Get Updates
Get notified of breaking news, exclusive insights, and must-see stories!

SM Krishna : ಎಸ್.ಎಂ. ಕೃಷ್ಣ ಆರೋಗ್ಯದಲ್ಲಿ ಚೇತರಿಕೆ: ಸಿಎಂ ಬೊಮ್ಮಾಯಿ

ಬೆಂಗಳೂರು, ಸೆಪ್ಟಂಬರ್ 25: ರಾಜ್ಯದ ಹಿರಿಯ ನಾಯಕರು, ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರು ಆರೋಗ್ಯ ಚೇತರಿಕೆಯಾಗಿದೆ. ಎರಡು ‌ಮೂರು ದಿನಗಳಲ್ಲಿ ಆಸ್ಪತ್ರೆಯಿಂದ ಅವರು ಮನೆಗೆ ತೆರಳಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ತಿಳಿಸಿದರು.

ಭಾನುವಾರ ಸಂಜೆ ಎಸ್‌.ಎಂ.ಕೃಷ್ಣ ಅವರು ದಾಖಲಾಗಿರುವ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ಹಿರಿಯ ನಾಯಕರ ಆರೋಗ್ಯ ವಿಚಾರಿಸಿದರು. ನಂತರ ಸುದ್ದಿಗಾರರಿಗೆ ಜತೆ ಮಾತನಾಡಿ ಎಸ್‌.ಎಂ.ಕೃಷ್ಣ ಅವರ ಆರೋಗ್ಯ ಕುರಿತು ಮಾಹಿತಿ ನೀಡಿದರು.

ರಾಜ್ಯದ ಹಿರಿಯ ನಾಯಕ ಎಸ್ ಎಂ ಕೃಷ್ಣ ಜ್ವರದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ವೈದೇಹಿ ಆಸ್ಪತ್ರೆಗೆ ದಾಖಲಿಸಿದ್ದರು. ನಂತರ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದರಿಂದ ಮಣಿಪಾಲ್ ಆಸ್ಪತ್ರೆಗೆ ಸೇರಿಸಲಾಗಿದೆ. ನಿರಂತರ ಚಿಕಿತ್ಸೆಯಿಂದ ಈಗ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಮುಂದಿನ ಎರಡ್ಮೂರು ದಿನಗಳಲ್ಲಿ ಆಸ್ಪತ್ರೆಯಿಂದ ಅವರುನ್ನು ಬಿಡುಗಡೆ ಮಾಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ. ಹೀಗಾಗಿ ರಾಜ್ಯದ ಜನರು ಯಾವುದೇ ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ ಎಂದು ಮುಖ್ಯಮಂತ್ರಿಗಳು ಅಭಯ ನೀಡಿದರು.

CM Basavaraj Bommai Visit to Manipal Hospital for Enquiry About SM Krishna Health

ಸೋಮವಾರ ಅದ್ಧೂರಿ ದಸರಾ ಉದ್ಘಾಟನೆ

ಇದೇ ವೇಳೆ ದರಸಾ ಹಬ್ಬದ ಉದ್ಘಾಟನೆ ಕುರಿತು ಮಾತನಾಡಿದ ಅವರು, ಸೆಪ್ಟಂಬರ್ 26ರಂದು ಸೋಮವಾರ ದಸರಾ ಉದ್ಘಾಟನೆಗೆ ದೇಶದ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರು ಆಗಮಿಸುತ್ತಿದ್ದಾರೆ. ಅವರು ಚಾಮುಂಡೇಶ್ವರಿ ದೇವಿ ಪೂಜೆ ಮತ್ತು ದಸರಾ ಹಬ್ಬಕ್ಕೆ ಚಾಲನೆ ನೀಡಲಿದ್ದಾರೆ. ಕೊರೋನಾ ಭೀತಿ ಇಲ್ಲದೇ ಹಿನ್ನೆಲೆಯಲ್ಲಿ ಈ ವರ್ಷ ರಾಜ್ಯದಲ್ಲಿ ವಿಜೃಂಭಣೆಯಿಂದ ದಸರಾ ಆಚರಣೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ವಿವರಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+