ತಂದೆ-ತಾಯಿ ಸಮಾಧಿಗೆ ಗೌರವ ಸಲ್ಲಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ, ಜುಲೈ 29: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಪ್ರಥಮ ಬಾರಿಗೆ ಹುಬ್ಬಳ್ಳಿಗೆ ಆಗಮಿಸಿರುವ ಬಸವರಾಜ ಬೊಮ್ಮಾಯಿ ಅವರು ಹುಬ್ಬಳ್ಳಿ ಧಾರವಾಡ ಅವಳಿನಗರಗಳ ಮಧ್ಯೆ ಅಮರಗೋಳದಲ್ಲಿ ತಾಯಿ ದಿ. ಗಂಗಮ್ಮ ಎಸ್ ಬೊಮ್ಮಾಯಿ ಹಾಗೂ ತಂದೆ ದಿ. ಮಾಜಿ ಮುಖ್ಯಮಂತ್ರಿ ಎಸ್.ಆರ್. ಬೊಮ್ಮಾಯಿ ಅವರ ಸಮಾಧಿಗಳಿಗೆ ಪೂಜೆ ಸಲ್ಲಿಸಿ ಗೌರವ ಸಮರ್ಪಿಸಿದರು.
ತಂದೆ-ತಾಯಿಯ ಸಮಾಧಿಗೆ ಪ್ರದಕ್ಷಿಣೆ ಹಾಕಿ ಕೆಲನಿಮಿಷ ಮೌನವಾಗಿ ಸ್ಮರಣೆ ಮಾಡಿದರು. ಉಭಯ ಪುತ್ಥಳಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಲಾರ್ಪಣೆ ಮಾಡಿದರು.

ನಂತರ ಮಾಧ್ಯಮ ಪ್ರತಿನಿಧಿಗಳೊದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ ಅವರು, "ತಂದೆ, ತಾಯಿಯವರ ಆಶೀರ್ವಾದ ಎಲ್ಲಕ್ಕೂ ಮಿಗಿಲು. ಅಧಿಕಾರ ಸ್ವೀಕರಿಸಿದ ನಂತರ ಅವರ ಸಮಾಧಿಗಳ ದರ್ಶನ ಪಡೆದಿರುವೆ" ಎಂದರು. ಶಾಸಕರಾದ ಅಮೃತ ದೇಸಾಯಿ, ಮಾಜಿ ಸಚಿವ ಶಿವರಾಂ ಹೆಬ್ಬಾರ, ಕುಟುಂಬದ ಬಂಧುಗಳು, ಅಭಿಮಾನಿಗಳು ಇದ್ದರು.

Recommended Video
ಬೊಮ್ಮಾಯಿ ಹಿಂದೆ ಗಿರಕಿ ಹೊಡಿಯುತ್ತಿರುವ ವಲಸಿಗರು! | Oneindia Kannada












Click it and Unblock the Notifications