ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆಲಮಟ್ಟಿ ಡ್ಯಾಂ ಸಂತ್ರಸ್ತರಿಗೆ ಸಲ್ಪ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ!

|
Google Oneindia Kannada News

ಬೆಂಗಳೂರು, ಸೆ. 28: ಸರಿ ಸುಮಾರು 12 ಲಕ್ಷ ಹೆಕ್ಟೇರ್ ಜಮೀನಿಗೆ ನೀರಾವರಿ ಸೌಲಭ್ಯ ಒದಗಿಸುವ ಕೃಷ್ಣಾ ಮೇಲ್ದಂಡೆ ಯೋಜನೆ ಮುಂದುವರೆಸುವ ಹಿನ್ನೆಲೆಯಲ್ಲಿ ಸೋಮವಾರ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಕಳೆದ ಕೆಲವು ವರ್ಷಗಳಿಂದ ಯುಕೆಪಿ 3ನೇ ಹಂತದ ಯೋಜನೆ ಅನುಷ್ಠಾನ ವಿಳಂಬವಾಗುತ್ತಿದೆ. ಹೀಗಾಗಿ ಸ್ಥಗಿತಗೊಂಡಿದ್ದ ಕೃಷ್ಣಾ ಮೇಲ್ದಂಡೆ ಯೋಜನೆಯ ಭೂಸ್ವಾಧೀನ ಮತ್ತು ಪುನರ್‌ವಸತಿ ಮತ್ತು ಪುನರ್‌ ನಿರ್ಮಾಣ ಕುರಿತು ತೀರ್ಮಾನ ಕೈಗೊಂಡಿದ್ದು, ಆ ಮೂಲಕ ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಯ ಜನರಿಗೆ ಸಣ್ಣ ನೆಮ್ಮದಿ ತರುವಂತಹ ಸುದ್ದಿಯನ್ನು ಸರ್ಕಾರ ಕೊಟ್ಟಿದೆ.

ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತದ ಅನುಷ್ಠಾನಕ್ಕೆ ಭೂಸ್ವಾಧೀನ ಪ್ರಕ್ರಿಯೆ ಕೊನೆಯ ಹಂತದಲ್ಲಿರುವ ಪ್ರಕರಣಗಳಿಗೆ ಕೂಡಲೇ ಪರಿಹಾರ ಪಾವತಿಸಲು, ಪುನರ್ ವಸತಿ ಕೇಂದ್ರಗಳ ಸ್ಥಾಪನೆ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ 2500 ಕೋಟಿ ರೂ. ಬಿಡುಗಡೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದ್ದು, ಆ ಮೂಲಕ ಆಲ್ಮಟ್ಟಿ ಜಲಾಶಯದ ಹಿನ್ನೀರಿನಲ್ಲಿ ಬದುಕು ಕಳೆದುಕೊಂಡಿರುವ ಸಂತ್ರಸ್ತರಿಗೆ ರಾಜ್ಯ ಸರ್ಕಾರ ಭರವಸೆ ಕೊಟ್ಟಿದೆ.

20 ಗ್ರಾಮಗಳ ಸ್ಥಳಾಂತರಕ್ಕೆ ನಿರ್ಧಾರ!

20 ಗ್ರಾಮಗಳ ಸ್ಥಳಾಂತರಕ್ಕೆ ನಿರ್ಧಾರ!

3ನೇ ಹಂತದ ಯೋಜನೆಯಲ್ಲಿ ಮುಳುಗಡೆಯಾಗುವ 20 ಗ್ರಾಮಗಳನ್ನು ಸ್ಥಳಾಂತರಿಸಲು ತೀರ್ಮಾನಿಸಿದ್ದು ಅದಕ್ಕೆ ಬೇಕಾಗುವ ಪುನರ್‌ವಸತಿ ಕೇಂದ್ರ ಹಾಗೂ ಮೂಲಸೌಕರ್ಯಕ್ಕೆ ಅಗತ್ಯವಿರುವ ಅನುದಾನವನ್ನು ಪೂರೈಸಲು ಸರ್ಕಾರ ತೀರ್ಮಾನಿಸಿರುತ್ತದೆ. 20 ಗ್ರಾಮಗಳ ಕಟ್ಟಡಗಳನ್ನು ಹಾಗೂ ಆ ಗ್ರಾಮಗಳಿಗೆ ಸಂಬಂಧಿಸಿದಂತೆ ಮುಳುಗಡೆ ಜಮೀನು ಕೂಡ ಸ್ವಾಧೀನಪಡಿಸಿಕೊಂಡು ಪ್ರಸ್ತುತ ಸಾಲಿನಲ್ಲಿ 2,500 ಕೋಟಿ ರೂ. ಹೆಚ್ಚುವರಿ ಅನುದಾನ ಒದಗಿಸಲು ತೀರ್ಮಾನಿಸಲಾಯಿತು.

