Breaking: ದಾವೋಸ್ ಪ್ರವಾಸ ಮುಗಿಸಿ ಬೆಂಗಳೂರಿಗೆ ಬಂದ ಸಿಎಂ ಬೊಮ್ಮಾಯಿ
ಬೆಂಗಳೂರು, ಮೇ 27: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆರು ದಿನಗಳ ದಾವೋಸ್ ಪ್ರವಾಸ ಮುಗಿಸಿ ಶುಕ್ರವಾರ ಬೆಳಗ್ಗೆ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಬಸವರಾಜ ಬೊಮ್ಮಾಯಿ ಅವರನ್ನು ಇಂಧನ ಸಚಿವ ವಿ. ಸುನೀಲ್ ಕುಮಾರ್ ಹಾಗೂ ಗುಪ್ತಚರ ಇಲಾಖೆ ಎಡಿಜಿಪಿ ದಯಾನಂದ ಅವರು ಸ್ವಾಗತ ಮಾಡಿದರು.
Koo AppKarnataka’s significant presence at the #WEF2022 defines its futuristic outlook and strategy for making the State and India the best investment destination. #KarnatakaAtDavos #TeamKarnataka @bsbommai @investindia @BJP4Karnataka @murugesh_nirani - Dr. Ashwathnarayan C. N. | ಡಾ. ಅಶ್ವಥ್ ನಾರಾಯಣ್ ಸಿ.ಎನ್. (@drashwathnarayan) 27 May 2022
ಮೇ 22ರಂದು ಸಿಎಂ ಬೊಮ್ಮಾಯಿ ಸ್ವಿಟ್ಜರ್‌ಲೆಂಡ್‌ಗೆ ಪ್ರಯಾಣ ಬೆಳೆಸಿದ್ದರು. ಕಳೆದ ಐದು ದಿನಗಳ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಪಾಲ್ಗೊಂಡು ರಾಜ್ಯಕ್ಕೆ ಹೂಡಿಕೆದಾರರನ್ನು ಸೆಳೆದಿದ್ದರು. ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಐಟಿಬಿಟಿ ಸಚಿವ ಡಾ. ಸಿಎನ್. ಅಶ್ವತ್ಥ ನಾರಾಯಣ ಹಾಗೂ ಅಧಿಕಾರಿಗಳು ಮುಖ್ಯಮಂತ್ರಿ ಜೊತೆಗಿದ್ದರು.

Recommended Video
IPL ನಲ್ಲಿ ಯಶಸ್ವಿ ನಾಯಕನಾಗಿದ್ದಕ್ಕೆ ಹಾರ್ದಿಕ್ ಪಾಂಡ್ಯಾಗೆ ಸಿಕ್ಕೇಬಿಡ್ತು ಟೀಮ್ ಇಂಡಿಯಾ ನಾಯಕತ್ವ | OneIndia
ದಾವೋಸ್ ಆರ್ಥಿಕ ಶೃಂಗಸಭೆಯ ಫಲಶೃತಿ ಹಾಗೂ ರಾಜ್ಯಕ್ಕೆ ನಿಶ್ಚಯವಾದ ಬಂಡವಾಳದ ಹರಿವು ಕುರಿತು ಸಿಎಂ ಬೊಮ್ಮಾಯಿ ಮಧ್ಯಾಹ್ನ 12.30ಕ್ಕೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಲಿದ್ದಾರೆ.












Click it and Unblock the Notifications