ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಎಚ್ಚರಿಕೆ ಕೊಟ್ಟ ಕೇಂದ್ರ ಸಚಿವ ಅಮಿತ್ ಶಾ!

|
Google Oneindia Kannada News

ಬೆಂಗಳೂರು, ಜು.31: ಎರಡು ದಿನಗಳ ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಕೇಂದ್ರ ಸಚಿವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಮಹತ್ವದ ಚರ್ಚೆ ನಡೆಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ತಮ್ಮನ್ನು ಆಯ್ಕೆ ಮಾಡಿದ್ದಕ್ಕೆ ಕೃತಜ್ಞತೆ ಸಲ್ಲಿಸಿದರು. ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಅವರ ನಿರೀಕ್ಷೆಗೆ ತಕ್ಕಂತೆ ಕೆಲಸ ನಿರ್ವಹಿಸುವುದಾಗಿ ತಿಳಿಸಿದರು. ಸುಮಾರು 40 ನಿಮಿಷಗಳಿಗೂ ಹೆಚ್ಚು ಕಾಲ ಪ್ರಧಾನಿ ಮೋದಿ ಅವರೊಂದಿಗೆ ಪ್ರವಾಹ ಪರಿಸ್ಥಿತಿ, ಕೋವಿಡ್ ನಿಯಂತ್ರಣ ಹಾಗೂ ವಿವಿಧ ಅಭಿವೃದ್ಧಿ ಯೋಜನೆಗಳ ಕುರಿತು ಚರ್ಚೆ ನಡೆಸಿದರು.

ಒಂದು ವಾರದೊಳಗೆ ಸಂಪುಟ ವಿಸ್ತರಣೆ; ಸಿಎಂ ಬೊಮ್ಮಾಯಿಒಂದು ವಾರದೊಳಗೆ ಸಂಪುಟ ವಿಸ್ತರಣೆ; ಸಿಎಂ ಬೊಮ್ಮಾಯಿ

ಕೋವಿಡ್ ನಿಯಂತ್ರಣಕ್ಕೆ ಹೆಚ್ಚಿನ ಗಮನ ಹರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಲಹೆ ನೀಡಿದ್ದಾರೆ. ರಾಜ್ಯದ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ಅಗತ್ಯವಿರುವ ಎಲ್ಲ ಸಹಕಾರ ನೀಡುವುದಾಗಿ ಇದೇ ಸಂದರ್ಭದಲ್ಲಿ ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ.

ಆದರೆ ತಮ್ಮನ್ನು ಭೇಟಿ ಮಾಡಿದ್ದ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಎಚ್ಚರಿಕೆ ಕೊಟ್ಟಿದ್ದಾರೆ. ಅದಕ್ಕೆ ಸಿಎಂ ಬೊಮ್ಮಾಯಿ ಕೊಟ್ಟ ಉತ್ತರವೇನು? ಮುಂದಿದೆ.

ಪ್ರಧಾನಿ ಮೋದಿಗೆ ಸಿಎಂ ಬೊಮ್ಮಾಯಿ ಮಹತ್ವದ ಮನವಿ

ಪ್ರಧಾನಿ ಮೋದಿಗೆ ಸಿಎಂ ಬೊಮ್ಮಾಯಿ ಮಹತ್ವದ ಮನವಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಅಭಿವೃದ್ಧಿ ಕುರಿತಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಿದ್ದಾರೆ. ಇದೇ ಸಂದರ್ಭದಲ್ಲಿ ಹುಬ್ಬಳ್ಳಿ-ಧಾರವಾಡಕ್ಕೆ ಏಮ್ಸ್ ಮಂಜೂರು ಮಾಡುವಂತೆಯೂ ಹಾಗೂ ರಾಯಚೂರಿಗೆ ಏಮ್ಸ್ ಮಾದರಿಯ ವೈದ್ಯಕೀಯ ಸಂಸ್ಥೆ ಮಂಜೂರು ಮಾಡುವಂತೆ ಮನವಿ ಮಾಡಿದ್ದಾರೆ. ಜೊತೆಗೆ ಕಲಬುರಗಿಯ ಇಎಸ್ಐ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯನ್ನು ಪ್ರಾದೇಶಿಕ ಏಮ್ಸ್ ಮಾದರಿಯ ಸಂಸ್ಥೆಯನ್ನಾಗಿ ಉನ್ನತೀಕರಿಸುವಂತೆ ಕೋರಿದರು. ಪ್ರಧಾನಿ ನರೇಂದ್ರ ಮೋದಿ ಅವರು, ಕರ್ನಾಟಕದ ಅಭಿವೃದ್ಧಿಗೆ ಎಲ್ಲ ಅಗತ್ಯ ಸಹಕಾರ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಭರವಸೆ ನೀಡಿದ್ದಾರೆ.

