ಸಮಗ್ರ ದೇವಾಲಯ ನಿರ್ವಹಣಾ ವ್ಯವಸ್ಥೆಗೆ ಸಿಎಂ ಬೊಮ್ಮಾಯಿ ಚಾಲನೆ; ಏನಿದು ಯೋಜನೆ?
ಬೆಂಗಳೂರು, ಫೆಬ್ರವರಿ 23: ಮುಜರಾಯಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆ ಸಮಗ್ರ ದೇವಾಲಯ ನಿರ್ವಹಣಾ ವ್ಯವಸ್ಥೆ (Integrated Temple Management System-ITMS) ಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು (ಬುಧವಾರ) ಲೋಕಾರ್ಪಣೆ ಮಾಡಲಿದ್ದಾರೆ.
ಐಟಿಎಂಎಸ್ ಯೋಜನೆಯಿಂದ ಒಂದೇ ವೆಬ್‌ಸೈಟ್‌ನಲ್ಲಿ ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಎಲ್ಲಾ ದೇವಾಲಯಗಳ ಸಮಗ್ರ ಮಾಹಿತಿಗಳು ಜನರ ಬೆರಳ ತುದಿಯಲ್ಲೇ ಲಭ್ಯವಿರಲಿವೆ. ಅಲ್ಲದೇ ದೇವಾಲಯಗಳಲ್ಲಿ ಲಭ್ಯವಿರುವ ಸೇವೆಗಳನ್ನು ಆನ್‌ಲೈನ್ ಮೂಲಕ ಬುಕ್ಕಿಂಗ್ ಮಾಡುವ ವ್ಯವಸ್ಥೆ ಇರಲಿದೆ.
ದೇವಾಲಯಗಳಲ್ಲಿ ನಡೆಯುವ ಉತ್ಸವ, ಜಾತ್ರೆಗಳು, ಹಬ್ಬ ಹರಿದಿನಗಳ ವಿವರಗಳನ್ನು ಸಾರ್ವಜನಿಕರಿಗೆ/ಭಕ್ತಾದಿಗಳಿಗೆ ಪಡೆಯಲು ಅನುಕೂಲವಾಗುವಂತೆ ಐಟಿಎಂಎಸ್ ತಂತ್ರಾಂಶದಲ್ಲಿ ಮಾಹಿತಿಗಳನ್ನು ಅಪ್‌ಲೋಡ್ ಮಾಡುವ ವ್ಯವಸ್ಥೆಯಿದೆ.

ದೇವಾಲಯಗಳ ಆಸ್ತಿಗಳ ವಿವರ ಮತ್ತು ಅವುಗಳ ವಹಿವಾಟಿನ ಮಾಹಿತಿಗಳೂ ಇರಲಿದ್ದು, ಜಗತ್ತಿನ ಯಾವುದೇ ಭಾಗದಿಂದ ಆನ್‌ಲೈನ್ ಮೂಲಕ ಕಾಣಿಕೆಯನ್ನು ಸಲ್ಲಿಸಬಹುದಾಗಿದೆ. ಸರ್ಕಾರದ ಭೂ ದಾಖಲೆಗಳ ದತ್ತಾಂಶದೊಂದಿಗೆ (Bhoomi etc) ಸಂಯೋಜನೆ ಮಾಡಬಹುದಾದ ತಾಂತ್ರಿಕತೆಯನ್ನು ಅಳವಡಿಸಲಾಗಿದೆ. ವಿವಿಧ ರೀತಿಯ MIS ವರದಿಗಳನ್ನು ಪಡೆಯಲು ಅವಕಾಶವಿರುತ್ತದೆ.
ಪ್ರಥಮ ಹಂತದಲ್ಲಿ ಪ್ರಮುಖ 25 ದೇವಾಲಯಗಳಲ್ಲಿ ಯೋಜನೆ
ಇದೇ ವೇಳೆ ದೈವ ಸಂಕಲ್ಪ ಯೋಜನೆಗೂ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ಪ್ರಸ್ತುತ ರಾಜ್ಯದಲ್ಲಿರುವ 205 ಎ ದರ್ಜೆಯ ದೇವಾಲಯಗಳನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸುವುದು ದೈವ ಸಂಕಲ್ಪ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಈ ಯೋಜನೆಯ ಪ್ರಥಮ ಹಂತದಲ್ಲಿ ರಾಜ್ಯದ ಪ್ರಮುಖ 25 ದೇವಾಲಯಗಳನ್ನು 1,140 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಸಮಗ್ರವಾಗಿ ಅಭಿವೃದ್ಧಿ ಪಡಿಸಲಾಗುವುದು.

