ಭಜರಂಗದಳ ಬ್ಯಾನ್‌ಗೆ ಆಕ್ರೋಶ: ಭಜರಂಗಿಗಳು ಸಿಡಿದೆದ್ದರೆ ಕಾಂಗ್ರೆಸ್ ದೇಶಬಿಟ್ಟು ಹೋಗುತ್ತೆ: ಸಿಎಂ ಎಚ್ಚರಿಕೆ
ಧಾರವಾಡ, ಮೇ 02: ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಭಜರಂಗದಳ ನಿಷೇಧ ಕುರಿತು ಪ್ರಸ್ತಾಪಿಸಿದೆ. ಈ ಸಂಬಂಧ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿವೆ. ಇತ್ತ ಸಿಎಂ ಬಸವರಾಜ ಬೊಮ್ಮಾಯಿ ಅವರು ಹನುಮಂತನ ಭಕ್ತರು ಭಜರಂಗದಳದ ಭಜರಂಗಿಗಳು. ಅವರೇನಾದರು ಸಿಡಿದೆದ್ದರೆ ಕಾಂಗ್ರೆಸ್ ದೇಶ ಬಿಟ್ಟು ಹೋಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಮಂಗಳವಾರ ಜಿಲ್ಲೆಯ ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶಂಕರ ಪಾಟೀಲ್ ಮುನೇನಕೊಪ್ಪ ಅವರ ಪರ ಬೃಹತ್ ರೋಡ್ ಶೋ ನಡೆಸಿ ಮತಯಾಚನೆ ಮಾಡಿದರು. ಈ ವೇಳೆ ಮಾತನಾಡಿದ ಅವರು, ಸಾಮಾಜಿಕ ನ್ಯಾಯ ಎನ್ನುತ್ತಿದ್ದ ಕಾಂಗ್ರೆಸ್ ಅವರು ಮೀಸಲಾತಿ ಹೆಚ್ಚಳದ ನಮ್ಮ ನಿರ್ಧಾರವನ್ನು ಸಂವಿಧಾನ ವಿರೋಧಿಸಿ ಹಿಂಬಾಗಿಲ ಮೂಲಕ ಕೋರ್ಟ್ ಗೆ ಹೋದರು. ಈಗ ಭಜರಂಗ ದಳ ನಿಷೇಧ ಮಾಡುವುದಾಗಿ ಹೇಳುತ್ತಿದ್ದಾರೆ.

ಕಾಂಗ್ರೆಸ್ ದೇಶದ್ರೋಹ, ಭಯೋತ್ಪಾದನೆ ಮಾಡುವ ಪಿಎಫ್ಐ ಜೊತೆ ಭಜರಂಗದಳವನ್ನು ಸೇರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಈಗಾಗಲೇ ಪಿಎಫ್ಐ ಬ್ಯಾನ್ ಮಾಡಿದ್ದಾರೆ. ನಮ್ಮ ಪರಂಪರೆ, ನಮ್ಮ ಧರ್ಮ, ನಮ್ಮ ಇತಿಹಾಸವನ್ನು ಗಟ್ಟಿಕೊಳಿಸಿರುವುದು ಭಜರಂಗದಳ. ಹನುಮನ ಭಕ್ತರು ಒಬ್ಬೊಬ್ಬರು ಸಿಡಿದೆದ್ದು ನಿಂತರೆ ಕಾಂಗ್ರೆಸ್ ಪಕ್ಷ ದೇಶದಿಂದಲೇ ಬೇರು ಸಮೇತ ಕಿತ್ತು ಹೋಗಲಿದ್ದಾರೆ ಎಂದು ಅವರು ಗುಡುಗಿದರು.
#WATCH | PFI is already banned. Siddaramaiah govt withdrew cases of PFI. So they are saying that to appease Muslims they will ban Bajrang Dal. Congress is saying that PFI can't say that we will take revenge. Congress' manifesto looks like the manifesto of PFI and fundamentalist… pic.twitter.com/8rNrBszwxn
— ANI (@ANI) May 2, 2023
ಉತ್ತರದ ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನ ದೇವಸ್ಥಾನ ನಿರ್ಮಾಣ ಆಗುತ್ತಿದೆ. ದಕ್ಷಿಣದ ಅಂಜನಾದ್ರಿಯಲ್ಲಿ ಆಂಜನೇಯ ಸ್ವಾಮಿ ಅಭಿವೃದ್ಧಿ ಆಗುತ್ತಿದೆ ಎಂದು ಹಿಂದುತ್ವದ ಕುರಿತು ಅವರು ಹೇಳಿದರು.

ಇದು ಪಿಎಫ್‌ಐ ಪ್ರಚೋದಿತ ಪ್ರಣಾಳಿಕೆ: ಅಸ್ಸಾಂ ಸಿಎಂ ಬಿಸ್ವಾ
ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಪ್ರತಿಕ್ರಿಯಿಸಿದ ಅಸ್ಸಾಂ ಸಿಎಂ ಹಿಮಂತ್ ಬಿಸ್ವ ಶರ್ಮಾ ಅವರು, ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಮುಸ್ಲಿಮರ ಓಲೈಕೆಗಾಗಿ ಬಜರಂಗದಳ ನಿಷೇಧ ಕುರಿತು ಪ್ರಸ್ತಾಪಿಸಿದೆ. ಇದು ಪಿಎಫ್‌ಐ ಪ್ರಚೋದಿತ ಪ್ರಣಾಳಿಕೆ ಎಂದು ಅವರು ವಾಗ್ದಾಳಿ ನಡೆಸಿದರು. ನಿಷೇಧಗೊಂಡ ಪಿಎಫ್‌ಐ ಮನಸ್ಥಿತಿಯವರು, ಮುಸ್ಲಿಂ ಮೂಲಭೂತವಾದಿ ಮನಸ್ಥಿತಿಯವರು ಕಾಂಗ್ರೆಸ್ ಪ್ರಣಾಳಿಕೆ ತಯಾರಿಸಿದ್ದಾರೆ ಎಂದರು.
ಮತೀಯ ಸಂಘಟನೆ ವಿರುದ್ಧ ಕ್ರಮ ಎಂದ ಪಿ.ಚಿದಂಬರಂ
ಕಾಂಗ್ರೆಸ್ ಮಂಗಳವಾರ ಬಿಡುಗಡೆ ಮಾಡಿದ ಪ್ರಣಾಳಿಕೆಯಲ್ಲಿ ಭಜರಂಗದಳ ಸಂಘಟನೆಯನ್ನು ನಿಷೇಧ ಮಾಡುತ್ತೇವೆ ಎಂದು ಹೇಳಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮತೀಯ ಸಂಘಟನೆಗಳ ವಿರುದ್ಧ ಕಾನೂನು ಕ್ರಮ ಜರುಗಿಸಿವುದಾಗಿ ಹೇಳಿದ್ದೇವೆ. ನಿಷೇಧಿಸುತ್ತೇ ಎಂದು ಹೇಳಿಲ್ಲ ಎಂದು ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ತಿಳಿಸಿದರು.
-
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ











Click it and Unblock the Notifications