ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಾಜಿ ಸಿಎಂ ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಮತ್ತೆ ಜಾರಿಗೆ ತಂದ ಸಿಎಂ ಬೊಮ್ಮಾಯಿ!

|
Google Oneindia Kannada News

ಬೆಂಗಳೂರು, ಅ. 16: ಮುಖ್ಯಮಂತ್ರಿಯಾದ ತಕ್ಷಣ ಜೆಡಿಎಸ್ ನಾಯಕರನ್ನು ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಮಾಡಿದ್ದು ಬಿಜೆಪಿಯಲ್ಲಿ ವಿರೋಧಕ್ಕೆ ಕಾರಣವಾಗಿತ್ತು. ಇದೇ ವಿಚಾರ ಮುಂದಿಟ್ಟುಕೊಂಡು ಹಾಸನ ಬಿಜೆಪಿ ಶಾಸಕ ಪ್ರೀತಂಗೌಡ ಅವರು ಮಾತನಾಡಿದ್ದರು. ಜೊತೆಗೆ ಬಿಜೆಪಿಯ ಇನ್ನಿತರ ಕೆಲ ನಾಯಕರೂ ಆ ಬಗ್ಗೆ ಮಾತನಾಡಿದ್ದರು. ಆ ಬೆಳವಣಿಗೆ ಬಿಜೆಪಿ ಹೈಕಮಾಂಡ್ ಕಂಗೆಣ್ಣಿಗೂ ಗುರಿಯಾಗಿತ್ತು ಎಂಬ ಮಾಹಿತಿಯಿದೆ.

ಇದೇ ಸಂದರ್ಭದಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದ ಜನಪ್ರೀಯ ಗ್ರಾಮ ವಾಸ್ತವ್ಯ ಪರಿಕಲ್ಪನೆಯನ್ನು ಸಿಎಂ ಬೊಮ್ಮಾಯಿ ಅನುಕರಣೆ ಮಾಡುತ್ತಿದ್ದಾರೆ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಗ್ರಾಮ ವಾಸ್ತವ್ಯ ಮಾಡಬೇಕು ಎಂದು ಸೂಚಿಸಿದ್ದರು. ಅದೇ ಮಾದರಿಯಲ್ಲಿ ಸಿಎಂ ಬೊಮ್ಮಾಯಿ 'ಜಿಲ್ಲಾಧಿಕಾರಿಗಳ ನಡೆ-ಹಳ್ಳಿಯ ಕಡೆ ಗ್ರಾಮ ವಾಸ್ತವ್ಯ' ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ.

ಜಿಲ್ಲಾಧಿಕಾರಿಗಳ ನಡೆ-ಹಳ್ಳಿಯ ಕಡೆ

ಜಿಲ್ಲಾಧಿಕಾರಿಗಳ ನಡೆ-ಹಳ್ಳಿಯ ಕಡೆ

ಜಿಲ್ಲಾಧಿಕಾರಿಗಳ ನಡೆ-ಹಳ್ಳಿಯ ಕಡೆ, ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಾವಣಗೆರೆ ಜಿಲ್ಲೆ ನ್ಯಾಮತಿ ತಾಲ್ಲೂಕು ಸುರಹೊನ್ನೆ ಹಾಗೂ ಗ್ರಾಮದಲ್ಲಿ ಶನಿವಾರ ಚಾಲನೆ ನೀಡಿದ್ದಾರೆ. ಮಹಾತ್ಮ ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಪರಿಕಲ್ಪನೆ ಇಂದಿಗೂ ಪ್ರಸ್ತುತ. ಭಾರತದಂತಹ ಅಭಿವೃದ್ಧಿಶೀಲ ದೇಶಗಳ ಆರ್ಥಿಕ ಸ್ವಾವಲಂಬನೆಗೆ ಗ್ರಾಮ ಸ್ವರಾಜ್ಯ ಪರಿಕಲ್ಪನೆ ಅತ್ಯಗತ್ಯ. ಇದರ ಜೊತೆಗೆ ಸರ್ಕಾರವನ್ನು ಹಳ್ಳಿಗಳತ್ತ, ಜನರ ಮನೆ ಬಾಗಿಲಿಗೆ ಕೊಂಡೊಯ್ದು, ಅವರ ಸಮಸ್ಯೆ ಗೆ ಸ್ಥಳೀಯ ವಾಗಿಯೇ ಪರಿಹಾರ ಕಂಡುಕೊಳ್ಳುವಂತಾಗಲು ರಾಜ್ಯ ಸರ್ಕಾರ ಯೋಜನೆ ಜಾರಿಗೆ ತಂದಿದೆ.

