Get Updates
Get notified of breaking news, exclusive insights, and must-see stories!

ಉಪಸಭಾಧ್ಯಕ್ಷ ಆನಂದ್ ಮಾಮನಿ ನಿಧನಕ್ಕೆ ಕಂಬನಿ ಮಿಡಿದ ಸಿಎಂ ಬೊಮ್ಮಾಯಿ

ಬೆಂಗಳೂರು, ಅ.23: ನಗರದ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಕರ್ನಾಟಕ ವಿಧಾನಸಭೆ ಉಪ ಸಭಾಪತಿ, ಬಿಜೆಪಿ ಶಾಸಕ ಆನಂದ್ ಮಾಮನಿ ವಿಧಿವಶವಾಗಿದ್ದಾರೆ. ಆನಂದ ಚಂದ್ರಶೇಖರ ಮಾಮನಿ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಗೆಳೆಯನ ಅಗಲಿಕೆಗೆ ಕಂಬನಿ ಮಿಡಿದಿದ್ದಾರೆ.

''ನಮ್ಮ ಪಕ್ಷದ ಶಾಸಕರು, ರಾಜ್ಯ ವಿಧಾ‌ನಸಭೆಯ ಮಾನ್ಯ ಉಪ ಸಭಾಧ್ಯಕ್ಷರಾದ ಆತ್ಮೀಯ ಶ್ರೀ ಆನಂದ ಚಂದ್ರಶೇಖರ ಮಾಮನಿ ಅವರು ನಿಧನರಾದ ವಿಷಯ ತಿಳಿದು ಅತೀವ ದುಃಖವಾಗಿದೆ‌.

ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಿ, ಈ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ‌. ಓಂ ಶಾಂತಿಃ'' ಎಂದು ಸಿಎಂ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

CM Bommai and other political leaders condole passing of Assembly Deputy Speaker Anand Mamani

ಮಾಮಿನಿ ನಿಧನಕ್ಕೆ ಸಚಿವ ಮುರುಗೇಶ್ ನಿರಾಣಿ ಸಂತಾಪ

ಕರ್ನಾಟಕ ವಿಧಾನಸಭೆಯ ಉಪ ಸಭಾಧ್ಯಕ್ಷ ಆನಂದ್ ಚಂದ್ರಶೇಖರ್ ಮಾಮಿನಿ ಅವರ ಹಠಾತ್ ನಿಧನಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಅವರು ತೀವ್ರ ಕಂಬನಿ ಮಿಡಿದಿದ್ದಾರೆ.

ಉಪಸಭಾಪತಿಯಾಗಿದ್ದ ವೇಳೆ ಅವರು ಕಲಾಪದಲ್ಲಿ ಸದನವನ್ನು ನಿರ್ವಾಹಿಸುತ್ತಿದ್ದ ರೀತಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ಅವರ ದಿಢೀರ್ ಸಾವು ಕರ್ನಾಟಕದ ಸಂಸದೀಯ ವ್ಯವಸ್ಥೆಗೆ ತುಂಬಾಲಾರದ ನಷ್ಟವಾಗಿದೆ ಎಂದು ಸಂತಾಪ ಸೂಚಿಸಿದ್ದಾರೆ.

ವೈಯಕ್ತಿಕವಾಗಿ ನನಗೆ ತುಂಬಾ ಆತ್ಮೀಯರಾಗಿದ್ದ ಆನಂದ್ ಮಾಮಿನಿ ಅವರು, ಬಿಜೆಪಿಯ ಶಿಸ್ತಿನ ಸಿಪಾಯಿಯಾಗಿದ್ದರು. ಯಾವುದೇ ಹುದ್ದೆ ನೀಡಿದರೂ ಅದನ್ನು ಸಮರ್ಪಕವಾಗಿ ನಿರ್ವಾಹಣೆ ಮಾಡುತ್ತಿದ್ದ ಒಬ್ಬ ಸಜ್ಜನ ರಾಜಕಾರಣಿಯಾಗಿದ್ದರು ಎಂದು ನಿರಾಣಿ ಅವರ ವ್ಯಕ್ತಿತ್ವವನ್ನು ಕೊಂಡಾಡಿದ್ದಾರೆ.

