• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಪ್ಪು 'ಗಂಧದ ಗುಡಿ' ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ ಸಿಎಂ ಬಸವರಾಜ ಬೊಮ್ಮಾಯಿ

|
Google Oneindia Kannada News

ಬೆಂಗಳೂರು, ಅ. 21: ''ಅಪ್ಪು ಅವರಂತೆ ಈ ಸಿನೆಮಾ ಮುಂದಿನ ಪೀಳಿಗೆಗೆ ಒಂದು ದಂತಕಥೆಯಾಗಲಿದೆ'' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತ ಪಡಿಸಿದರು.

ಶುಕ್ರವಾರ ಸಂಜೆ ಪುನೀತ್ ರಾಜ್‌ಕುಮಾರ್ ಅವರ ' ಗಂಧದ ಗುಡಿ ' ಚಿತ್ರ ಬಿಡುಗಡೆಯ ಪೂರ್ವಭಾವಿಯಾಗಿ ಆಯೋಜಿಸಲಾಗಿದ್ದ ಪುನೀತ ಪರ್ವ ಕಾರ್ಯಕ್ರಮದಲ್ಲಿ ಸಿಎಂ ಭಾಗವಹಿಸಿ ಮಾತನಾಡಿದರು.

Gandhada Gudi Trailer : ಕಾಡು, ಮಳೆ, ಬೆಟ್ಟ, ಜನ, ನದಿ, ಜಲಪಾತಗಳ ನಡುವೆ ಅಪ್ಪು; ಇದು ಗಂಧದ ಗುಡಿGandhada Gudi Trailer : ಕಾಡು, ಮಳೆ, ಬೆಟ್ಟ, ಜನ, ನದಿ, ಜಲಪಾತಗಳ ನಡುವೆ ಅಪ್ಪು; ಇದು ಗಂಧದ ಗುಡಿ

ಮುಂದಿನ ಪೀಳಿಗೆಗೆ ನಿಸರ್ಗದ ಬಗ್ಗೆ ಜಾಗೃತಿ ಮೂಡಿಸಲು, ಅದರ ಸಂರಕ್ಷಣೆ ಮಾಡಲು ಪ್ರೇರಣೆ ನೀಡುವ 'ಗಂಧದ ಗುಡಿ' ಚಲನಚಿತ್ರಕ್ಕೆ ಸರ್ಕಾರ ತೆರಿಗೆ ವಿನಾಯಿತಿಯನ್ನು ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದರು.

'ಕನ್ನಡ ನಾಡು ಮತ್ತು ಗಂಧದ ಗುಡಿಯನ್ನು ಬೇರ್ಪಡಿಸಲು ಸಾಧ್ಯವಿಲ್ಲ. ಅಂತಹ ವಿಚಾರದೊಂದಿಗೆ, ಕಾಡು, ನಿಸರ್ಗ, ಪ್ರಾಣಿಗಳನ್ನು ಇಟ್ಟುಕೊಂಡು ಅಪ್ಪು ಮಾಡಿದ ಈ ಸಿನೆಮಾ ಅತ್ಯಂತ ಪ್ರಸ್ತುತವಾಗಿದೆ. ನಿಸರ್ಗವನ್ನು ಮುಂದಿನ ಜನಾಂಗಕ್ಕೆ ಬಿಟ್ಟು ಹೋಗುವ ಅವಶ್ಯಕತೆ ಇದೆ. ಇಲ್ಲವಾದರೆ ಮುಂದಿನ ಜನಾಂಗದ ಭವಿಷ್ಯದಲ್ಲಿ ಕಳ್ಳತನ ಮಾಡಿದಂತೆ" ಎಂದು ಅಭಿಪ್ರಾಯ ಪಟ್ಟರು.

ಅಣ್ಣಾವ್ರ ಎಲ್ಲಾ ಗುಣಗಳನ್ನು ಅಪ್ಪು ಹೊಂದಿದ್ದರು!

ಅಣ್ಣಾವ್ರ ಎಲ್ಲಾ ಗುಣಗಳನ್ನು ಅಪ್ಪು ಹೊಂದಿದ್ದರು!

