ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಹಣ ಬಿಡುಗಡೆ ಮಾಡಿದ ಸಿಎಂ ಬೊಮ್ಮಾಯಿ!

|
Google Oneindia Kannada News

ಬೆಂಗಳೂರು, ನ. 09: ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ರೂಪಾಯಿ ಮಂಜೂರು ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮನ್ನು ಭೇಟಿ ಮಾಡಿದ ಅಖಿಲ ಗೋವಾ ಕನ್ನಡ ಮಹಾಸಂಘದ ಪದಾಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಭರವಸೆ ನೀಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ನೇತೃತ್ವದಲ್ಲಿ ಗೋವಾ ಕನ್ನಡ ಮಹಾಸಂಘ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿತ್ತು.

cm bommai has announced the allocation of Rs 10 crore for the construction of Kannada Bhavan in Goa

ನಿಯೋಗದ ಭೇಟಿ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, "ಗೋವಾ ರಾಜ್ಯದಲ್ಲಿ ಉತ್ತರ ಕರ್ನಾಟಕ ಭಾಗದ ಬಹುತೇಕ ಜನರು ನೆಲೆಸಿದ್ದಾರೆ. ಅವರು ಹೊರನಾಡು ಗೋವಾದಲ್ಲಿ ಕನ್ನಡವನ್ನು ಉಳಿಸಿ ಬೆಳೆಸುತ್ತಿದ್ದಾರೆ. ಕನ್ನಡ ಸಂಸ್ಕೃತಿಯನ್ನು ಕಾಪಾಡುತ್ತಿದ್ದಾರೆ. ಆದರೆ ಕನ್ನಡಿಗರಿಗೆ ಅಲ್ಲಿ ನೆಲೆಯಿಲ್ಲ . ಹೀಗಾಗಿ ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಸರ್ಕಾರ ಸಿದ್ಧವಿದೆ. ಇದಕ್ಕೆ ಸೂಕ್ತ ಭೂಮಿಯನ್ನು ಗುರುತಿಸಿ ಡಿಪಿಆರ್ ಸಿದ್ಧಪಡಿಸಿ" ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

cm bommai has announced the allocation of Rs 10 crore for the construction of Kannada Bhavan in Goa

Recommended Video

ವಿರಾಟ್ & ರವಿಶಾಸ್ತ್ರಿ ಜೋಡಿ ಕ್ರಿಕೆಟ್ ಇತಿಹಾಸದಲ್ಲಿ ಸಾಧಿಸಿದ್ದೇನು? | Oneindia Kannada

ಇದೇ ಸಂದರ್ಭದಲ್ಲಿ ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ರೂಪಾಯಿ ಮಂಜೂರು ಮಾಡುವಂತೆಯೂ ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಆದೇಶಿಸಿದ್ದಾರೆ. ರಾಜ್ಯ ಸರ್ಕಾರದ ಈ ನಿರ್ಧಾರಕ್ಕೆ ಗೋವಾ ಕನ್ನಡ ಮಹಾಸಂಘದ ಗೌರವ ಅಧ್ಯಕ್ಷ ಸಿದ್ದಣ್ಣ ಮೇಟಿ, ಹಾಗೂ ಪದಾಧಿಕಾರಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಗೋವಾ ಕನ್ನಡ ಮಹಾ ಸಂಘದ ಅಧ್ಯಕ್ಷ ಹನುಮಂತರೆಡ್ಡಿ ಶಿರೂರ್, ಪದಾಧಿಕಾರಿಗಳಾದ ಮಲ್ಲಿಕಾರ್ಜುನ ಬದಾಮಿ, ಮಹೇಶ್ ಬಾಬು ಸುರ್ವೇ, ಅರುಣ್ ಕುಮಾರ್ ಉಪಸ್ಥಿತರಿದ್ದರು.

English summary
Chief Minister Basavaraj Bommai has announced the allocation of Rs 10 crore for the construction of Kannada Bhavan in Goa. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X