳಪಡುವ ನೆಪದಲ್ಲಿ ಉಳಿಕೆ ನೀರನ್ನು ಬಳಸುವ ತೆಲಂಗಾಣ ರಾಜ್ಯದ ರಾಜೀವ್ ಗಾಂಧಿ ಸಂಗಮ ಬಂಡಾ ಬ್ಯಾರೇಜ್ ನಿರ್ಮಾಣಕ್ಕೆ ಕರ್ನಾಟಕದ ವಿರೋಧವಿದೆ. ಶಾಶ್ವತ ಯೋಜನೆಗಳಿಂದಾಗಿ ಉಳಿಕೆ ನೀರನ್ನು ಬಳಸಲು ಅನುಮತಿ ನೀಡಿದರೆ ಕರ್ನಾಟಕ ತನಗೆ ದೊರೆಯಬೇಕಾದ ಸಮಪಾಲಿನಿಂದ ವಂಚಿತವಾಗಲಿದೆ. ಈ ಬಗ್ಗೆ ಜಂಟಿ ಸಮೀಕ್ಷೆಯಲ್ಲಿ ರಾಜ್ಯ ಕೈಜೋಡಿಸಲು ಸಿದ್ಧವಿದೆ ಎಂದು ಮುಖ್ಯಮಂತ್ರಿ ಹೇಳಿದರು.

ತುಂಗಭದ್ರಾ ನದಿಗೆ ಅಡ್ಡಲಾಗಿ ಆಂಧ್ರಪ್ರದೇಶ ನಿರ್ಮಿಸುತ್ತಿರುವ ಗುಂದ್ರವುಲು ಯೋಜನೆಗೆ ಸಂಬಂಧಿಸಿದಂತೆ, ಕರ್ನಾಟಕದಲ್ಲಿ ಮುಳುಗಡೆಯಾಗಲಿರುವ ಗ್ರಾಮಗಳು ಮತ್ತು ಭೂಪ್ರದೇಶದ ಕುರಿತು ಜಂಟಿ ಸಮೀಕ್ಷೆಯಾಗಬೇಕು. ನ್ಯಾಯಮಂಡಳಿಗೆ ಸಲ್ಲಿಸಿರುವಂತೆ ನೀರು ಹಂಚಿಕೆಯ ವಿವರಗಳನ್ನು ಹಾಗೂ ಕೇಂದ್ರ ಸರ್ಕಾರದಿಂದ ಪಡೆದಿರುವ ಅನುಮೋದನೆಗಳ ವಿವರಗಳನ್ನು ಸಲ್ಲಿಸುವಂತೆ ಕೋರಿದರು.

CM Basavaraj Bommai urged the central to reject illegal water projects

ನದಿ ನೀರಿನ ಹಂಚಿಕೆಯ ಹೊರತಾಗಿ ಕೃಷ್ಣಾ ನೀರಿಗೆ ಸಂಬಂಧಿಸಿದಂತೆ ಆಂದ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಯಾವುದೇ ಯೋಜನೆಗಳಿಗೆ ಕರ್ನಾಟಕದ ಅನುಮತಿ ಇರುವುದಿಲ್ಲ. ಜಲ ನ್ಯಾಯಮಂಡಳಿ ತೀರ್ಪನ್ನು ಉಲ್ಲಂಘಿಸಿ ಹೆಚ್ಚುವರಿ ನೀರಿನ ಬಳಕೆಗೆ ಯೋಜಿಸಿರುವ ಬೃಹತ್ ಮಟ್ಟದ ಶಾಶ್ವತ ಯೋಜನೆಗಳಿಗೆ ಶಾಸನಬದ್ಧ ಅನುಮೋದನೆಯನ್ನು ನೀಡಬಾರದು ಎಂದು ಮುಖ್ಯಮಂತ್ರಿಗಳು ಪುನರುಚ್ಛರಿಸಿದರು.

ಅಂತರರಾಜ್ಯ ಗೃಹ ಇಲಾಖೆಗಳ ಸಮನ್ವಯ ಹಲವು ಅಪರಾಧಗಳನ್ನು ತಡೆಗಟ್ಟಲು ಅಗತ್ಯವಾಗಿದೆ. ಗಡಿಗಳಲ್ಲಿ ಸಂಪರ್ಕಜಾಲಗಳನ್ನು ಬಲಪಡಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದೇ ಸಂದರ್ಭದಲ್ಲಿ ಕೋರಿದರು.