"ಮನಸುಗಳು ಭಾವನಾತ್ಮಕವಾದ ಶಬ್ದಗಳ ತೂಕ ಕಡಿಮೆ. ಅಪ್ಪು ನಮ್ಮ ಜೊತೆಗೆ ಇದ್ದಾರೆ. ಪ್ರತಿ ಕ್ಷಣ ನಮ್ಮನ್ನು ನೋಡ್ತಾ ಇರ್ತಾರೆ. ಇರುವಾಗ ಹೊಗಳುವುದು ಸಹಜ. ಇಲ್ಲದೇ ಇರುವಾಗ ನೆನಪು ಮಾಡಿಕೊಳ್ಳುವುದು ದೈವದ ಆಶೀರ್ವಾದ ಇದ್ದರೆ ಮಾತ್ರ ಸಾಧ್ಯ. ಅಂತಹ ಆಶೀರ್ವಾದ ಅಪ್ಪು ಮೇಲಿ"ತ್ತು ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದರು.

"ರಾಜ್ ಕುಮಾರ್ ಅವರ ಎಲ್ಲ ಗುಣಧರ್ಮಗಳನ್ನು ನೂರಕ್ಕೆ ನೂರರಷ್ಟು ಹೊಂದಿದವರು ಪುನೀತ್ ರಾಜಕುಮಾರ್. ಎಷ್ಟೇ ದೊಡ್ಡ ಸ್ಟಾರ್ ಆದರೂ ನಯ, ವಿನಯವನ್ನು ಒಂದು ಕ್ಷಣವೂ ಮರೆತಿರಲಿಲ್ಲ. ಅಪ್ಪು ಅತ್ಯಂತ ಸಣ್ಣ ವಯಸ್ಸಿನಲ್ಲೇ ಬಾಲನಟನಾಗಿ ದೊಡ್ಡ ಹೆಸರು ಮಾಡಿದಾಗ ಸಂತೋಷವಾಗಿತ್ತು. ಆದರೆ ಸಣ್ಣ ವಯಸ್ಸಿನಲ್ಲೇ ನಮ್ಮನ್ನು ಬಿಟ್ಟು ಹೋದಾಗ ದುಃಖ ತಡೆಯಲು ಆಗಲಿಲ್ಲ. ಶ್ರೇಷ್ಠ ವ್ಯಕ್ತಿಗಳು ಅಲ್ಪಾಯುಗಳು. ಅಮೂಲ್ಯವಾದುದು ಸ್ವಲ್ಪವೇ ಇರುತ್ತದೆ (Anything precious is very little) ಎಂದರು.

'ಗಂಧದ ಗುಡಿ' ಚಿತ್ರಕ್ಕೆ ತೆರಿಗೆ ವಿನಾಯಿತಿ

'ಗಂಧದ ಗುಡಿ' ಚಿತ್ರಕ್ಕೆ ತೆರಿಗೆ ವಿನಾಯಿತಿ

ಮುಂದಿನ ಪೀಳಿಗೆಗೆ ನಿಸರ್ಗದ ಬಗ್ಗೆ ಜಾಗೃತಿ ಮೂಡಿಸಲು, ಅದರ ಸಂರಕ್ಷಣೆ ಮಾಡಲು ಪ್ರೇರಣೆ ನೀಡುವ 'ಗಂಧದ ಗುಡಿ' ಚಲನಚಿತ್ರಕ್ಕೆ ಸರ್ಕಾರ ತೆರಿಗೆ ವಿನಾಯಿತಿಯನ್ನು ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದರು.

ಪುನೀತ ಪರ್ವ ಕಾರ್ಯಕ್ರಮಕ್ಕೂ ಮೊದಲು ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ತೆರಿಗೆ ವಿನಾಯಿತಿ ನೀಡುವ ಕುರಿತು ಘೋಷಣೆ ಮಾಡಿದರು.

ಗಂಧದ ಗುಡಿ ಚಲನಚಿತ್ರ ನಿಸರ್ಗ ಮತ್ತು ಅದರ ರಕ್ಷಣೆ ಕುರಿತಾಗಿರುವ ಚಲನಚಿತ್ರವಾಗಿರುವುದರಿಂದ ಇಂದಿನ ಕಾಲದಲ್ಲಿ ನಿಸರ್ಗ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವುದು ಅತ್ಯಂತ ಅವಶ್ಯಕತೆ ಇದೆ ಎಂದರು.