ಜನರಿಗೆ ಸಿಎಂ ಬೊಮ್ಮಾಯಿ ಕೊಟ್ಟ ಭರವಸೆ!

ಜನರಿಗೆ ಸಿಎಂ ಬೊಮ್ಮಾಯಿ ಕೊಟ್ಟ ಭರವಸೆ!

ದಾವಣಗೆರೆ ಜಿಲ್ಲೆ ನ್ಯಾಮತಿ ತಾಲ್ಲೂಕಿನ ಸುರಹೊನ್ನೆಯಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ-ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟ ಬಳಿಕ ಮಾತನಾಡಿರುವ ಸಿಎಂ ಬೊಮ್ಮಾಯಿ, "ಗ್ರಾಮೀಣ ಪ್ರದೇಶದಲ್ಲಿ ಜನರಿಗೆ ಸಂಪರ್ಕ ಇರುವ ಎಲ್ಲ ಸಂಸ್ಥೆಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಿದಾಗ ಮಾತ್ರ ಜನಪರ ಸರ್ಕಾರ ಆಗುತ್ತದೆ. ಈ ತತ್ವದ ಹಿನ್ನೆಲೆಯಲ್ಲಿ ಸರ್ಕಾರವನ್ನು ಜನರ ಮನೆ ಬಾಗಿಲಿಗೆ ತಲುಪಿಸಲಾಗುತ್ತಿದೆ. ಜಿಲ್ಲಾಧಿಕಾರಿಗಳು ಮಾತ್ರವಲ್ಲ, ಇಡೀ ಸರ್ಕಾರವೇ ಗ್ರಾಮಗಳ ಕಡೆ ನಡೆದಿದೆ. ಅಭಿವೃದ್ಧಿ ಜನರ ಸುತ್ತಲೂ ಆಗಬೇಕು. ಆ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ" ಎಂದು ಜನರಿಗೆ ಭರವಸೆ ನೀಡಿದ್ದಾರೆ.

ಮನೆ ಬಾಗಿಲಿಗೆ ಬರಲಿದೆ ಪಡಿತರ ವ್ಯವಸ್ಥೆ!

ಮನೆ ಬಾಗಿಲಿಗೆ ಬರಲಿದೆ ಪಡಿತರ ವ್ಯವಸ್ಥೆ!

ಇದೇ ಸಂದರ್ಭದಲ್ಲಿ ಮತ್ತೊಂದು ಮಹತ್ವದ ಘೋಷಣೆ ಮಾಡಿರುವ ಸಿಎಂ ಬೊಮ್ಮಾಯಿ, "ಜನವರಿ 26ರ ನಂತರ ಪಡಿತರವನ್ನು ಜನರ ಮನೆ ಬಾಗಿಲಿಗೆ ತಲುಪಿಸಲು ಸಿದ್ಧತೆಗಳನ್ನು ಮಾಡಲಾಗುತ್ತಿದೆ. ಸಾಮಾಜಿಕ ಭದ್ರತೆ ಮನೆ ಬಾಗಿಲಿಗೆ ಬರಬೇಕು. ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಎಲ್ಲ ಸೌಲಭ್ಯಗಳು ದೊರಕಲು ಯೋಜನೆ ರೂಪಿಸಲಾಗಿದೆ. ಪ್ರಾಯೋಗಿಕವಾಗಿ ನವೆಂಬರ್ 1 ರಂದು ಜನಸೇವಕ ಕಾರ್ಯಕ್ರಮವನ್ನು ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ಮೊಬೈಲ್ ಮೂಲಕ ದೊರಕಿಸುವ ವ್ಯವಸ್ಥೆ ಮಾಡಲಾಗುತ್ತಿದೆ. ಹೀಗಾಗಿ ಇನ್ಮುಂದೆ ತಾಲ್ಲೂಕು ಕಚೇರಿಗೆ ಹೋಗಬೇಕಾಗಿಲ್ಲ. ಪ್ರತಿ ಗ್ರಾಮ ಪಂಚಾಯತಿಯಲ್ಲಿ ಇರುವ ಕೇಂದ್ರದಲ್ಲಿ ಸಮಸ್ಯೆ ಬಗೆಹರಿಸಿಕೊಳ್ಳಬಹುದು. ಜನರ ಸೇವೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಯಿಂದ ಹಿಡಿದು, ಗ್ರಾಮ ಪಂಚಾಯತಿಯ ಅಧಿಕಾರಿಗಳು ಭಾಗವಹಿಸಬೇಕು" ಎಂದು ಸೂಚಿಸಿದ್ದಾರೆ.

