ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೈಮಗ್ಗ ನಿಗಮದ ಪುನಶ್ಚೇತನಕ್ಕೆ ಸೂಪರ್ ಸಲಹೆ ಕೊಟ್ಟ ಸಿಎಂ ಬಸವರಾಜ ಬೊಮ್ಮಾಯಿ!

|
Google Oneindia Kannada News

ಬೆಂಗಳೂರು, ಆ. 24: ಕರ್ನಾಟಕ ಕೈಮಗ್ಗ ನಿಗಮದ ಪುನಶ್ಚೇತನಕ್ಕೆ ಕೂಡಲೇ ವಹಿವಾಟು ಅಭಿವೃದ್ಧಿಗೆ ಯೋಜನೆ ರೂಪಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಹಣಕಾಸಿನ ಪರಿಸ್ಥಿತಿ ಸುಧಾರಣೆ ಕುರಿತ ಸಭೆಯಲ್ಲಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ನಿಗಮದ ವಾಣಿಜ್ಯ ಚಟುವಟಿಕೆಗಳನ್ನು ವಿಸ್ತರಿಸುವ ಮೂಲಕ ನಷ್ಟ ಭರಿಸುವಂತೆ ಮುಖ್ಯಮಂತ್ರಿ ಬೊಮ್ಮಾಯಿ ಇದೇ ಸಂದರ್ಭದಲ್ಲಿ ಸಲಹೆ ನೀಡಿದರು. ಶಿಕ್ಷಣ ಇಲಾಖೆಯ ಸಮವಸ್ತ್ರ ಪೂರೈಕೆಯಲ್ಲಿ ನಿಗಮಕ್ಕೆ ಆಗಿರುವ 10 ಕೋಟಿ ರೂ. ನಷ್ಟದಲ್ಲಿ 5 ಕೋಟಿ ಸರ್ಕಾರ ಭರಿಸಲಿದ್ದು, ಉಳಿದ 5 ಕೋಟಿ ರೂ. ಗಳನ್ನು ನಿಗಮದ ವಹಿವಾಟಿನ ಮೂಲಕ ಭರಿಸುವಂತೆ ಸೂಚನೆ ನೀಡಿದರು. ಇದೇ ಸಂದರ್ಭದಲ್ಲಿ ಮತ್ತೊಂದು ಮಹತ್ವದ ಆದೇಶವನ್ನು ಸಿಎಂ ಬೊಮ್ಮಾಯಿ ಮಾಡಿದ್ದಾರೆ.

ಆನಂದ್ ಸಿಂಗ್‌ ಸಂಧಾನ ಸಫಲವಾಗಿದ್ದು ಹೇಗೆ? ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದಿದ್ದೇನು? ಆನಂದ್ ಸಿಂಗ್‌ ಸಂಧಾನ ಸಫಲವಾಗಿದ್ದು ಹೇಗೆ? ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದಿದ್ದೇನು?

ಖರೀದಿಗೆ ಸುತ್ತೋಲೆ ಹೊರಡಿಸಿ ಎಂದ ಸಿಎಂ

ಖರೀದಿಗೆ ಸುತ್ತೋಲೆ ಹೊರಡಿಸಿ ಎಂದ ಸಿಎಂ

ಸರ್ಕಾರದ ಇತರ ಇಲಾಖೆಗಳು ಕೈಮಗ್ಗ ಇಲಾಖೆಯಲ್ಲಿ ತಯಾರಾಗುವ ವಸ್ತುಗಳನ್ನು ಖರೀದಿಸುತ್ತವೆ. ಆದರೆ ಅವುಗಳನ್ನು ಸರ್ಕಾರದ ಕೈಮಗ್ಗ ಇಲಾಖೆಯಿಂದಲೇ ಖರೀದಿಸಬೇಕು. ವಿವಿಧ ಇಲಾಖೆಗಳು ತಮ್ಮ ಅಗತ್ಯದ ಕನಿಷ್ಠ ಶೇ. 25 ರಷ್ಟು ವಸ್ತ್ರವನ್ನು ಕೈಮಗ್ಗ ನಿಗಮದಿಂದ ಖರೀದಿಸುವಂತೆ ಸುತ್ತೋಲೆ ಹೊರಡಿಸುವಂತೆ ಅಧಿಕಾರಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಇದೇ ಸಂದರ್ಭದಲ್ಲಿ ಸೂಚಿಸಿದ್ದಾರೆ. ಆ ಮೂಲಕ ಸರ್ಕಾರಕ್ಕೂ ಲಾಭವಾಗುವುದಲ್ಲದೆ, ನಿಗಮಕ್ಕೂ ಆರ್ಥಿಕ ಸಹಾಯ ಮಾಡಿದಂತಾಗುತ್ತದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ಆದಾಯ ತರುವಂತೆ ಕ್ರಮಕೈಗೊಳ್ಳಿ ಎಂದ ಸಿಎಂ