ಮರಣೋತ್ತರವಾಗಿ ಪುನೀತ್ ರಾಜ್‌ಕುಮಾರ್‌ಗೆ ಕರ್ನಾಟಕ ರತ್ನ

ಮರಣೋತ್ತರವಾಗಿ ಪುನೀತ್ ರಾಜ್‌ಕುಮಾರ್‌ಗೆ ಕರ್ನಾಟಕ ರತ್ನ

ನವೆಂಬರ್ 1 ರಂದು ಅಪ್ಪುರವರಿಗೆ ಕರ್ನಾಟಕ ಶ್ರೇಷ್ಟ ಪ್ರಶಸ್ತಿಯಾಗಿರುವ 'ಕರ್ನಾಟಕ ಪ್ರಶಸ್ತಿಯನ್ನು' ಸರ್ಕಾರ ನೀಡುತ್ತಿದೆ. ವಿಧಾನಸೌಧದ ಮುಖ್ಯದ್ವಾರ ಮೆಟ್ಟಿಲುಗಳ ಮೇಲೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವ ಸಲ್ಲಿಸಲಾಗುತ್ತಿದೆ. ಇದು ಎಲ್ಲ ಯುವಕರಿಗೂ ಪ್ರೇರಣೆಯಾಗುವಂತಹ ಒಂದು ಗೌರವ ಎಂದು ಭಾವಿಸುತ್ತೇನೆ. ಗಂಧದ ಗುಡಿ ಚಲನಚಿತ್ರ ಅತ್ಯಂತ ಯಶಸ್ವಿಯಾಗಲಿ. ಅದೇ ರೀತಿ ಪುನೀತ್ ಪರ್ವ ಕಾರ್ಯಕ್ರಮ ಕೂಡ ಯಶಸ್ವಿಯಾಗಲಿ. ಸುಮಾರು ಹತ್ತು ದಿನಗಳ ಕಾಲ ನಡೆಯುವ ಕರ್ನಾಟಕ ರತ್ನ ಸಮಾರಂಭದ ಸಂಭ್ರಮವೂ ಕೂಡ ಯಶಸ್ವಿಯಾಗಲಿ. ಈ ಕಾರ್ಯಕ್ರಮದ ಮೂಲಕ ಅಪ್ಪುವಿನ ಮೇಲಿನ ನಮ್ಮ ಪ್ರೀತಿ, ವಾತ್ಸಲ್ಯವನ್ನು ಸಮಸ್ತ ಕನ್ನಡ ನಾಡು ತೋರಿಸಿದಂತಾಗುತ್ತದೆ ಎನ್ನುವ ಆಶಾಭಾವನೆ ನನಗಿದೆ ಎಂದು ಬೊಮ್ಮಾಯಿ ಹೇಳಿದರು.

ಯುವಕರಲ್ಲಿ ಅಪ್ಪುವಿನ ಬಗ್ಗೆ ಪ್ರೀತಿ ವಿಶ್ವಾಸ ನೋಡಿ ವಿಸ್ಮಯ!

ಯುವಕರಲ್ಲಿ ಅಪ್ಪುವಿನ ಬಗ್ಗೆ ಪ್ರೀತಿ ವಿಶ್ವಾಸ ನೋಡಿ ವಿಸ್ಮಯ!