ಅಧಿಕಾರ ವಿಧಾನಸೌದಿಂದ ಗ್ರಾಮಗಳತ್ತ ಹರಿಯಬೇಕು!

ಅಧಿಕಾರ ವಿಧಾನಸೌದಿಂದ ಗ್ರಾಮಗಳತ್ತ ಹರಿಯಬೇಕು!

ಜೊತೆಗೆ "ಅಧಿಕಾರ ಹೆಪ್ಪುಗಟ್ಟಿ ವಿಧಾನಸೌಧದ ಕುಳಿತುಕೊಳ್ಳದೆ, ಜೇನುತುಪ್ಪವಾಗಿ ಗ್ರಾಮೀಣ ಪ್ರದೇಶಕ್ಕೆ ಹರಿಯಬೇಕೆನ್ನುವ ಕಲ್ಪನೆ ನಮ್ಮದು. ಕಾಲ ಬದಲಾಗಿದ್ದು, ಜನರು ಜಾಗೃತರಾಗಿದ್ದಾರೆ. ಸ್ಪಂದನಶೀಲ ಸರ್ಕಾರ ಕರ್ನಾಟಕದಲ್ಲಿದೆ. ಸ್ವಚ್ಚ, ದಕ್ಷ, ಜನಪರ ಆಡಳಿತವನ್ನು ನಾವು ಕೊಡುತ್ತೇವೆ. ಅದರ ಲಾಭವನ್ನು ಜನ ಪಡೆಯಬೇಕು. ನಮ್ಮ ಸರ್ಕಾರ ಬಡವರಿಗೆ 4 ಲಕ್ಷ ಮನೆಗಳನ್ನು ಕೇವಲ ಒಂದೂವರೆ ವರ್ಷದಲ್ಲಿ ಕಟ್ಟಿದೆ. ನಗರಗಳ ಕೊಳಗೇರಿಯಲ್ಲಿರುವವರಿಗೆ 1 ಲಕ್ಷ ಮನೆಗಳನ್ನು ಕಟ್ಟಿ ಕೊಡಲಾಗುತ್ತಿದೆ. ಜಲಜೀವನ್ ಮಿಷನ್ ಯೋಜನೆಯನ್ನು ಅನುಷ್ಠಾನಗೊಳಿಸಲು 2 ಸಾವಿರ ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಉದ್ಯಮ, ಉದ್ಯೋಗಕ್ಕೆ ಸಮಾನ ಮಹತ್ವವನ್ನು ಸರ್ಕಾರ ನೀಡಿದೆ. ಶಿಕ್ಷಣದಲ್ಲಿ ಕ್ರಾಂತಿಕಾರಿ ಬದಲಾವಣೆ ತರುವ ನೂತನ ಶಿಕ್ಷಣ ನೀತಿಯನ್ನು ಜಾರಿಗೊಳಿಸುತ್ತಿದ್ದೇವೆ" ಎಂದು ಇದೇ ಸಂದರ್ಭದಲ್ಲಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ.

Recommended Video

Air India ದಿವಾಳಿಯಾಗಲು ಕಾರಣ?ಸರ್ಕಾರ ಖಾಸಗೀಕರಣ ಮಾಡಿದ್ಯಾಕೆ? | Oneindia Kannada

English summary
Chief Minister Basvaraj Bommai has launched the Jilladhikarigala nade halligala kade-grama vastavya program. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X