ಕರ್ನಾಟಕ ಹಾಗೂ ನೆರೆರಾಜ್ಯಗಳ ನಡುವೆ ಅಂತರರಾಜ್ಯ ಪರಸ್ಪರ ಸಾರಿಗೆ ಒಪ್ಪಂದಕ್ಕೆ ಸಂಬಂಧಿಸಿದಂತೆ ತೆಲಂಗಾಣ, ಪುದುಚೇರಿ, ತಮಿಳುನಾಡು, ಆಂಧ್ರಪ್ರದೇಶ ಮತ್ತು ಕೇರಳ ರಾಜ್ಯಗಳ ಒಪ್ಪಿಗೆಯನ್ನು ನಿರೀಕ್ಷಿಸಲಾಗಿದ್ದು, ಈ ಬಗ್ಗೆ ತ್ವರಿತ ಕ್ರಮಕ್ಕೆ ಮನವಿ ಮಾಡಿದರು.

ಕರ್ನಾಟಕ ನವೀಕರಿಸಬಹುದಾದ ಇಂಧನ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ರಾಜ್ಯವಾಗಿದ್ದು, ಕೇಂದ್ರ ಸರ್ಕಾರದ ನವೀಕರಿಸಬಹುದಾದ ಖರೀದಿ ಬದ್ಧತೆ ಗುರಿಗಳನ್ನು ಸಾಧಿಸಿರುವ ಏಕೈಕ ರಾಜ್ಯ ಕರ್ನಾಟಕ. ಹೂಡಿಕೆದಾರರ ದೃಷ್ಟಿಯಿಂದ ಅಂತರರಾಜ್ಯ ದರಪಟ್ಟಿಯಲ್ಲಿನ ವ್ಯತ್ಯಾಸವನ್ನು ತೆಗೆದುಹಾಕುವಂತೆ ಬೊಮ್ಮಾಯಿ ಮನವಿ ಮಾಡಿದರು.

CM Basavaraj Bommai urged the central to reject illegal water projects

ರಾಜ್ಯ ಸರ್ಕಾರ ಕೋರ್ ಡಿಬಿಟಿ ವೇದಿಕೆಯನ್ನು ಸೃಜಿಸಿದ್ದು, ಫಲಾನುಭವಿಗಳ ನಿಖರ ಗುರುತನ್ನು ಖಾತ್ರಿಪಡಿಸುತ್ತದೆ. ನಂಬಲರ್ಹವಲ್ಲದ ಡಾಟಾಬೇಸ್ ಸೃಜನೆ ತಡೆಗಟ್ಟುವುದರಿಂದ ಯುಎಡಿಎಐ ಮತ್ತು ಎನ್‍ಪಿಸಿಐ ಸಂಪರ್ಕಿಸಿ ನಕಲಿ ದಾಖಲೆಗಳ ಸೃಷ್ಟಿಗೆ ಕಾರಣವಾಗಿದೆ. ಆದ್ದರಿಂದ ಕರ್ನಾಟಕ ಸರ್ಕಾರ ತನ್ನ ಎಲ್ಲಾ ಫಲಾನುಭವಿ ಕೇಂದ್ರಿತ ಯೋಜನೆಗಳನ್ನು ರಾಜ್ಯ ಕೋರ್ ಡಿಬಿಟಿ ವೇದಿಕೆಗೆ ಅಳವಡಿಸುವುದಾಗಿ ತನ್ನ ಆಯವ್ಯಯದಲ್ಲಿ ಘೋಷಿಸಿದೆ ಎಂದು ಮುಖ್ಯಮಂತ್ರಿ ಸಭೆಯಲ್ಲಿ ಮಾತನಾಡಿದರು.

ಸಭೆಯ ಅಧ್ಯಕ್ಷತೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ವಹಿಸಿದ್ದರು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ, ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಜಲ ಸಂಪನ್ಮೂಲ ಇಲಾಖೆ ಎಸಿಎಸ್ ರಾಕೇಶ್ ಸಿಂಗ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ, ಇಂಟೆಲಿಜೆನ್ಸ್ ವಿಭಾಗದ ಎಡಿಜಿಪಿ ದಯಾನಂದ ಅವರು ಸಭೆಯಲ್ಲಿ ಉಪಸ್ಥಿತರಿದ್ದರು.

ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ, ಲಕ್ಷ್ಯದ್ವೀಪದ ಆಡಳಿತಗಾರ ಪ್ರಫುಲ್ ಪಟೇಲ್, ಪುದುಚೆರಿ ಲೆಫ್ಟಿನೆಂಟ್ ಗವರ್ನರ್ ಡಾ. ತಮಿಲಿಸಾಯಿ ಸೌಂದರಾಜನ್, ಪುದುಚೆರಿ ಮುಖ್ಯಮಂತ್ರಿ ಎನ್ ರಂಗಸ್ವಾಮಿ ಸಭೆಯಲ್ಲಿ ಉಪಸ್ಥಿತರಿದ್ದರು.

Recommended Video

ರೇಡಿಯೋದಿಂದ ರಾಜಕೀಯದ ವರೆಗೂ ಲಾವಣ್ಯ ನಡೆದು ಬಂದ ಹಾದಿ | Oneindia Kannada

English summary
Chief Minister Basavaraja Bommai has urged the central government to reject neighboring states illegal water projects.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X