ಸಿಎಂ ಬೊಮ್ಮಾಯಿಗೆ ಅಮಿತ್ ಶಾ ಕೊಟ್ಟ ಎಚ್ಚರಿಕೆ!

ಸಿಎಂ ಬೊಮ್ಮಾಯಿಗೆ ಅಮಿತ್ ಶಾ ಕೊಟ್ಟ ಎಚ್ಚರಿಕೆ!

ಇದಕ್ಕೂ ಮೊದಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದ ಬಸವರಾಜ ಬೊಮ್ಮಾಯಿ ಅವರು, ಹೊಸದಾಗಿ ರಚಿಸಲಾಗಿರುವ ಸಹಕಾರ ಸಚಿವಾಲಯದ ಹೊಣೆ ವಹಿಸಿಕೊಂಡಿರುವ ಹಿನ್ನೆಲೆಯಲ್ಲಿ ಅವರಿಗೆ ಅಭಿನಂದನೆ ಸಲ್ಲಿಸಿದರು. ಜೊತೆಗೆ ರಾಜ್ಯದ ಪ್ರವಾಹ ಪರಿಸ್ಥಿತಿ, ಕೋವಿಡ್ 19 ನಿರ್ವಹಣೆ ಮೊದಲಾದ ವಿಷಯಗಳ ಕುರಿತು ಕೇಂದ್ರ ಗೃಹ ಸಚಿವರಿಗೆ ಮಾಹಿತಿ ನೀಡಿದರು.


ಸಿಎಂ ಬೊಮ್ಮಾಯಿ ಅವರಿಗೆ ಎಚ್ಚರಿಕೆ ಕೊಟ್ಟ ಸಮಿತ್ ಶಾ ಅವರು, ಇದೊಂದು ರೀತಿಯಲ್ಲಿ ಪರೀಕ್ಷೆಯ ಸಮಯ. ಹೀಗಾಗಿ ಸರಿಯಾಗಿ ಕೆಲಸ ಮಾಡಬೇಕು ಎಂದು ಎಚ್ಚರಿಸಿದ್ದಾರೆ. ಅದಕ್ಕೆ ಉತ್ತರಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಿನದ 24 ಗಂಟೆಯೂ ಕರ್ತವ್ಯ ನಿರ್ವಹಿಸುವ ಭರವಸೆನ್ನು ಅಮಿತ್ ಶಾ ಅವರಿಗೆ ಕೊಟ್ಟಿದ್ದಾರೆ ಎಂದು ಮುಖ್ಯಮಂತ್ರಿಗಳ ಸಚಿವಾಲಯ ಮಾಹಿತಿ ಕೊಟ್ಟಿದೆ.

ಮೇಕೆದಾಟು ಯೋಜನೆಗೆ ಅನುಮೋದನೆ

ಮೇಕೆದಾಟು ಯೋಜನೆಗೆ ಅನುಮೋದನೆ

ಜಲ ಸಂಪನ್ಮೂಲ ಸಚಿವರಾಗಿಯೂ ಈ ಹಿಂದೆ ಕೆಲಸ ಮಾಡಿದ ಅನುಭವವಿರುವ ಸಿಎಂ ಬೊಮ್ಮಾಯಿ ಅವರು, ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ಮೇಕೆದಾಟು ಯೋಜನೆಗೆ ಅನುಮೋದನೆ ನೀಡುವಂತೆ ಹಾಗೂ ಕೃಷ್ಣಾ ಮೇಲ್ದಂಡೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಣೆ ಮಾಡುವಂತೆ ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವ ಕುರಿತು ಸಹ ಸಿಎಂ ಬಸವರಾಜ ಬೊಮ್ಮಾಯಿ ಚರ್ಚೆ ನಡೆಸಿದ್ದಾರೆ.

ಜೊತೆಗೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಷಿ, ಕೇಂದ್ರ ವಾರ್ತಾ ಮತ್ತು ಪ್ರಸಾರ ಹಾಗೂ ಕ್ರೀಡೆ ಮತ್ತು ಯುವ ಸಬಲೀಕರಣ ಸಚಿವ ಅನುರಾಗ್ ಠಾಕುರ್ ಮೊದಲಾದವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ನೂತನ ಮುಖ್ಯಮಂತ್ರಿಗಳನ್ನು ಅಭಿನಂದಿಸಿದ ಕೇಂದ್ರದ ಸಚಿವರು, ರಾಜ್ಯದ ಅಭಿವೃದ್ದಿಗೆ ಎಲ್ಲ ರೀತಿಯ ಸಹಕಾರ ಕೊಡುವ ಭರವಸೆ ನೀಡಿದ್ದಾರೆ.

Recommended Video

ಮಂತ್ರಿ ಸ್ಥಾನದ ಆಕಾಂಕ್ಷಿಗಳಿಗೆ ಶುರುವಾಯ್ತು ಢವಢವ | Oneindia Kannada
ರಾಜ್ಯದ ಸಂಸದರಲ್ಲಿ ವಿಶೇಷ ಮನವಿ

ರಾಜ್ಯದ ಸಂಸದರಲ್ಲಿ ವಿಶೇಷ ಮನವಿ

ದೆಹಲಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಸಚಿವರು ಹಾಗೂ ಸಂಸತ್ ಸದಸ್ಯರೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ. ಸಭೆಯಲ್ಲಿ ರಾಜ್ಯದ ಅಭಿವೃದ್ಧಿಗೆ ಕೇಂದ್ರದಿಂದ ಹೆಚ್ಚಿನ ನೆರವು ಪಡೆಯಲು ಹಾಗೂ ಕೇಂದ್ರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಲು ಸಹಕಾರ ನೀಡುವಂತೆ ಕೋರಿದ್ದಾರೆ. ಕೇಂದ್ರದ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಸಂಸದರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವುದಾಗಿ ತಿಳಿಸಿದರು. ನಾಡಿನ ನೆಲ, ಜಲದ ರಕ್ಷಣೆಯಲ್ಲಿ ಸಂಸದರು ಸಹಕರಿಸುವಂತೆ ಸಂಸದರು ಹಾಗೂ ಮಂತ್ರಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಮನವಿ ಮಾಡಿದರು.


ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ರಾಜ್ಯದಲ್ಲಿ ಆರ್ಥಿಕ ಸುಸ್ಥಿರತೆ ತರುವುದರೊಂದಿಗೆ ಪ್ರವಾಹ ಪರಿಸ್ಥಿತಿ ಹಾಗೂ ಕೋವಿಡ್ ನಿಯಂತ್ರಣಕ್ಕೆ ಹೆಚ್ಚಿನ ಒತ್ತು ಕೊಡುವುದಾಗಿ ತಿಳಿಸಿದ್ದಾರೆ. ಇಂದು ಸಂಜೆ 5 ಗಂಟೆಗೆ ಬೆಂಗಳೂರಿಗೆ ಹಿಂದಿರುಗಲಿದ್ದಾರೆ.

English summary
Chief Minister Basavaraj Bommai has requested Prime Minister Narendra Modi to give approval to setting up an AIIMS (All India Institute of Medical Sciences) in Hubballi-Dharwad and an AIIMS-like institution in Raichur, which is identified as an aspirational district by NITI Aayog. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X