ಆದಾಯ ತರುವಂತೆ ಕ್ರಮಕೈಗೊಳ್ಳಿ ಎಂದ ಸಿಎಂ

ಕೈಮಗ್ಗ ನಿಗಮವನ್ನು ಖಾಸಗಿ ಸಹಭಾಗಿತ್ವದೊಂದಿಗೆ ಕೈಮಗ್ಗ ನೇಕಾರರ ಕೌಶಲ್ಯ ವೃದ್ಧಿಗೆ ಒತ್ತು ನೀಡುವ ಮೂಲಕ ಅವರ ಆದಾಯ ಹೆಚ್ಚಿಸುವ ಯೋಜನೆ ರೂಪಿಸಿ ಎಂದು ಅಧಿಕಾರಗಳಿಗೆ ಸಿಂ ಸಲಹೆ ನೀಡಿದ್ದಾರೆ. ಜೊತೆಗೆ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿರುವ ನಿಗಮದ 2 ಎಕರೆ 34 ಗುಂಟೆ ಜಮೀನಿನನ್ನು ಮೈಸೂರು ಮಿನರಲ್ಸ್ ಸಹಯೋಗದಲ್ಲಿ ಅಭಿವೃದ್ಧಿಪಡಿಸಿ, ಆದಾಯ ತರುವಂತೆ ಕ್ರಮಕೈಗೊಳ್ಳಿ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ವಿನ್ಯಾಸ ಸಂಸ್ಥೆಗಳೊಂದಿಗೆ ಒಪ್ಪಂದ

ವಿನ್ಯಾಸ ಸಂಸ್ಥೆಗಳೊಂದಿಗೆ ಒಪ್ಪಂದ

ಕೈಗಾರಿಕೆ ಬೆಳೆಯಲು ನಗರ ಪ್ರದೇಶದ ಗ್ರಾಹಕರನ್ನು ಆಕರ್ಷಿಸುವುದು ಅತ್ಯಗತ್ಯ. ಹೀಗಾಗಿ ವಿನ್ಯಾಸ ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಂಡು ಮಾರುಕಟ್ಟೆ ಅವಕಾಶ ವಿಸ್ತರಿಸಿ. ಅದರೊಂದಿಗೆ ರಾಜ್ಯದ ಕೈಮಗ್ಗ ಉತ್ಪನ್ನಗಳು ಹಾಗೂ ಕರಕುಶಲ ವಸ್ತುಗಳು ಒಂದೇ ಸೂರಿನಡಿ ಲಭ್ಯವಾಗುವಂತೆ ಅವಕಾಶ ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಿದ್ದು ಸವದಿ ಮಾತನಾಡಿ ಸಿಎಂ ಬೊಮ್ಮಾಯಿ ಅವರ ಆದೇಶಕ್ಕೆ ಅಭಿನಂದಿಸಿದರು. ಕೈಮಗ್ಗ ನಿಗಮದಿಂದ ಸರ್ಕಾರದ ವಿವಿಧ ಇಲಾಖೆಗಳು ಉತ್ಪನ್ನ ಖರೀದಿ ಮಾಡುವುದರಿಂದ ಸರ್ಕಾರಕ್ಕೆ ಲಾಭವಾಗುತ್ತದೆ. ಜೊತೆಗೆ ಗುಣಮಟ್ಟದ ವಸ್ತುಗಳೂ ದೊರೆತಂತಾಗುತ್ತದೆ. ಹೀಗಾಗಿ ಮುಖ್ಯಮಂತ್ರಿಗಳು ಮಾಡಿರುವ ಆದೇಶವನ್ನು ಎಲ್ಲ ಇಲಾಖೆಗಳು ಪಾಲಿಸಬೇಕು ಎಂದು ಮನವಿ ಮಾಡಿದರು.

ಆನ್‌ಲೈನ್ ಮಾರಾಟ ವ್ಯವಸ್ಥೆ

ಆನ್‌ಲೈನ್ ಮಾರಾಟ ವ್ಯವಸ್ಥೆ

ಜೊತೆಗೆ ಮಾರುಕಟ್ಟೆ ಪೈಪೋಟಿ ಎದುರಿಸಿ ಕೈಮಗ್ಗ ಉತ್ಪನ್ನಗಳಿಗೆ ಬೇಡಿಕೆ ಸಿಗುವಂತೆ ಮಾಡಲು ಆನ್‌ಲೈನ್ ಮಾರಾಟ ವ್ಯವಸ್ಥೆ ರೂಪಿಸಲು ಸಿಎಂ ಬಸವರಾಜ ಬೊಮ್ಮಾಯಿ ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.

ಸಭೆಯಲ್ಲಿ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಿದ್ದು ಸವದಿ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್. ಎನ್. ಪ್ರಸಾದ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್, ವಾಣಿಜ್ಯ ಮತ್ತು ಕೈಗಾರಿಕೆ (ಎಂ.ಎಸ್.ಎಂ.ಇ) ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Recommended Video

51 ವರ್ಷಗಳಿಂದ ಈ ಮೈದಾನದಲ್ಲಿ ಭಾರತ ಸೊತೇ ಇಲ್ಲ | Oneindia Kannada

English summary
Chief Minister Basavaraj Bommai today directed Karnataka Handloom Development Corporation officials to evolve and submit a business development plan immediately for the revival of the Corporation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X