ಲಕ್ಷಾಂತರ ಭಕ್ತರು ಆಗಮಿಸುವ ಕುಕ್ಕೆ ಸುಬ್ರಹ್ಮಣ್ಯ, ಮಲೆ ಮಹದೇಶ್ವರ ಸ್ವಾಮಿ ಬೆಟ್ಟ, ಚಾಮುಂಡಿ ದೇವಸ್ಥಾನ, ಕೊಲ್ಲೂರು ಮೂಕಾಂಬಿಕಾ, ಯಡಿಯೂರು ಸಿದ್ಧಲಿಂಗೇಶ್ವರ ದೇವಸ್ಥಾನ, ಸವದತ್ತಿ ಯಲ್ಲಮ್ಮ ಸೇರಿದಂತೆ ಪ್ರಮುಖ ದೇವಸ್ಥಾನಗಳು ಈ ಯೋಜನೆಯ ಅಡಿಯಲ್ಲಿ ಸೇರಿವೆ.
ಭಕ್ತಾದಿಗಳಿಗೆ/ಪ್ರವಾಸಿಗರಿಗೆ ಮೂಲ ಸೌಕರ್ಯ
ಭಕ್ತಾದಿಗಳಿಗೆ ವಸತಿ ಸೌಲಭ್ಯ, ಉತ್ತಮ ರಸ್ತೆ ಹಾಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಪಾರಂಪರಿಕ ಶಿಲಾಮಯ ಕಟ್ಟಡಗಳ ನಿರ್ಮಾಣ, ಮಲ್ಟಿಲೆವೆಲ್ ಪಾರ್ಕಿಂಗ್ ವ್ಯವಸ್ಥೆ, ಸ್ನಾನ ಘಟ್ಟ ಹಾಗೂ ಸುಸಜ್ಜಿತ ಅನ್ನದಾಸೋಹ ಭವನ, ವಾಣಿಜ್ಯ ಸಂಕೀರ್ಣ ಕಟ್ಟಡಗಳು, ಶೌಚಾಲಯಗಳು, ಒಳಚರಂಡಿ ಹಾಗೂ ಘನತ್ಯಾಜ್ಯ ನಿರ್ವಹಣಾ ಘಟಕ, ಹಾಗೂ ಇನ್ನಿತರ ವ್ಯವಸ್ಥೆಗಳನ್ನು ಅಭಿವೃದ್ಧಿಗೊಳಿಸಲಾಗುವುದು. ದೇಶದ ಧಾರ್ಮಿಕ ಕ್ಷೇತ್ರಗಳನ್ನು ಸಮಗ್ರ ವಾಗಿ ಅಭಿವೃದ್ಧಿಗೊಳಿಸುವ ಪ್ರಧಾನಿ ನರೇಂದ್ರ ಮೋದಿಯವರ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಮುಜರಾಯಿ ಇಲಾಖೆಯು ಈ ಯೋಜನೆಯನ್ನು ಕೈಗೆತ್ತಿಕೊಂಡಿದೆ.

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಜರಾಯಿ, ಹಜ್ ಮತ್ತು ವಕ್ಪ್ ಸಚಿವೆ ಶಶಿಕಲಾ ಜೊಲ್ಲೆ, ಇಲಾಖೆಯ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್ ಹಾಗೂ ಆಯುಕ್ತರಾದ ರೋಹಿಣಿ ಸಿಂಧೂರಿ ಭಾಗವಹಿಸಲಿದ್ದಾರೆ.
-
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ












Click it and Unblock the Notifications