"ಅಪ್ಪುವನ್ನು ಕಳೆದುಕೊಂಡು ಒಂದು ವರ್ಷವಾಗಿದೆ. ಅಪ್ಪು ನಮ್ಮ ಜೊತೆಗೆ ಇದ್ದಾರೆ ಎಂಬ ಭಾವನೆ ನಮ್ಮಲ್ಲಿದೆ. ನಾನು ಕರ್ನಾಟಕದ ಉದ್ದಗಲಕ್ಕೂ ಕೊಳ್ಳೇಗಾಲದಿಂದ ಹಿಡಿದು ಬೀದರ್ ವರೆಗೂ ಪ್ರತಿಯೊಂದು ಗ್ರಾಮದಲ್ಲಿ ಅಪ್ಪುವಿನ ಛಾಯಾಚಿತ್ರ, ನಮನ, ಯುವಕರಲ್ಲಿ ಅಪ್ಪುವಿನ ಬಗ್ಗೆ ಪ್ರೀತಿ ವಿಶ್ವಾಸ ನೋಡಿದಾಗ, ಕೆಲವೊಮ್ಮೆ ವಿಸ್ಮಿತನಾಗುತ್ತೇನೆ. ಅಂತಹ ವ್ಯಕ್ತಿತ್ವಕ್ಕೆ ದೇವರ ಆಶೀರ್ವಾದವಿದೆ. ಅಪ್ಪುರವರು ಇನ್ನೂ ಬಹಳ ವರ್ಷ ಬಾಳಬೇಕಾಗಿದ್ದವರು. ಅತ್ಯಂತ ಸಣ್ಣ ವಯಸ್ಸಿನಲ್ಲಿ ನಮ್ಮನ್ನು ಬಿಟ್ಟು ಅಗಲಿದ್ದಾರೆ. ಅಪ್ಪು ಬಗ್ಗೆ ಎರಡು ವಿಶೇಷತೆ ಇದೆ. ಅತ್ಯಂತ ಸಣ್ಣ ವಯಸ್ಸಿನಲ್ಲಿ ಬಾಲಕಲಾವಿದರಾಗಿ ಖ್ಯಾತಿಯಾಗಿದ್ದಾರೆ. ಆದರೂ ಅವರ ಕೆಲಸಗಳು, ಆದರ್ಶಗಳು ಮತ್ತು ಅವರ ನಟನೆ ಮಾಡಿದ ಚಿತ್ರಗಳ ಮೂಲಕ ಅಪ್ಪು ಜನಮಾನಸದಲ್ಲಿ ಇಂದಿಗೂ ಜೀವಂತವಾಗಿದ್ದಾರೆ" ಎಂದರು

ನಮ್ಮ ಅಪ್ಪು ಎಲ್ಲರಿಗೂ ಅತ್ಯಂತ ಪ್ರಿಯವಾಗಿರುವ ಡಾ.ಪುನೀತ್ ರಾಜಕುಮಾರ್ ಅವರ ಪ್ರಯೋಗ, ನಿಸರ್ಗ, ಕಾಡು, ಪ್ರಾಣಿಗಳು ಮಧ್ಯೆ ನಡೆದಿರುವಂತಹ ಒಂದು ಸಿನೆಮಾ ಎಂದರು. ಅಪ್ಪು ನೆನಪನ್ನು ಇಷ್ಟು ವಿಜೃಂಭಣೆಯಿಂದ ಆಯೋಜಿಸಿರುವ ಡಾ. ರಾಜ್ ಕುಮಾರ್ ಕುಟುಂಬದ ಶ್ರೀಮಂತಿಕೆಯನ್ನು ಕೊಂಡಾಡಿದ ಮುಖ್ಯಮಂತ್ರಿಗಳು ಶಿವರಾಜ್ ಕುಮಾರ್ ಹಾಗೂ ರಾಘವೇಂದ್ರ ರಾಜ್ ಕುಮಾರ್, ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರನ್ನು ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ನಟ ಶಿವರಾಜ್ ಕುಮಾರ್, ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್, ರಾಘವೇಂದ್ರ ರಾಜ್ ಕುಮಾರ್, ಸಚಿವರಾದ ಮುರುಗೇಶ್ ನಿರಾಣಿ, ಡಾ. ಸಿ.ಎನ್. ಅಶ್ವತ್ಥನಾರಾಯಣ, ಕೆ.ಸಿ. ನಾರಾಯಣಗೌಡ, ಆನಂದ್ ಸಿಂಗ್, ಶಾಸಕ ರಾಜೂಗೌಡ ಮತ್ತು ಇತರ ಗಣ್ಯರು ಭಾಗವಹಿಸಿದ್ದರು.

ಬಸವರಾಜ ಬೊಮ್ಮಾಯಿ
Know all about
ಬಸವರಾಜ ಬೊಮ್ಮಾಯಿ
English summary
Karnataka Chief minister Basavaraj Bommai announces Puneeth Rajkumar's film Gandhada Gudi declared tax free in Karnataka. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X