CM Bommai and other political leaders condole passing of Assembly Deputy Speaker Anand Mamani

ಬೆಳಗಾವಿ ಜಿಲ್ಲೆಯ ಸವದತ್ತಿ ವಿಧಾನಸಭೆ ಕ್ಷೇತ್ರದಿಂದ ಸತತ ಮೂರು ಬಾರಿ ಗೆದ್ದು ಶಾಸಕರಾಗಿದ್ದ ಅವರು, ಓರ್ವ ಮಾದರಿ ಜನಪ್ರತಿನಿಧಿಯಾಗಿ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ಇತ್ತೀಚಿಗೆ ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯವನ್ನು ವಿಚಾರಿಸಲಾಗಿತ್ತು. ಆದರೆ, ಇಷ್ಟು ಬೇಗ ಇಂತಹ ಸುದ್ದಿ ಕೇಳುತ್ತೇವೆ ಎಂದು ಕ‌ನಸಿನಲ್ಲೂ ಉಹೆ ಮಾಡಿರಲಿಲ್ಲ ಎಂದು ಆಘಾತ ವ್ಯಕ್ತಪಡಿಸಿದ್ದಾರೆ.

ಆನಂದ ಚಂದ್ರಶೇಖರ ಮಾಮನಿ ಅವರು ನಿಧನರಾದ ವಿಷಯ ತಿಳಿದು ಅತೀವ ದುಃಖವಾಗಿದೆ‌. ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಿ, ಈ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗಕ್ಕೆ ಕರುಣಿಸಲಿ ಎಂದು ನಿರಾಣಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ಸಂತಾಪ ಸೂಚಿಸಿದ್ದಾರೆ.


ಸಚಿವ ಸುಧಾಕರ್ ಅವರಿಂದ ಸಂತಾಪ

ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಆನಂದ್ ಮಾಮನಿ ಕರ್ನಾಟಕ ವಿಧಾನಸಭೆಯ ಉಪ ಸಭಾಪತಿಯಾಗಿದ್ದಾರೆ. ಇತ್ತೀಚೆಗೆ ನಡೆದ10 ದಿನಗಳ ಮುಂಗಾರು ಅಧಿವೇಶನ ಸಂದರ್ಭದಲ್ಲೇ ಆನಂದ್ ಮಾಮನಿ ಅನಾರೋಗ್ಯಕ್ಕೀಡಾಗಿದ್ದರು. ಆನಂದ್ ಮಾಮನಿ 2018ರ ವಿಧಾನಸಭೆ ಚುನಾವಣೆಯಲ್ಲಿ ಸವದತ್ತಿ ಕ್ಷೇತ್ರದಲ್ಲಿ 62,480 ಮತಗಳನ್ನು ಪಡೆದು ಪಕ್ಷೇತರ ಅಭ್ಯರ್ಥಿ ಆನಂದ್ ಚೋಪ್ರಾ (56,189) ಸೋಲಿಸಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಈ ಹಿಂದೆ ಆನಂದ್ ಮಾನಿಯವರ ತಂದೆ ಚಂದ್ರಶೇಖರ ಮಾಮನಿ ಕೂಡ ವಿಧಾನ ಸಭೆ ಉಪಸಭಾಧ್ಯಕ್ಷರಾಗಿದ್ದರು ಎನ್ನುವುದು ವಿಶೇಷ. ಬೆಳಗಾವಿ ಜಿಲ್ಲೆಯ ಸವದತ್ತಿ ವಿಧಾನಸಭೆ ಕ್ಷೇತ್ರದಿಂದ ಸತತ ಮೂರು ಬಾರಿ ಗೆದ್ದು ಶಾಸಕರಾಗಿದ್ದ ಅವರು, ಓರ್ವ ಮಾದರಿ ಜನಪ್ರತಿನಿಧಿಯಾಗಿ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.


ಗೃಹ ಸಚಿವ ಆರಗ ಜ್ಞಾನೇಂದ್ರ ಶೋಕ

ಕರ್ನಾಟಕ ವಿಧಾನ ಸಭೆಯ ಉಪಾಧ್ಯಕ್ಷರೂ ನಮ್ಮ ಪಕ್ಷದ ಶಾಸಕರೂ ಆದ ಆನಂದ ಚಂದ್ರಶೇಖರ್ ಮಾಮನಿ ಅವರ ನಿಧನದ ಸುದ್ದಿ ತಿಳಿದು, ಅಪಾರ ದುಃಖ ವಾಗಿದೆ.

ಪಕ್ಷದ ಸಕ್ರಿಯ ನಾಯಕರೂ, ನಮ್ಮೆಲ್ಲರಿಗೆ ಮಾರ್ಗದರ್ಶಕರೂ ಆಗಿದ್ದ,ಮಾಮನಿಯವರ, ಆತ್ಮಕ್ಕೆ ಚಿರಶಾಂತಿ ಇರಲಿ, ಕುಟುಂಬ ವರ್ಗಕ್ಕೆ ದುಃಖವನ್ನು ಭರಿಸುವ ಶಕ್ತಿಯನ್ನು, ಭಗವಂತ ನೀಡಲಿ, ಎಂದು ಪ್ರಾರ್ಥಿಸುತ್ತೇನೆ.


ಆನಂದ ಮಾಮನಿ ಅವರ ನಿಧನ ಆಘಾತಕರ: ನಳಿನ್‍ಕುಮಾರ್ ಕಟೀಲ್

ಬೆಳಗಾವಿ ಜಿಲ್ಲೆಯಲ್ಲಿ ಬಿಜೆಪಿಗೆ ಭದ್ರ ಬುನಾದಿ ಹಾಕಿದವರಲ್ಲಿ ಮುಂಚೂಣಿಯಲ್ಲಿದ್ದ ಮುಖಂಡ ಹಾಗೂ ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ ಅವರ ಅಕಾಲಿಕ ನಿಧನ ತೀವ್ರ ಆಘಾತವನ್ನುಂಟು ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ಸಂತಾಪ ಸೂಚಿಸಿದ್ದಾರೆ.

ಅವರು ಸತತ ಮೂರನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು. ಅಭಿಮಾನಿಗಳಿಂದ ಅಜಾತ ಶತ್ರುವೆಂದು ಕರೆಸಿಕೊಂಡಿದ್ದ ಅವರು ಮೃದು ಸ್ವಭಾವದಿಂದಾಗಿಯೇ ಜನಾನುರಾಗಿ ಆಗಿದ್ದರು ಎಂದು ತಿಳಿಸಿದ್ದಾರೆ.

ಶಾಸಕರಾಗಿ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ, ಯಲ್ಲಮ್ಮ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ, ಪ್ರಸಕ್ತ ವಿಧಾನಸಭೆ ಉಪಸಭಾಧ್ಯಕ್ಷರ ಹುದ್ದೆ ನಿಭಾಯಿಸುತ್ತಿದ್ದ ಮಾಮನಿ; ಸೋಲಿಲ್ಲದ ಸರದಾರ ಎನಿಸಿದ್ದರು. 'ಸವದತ್ತಿ ಸಾಹುಕಾರ', 'ಜನಪರ ನಾಯಕ' ಎಂಬ ಹಲವು ಅಂಕಿತಗಳೂ ಅವರದಾಗಿದ್ದವು. ಕ್ಷೇತ್ರದಲ್ಲಿ ನಿತ್ಯ ಪರ್ಯಟನೆ ಮಾಡುವ ಕ್ರಿಯಾಶೀಲತೆ, ಜನಪರ ನಿಲುವು, ಮುತ್ಸದ್ಧಿ ಗುಣಗಳಿಂದ ಅವರು ಆಪ್ತರಾಗಿದ್ದರು ಎಂದು ಸ್ಮರಿಸಿದ್ದಾರೆ.

ಇವರ ತಂದೆ, ದೊಡ್ಡಪ್ಪನ ಮಗನೂ ಶಾಸಕರಾಗಿದ್ದರು. ರಾಜಕೀಯ ಹಿರಿಮೆಯ ಕುಟುಂಬ ಇವರದಾಗಿತ್ತು. ಸವದತ್ತಿಯಲ್ಲಿ ಅಭಿವೃದ್ಧಿ ಪರ್ವ ಆರಂಭಿಸಿದ ಮಾಮನಿ ಬಿಜೆಪಿ ಭದ್ರವಾಗಿ ನೆಲೆಯೂರುವಂತೆ ಮಾಡಿದ್ದರು. ಇವರು 'ಯರಗಟ್ಟಿ ತಾಲ್ಲೂಕಿನ ರೂವಾರಿ' ಎಂದೇ ಜನರಿಂದ ಮೆಚ್ಚುಗೆ ಪಡೆದಿದ್ದರು ಎಂದು ನೆನಪಿಸಿದ್ದಾರೆ.

ಅವರ ಕುಟುಂಬ, ಕಾರ್ಯಕರ್ತರು ಮತ್ತು ಅಭಿಮಾನಿಗಳಿಗೆ ಭಗವಂತನು ಈ ದುಃಖವನ್ನು ಸಹಿಸುವ ಶಕ್ತಿಯನ್ನು ಕೊಡಲಿ ಎಂದು ನಳಿನ್‍ಕುಮಾರ್ ಕಟೀಲ್ ಅವರು ಪ್ರಾರ್ಥಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+