ಪ್ರಕರಣಗಳ ಇತ್ಯರ್ಥಕ್ಕೆ ಕಾನೂನು ಸಲಹೆಗಾರರ ನೇಮಕ!

ಪ್ರಕರಣಗಳ ಇತ್ಯರ್ಥಕ್ಕೆ ಕಾನೂನು ಸಲಹೆಗಾರರ ನೇಮಕ!

ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿಗೊಳಿಸಲು ಅನುಕೂಲವಾಗುವಂತೆ ಕಾನೂನು ಸಲಹೆಗಾರರನ್ನು ಬೆಂಗಳೂರಿನಲ್ಲಿರುವ ಕೇಂದ್ರ ಕಾನೂನು ಕೋಶದಿಂದ ಬಾಲಕೋಟೆಯಲ್ಲಿರುವ ಕೃಷ್ಣಾ ಮೇಲ್ದಂಡೆ ಯೋಜನೆಗೆ ನೇಮಿಸಿ ಕಾನೂನು ಕೋಶವನ್ನು ಬಲಯುತಗೊಳಿಸಲು ತೀರ್ಮಾನಿಸಲಾಯಿತು.

ಧಾರವಾಡ ಮತ್ತು ಕಲಬುರಗಿ ಹೈಕೋರ್ಟ್‌ ಪೀಠಗಳಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯ ವಿಚಾರಣೆ ಹಂತದಲ್ಲಿರುವ ಭೂಸ್ವಾಧೀನ ಮೇಲ್ಮನವಿ ಪ್ರಕರಣಗಳಲ್ಲಿ ವಾದಿಸಲು ವಿಶೇಷ ಸರ್ಕಾರಿ ವಕೀಲರನ್ನು ನೇಮಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಆಲಮಟ್ಟಿಗೆ ಕೃಷ್ಣಾ ಮೇಲ್ದಂಡೆ ಕಚೇರಿ ಸ್ಥಳಾಂತರ!

ಆಲಮಟ್ಟಿಗೆ ಕೃಷ್ಣಾ ಮೇಲ್ದಂಡೆ ಕಚೇರಿ ಸ್ಥಳಾಂತರ!

ಕೃಷ್ಣಾ ಭಾಗ್ಯ ಜಲ ನಿಗಮದ ಕಚೇರಿಯನ್ನು ಆಲಮಟ್ಟಿಗೆ ವರ್ಗಾಯಿಸಲು ಇದೇ ವೇಳೆ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಆದ್ಯತೆಯ ಮೇಲೆ ಭರ್ತಿ ಮಾಡಲು ತೀರ್ಮಾನಿಸಲಾಗಿದೆ. ಭೂಸ್ವಾಧೀನ ಪ್ರಕ್ರಿಯೆ ತ್ವರಿತಗೊಳಿಸಲು ಹೆಚ್ಚುವರಿ ಸಿಬ್ಬಂದಿ ಒದಗಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದು, ಡ್ರೋನ್ ಸರ್ವೇ ಮತ್ತು ಸರ್ವೇಯರುಗಳನ್ನು ಬಳಸಿ ಸರ್ವೇ ಮಾಡಲು ಸೂಚಿಸಲಾಗಿದೆ.

Recommended Video

ಭಾರತದ ಡೇಟಾಬೇಸ್ ಕದ್ದು ಚೀನಾ ಮಾಡೋದೇನು? ಆಘಾತಕಾರಿ ಮಾಹಿತಿ ಬಯಲು | Oneindia Kannada
12 ಲಕ್ಷ ಹೆಕ್ಟೇರ್ ಪ್ರದೇಶ ನೀರಾವರಿ ಗುರಿ!

12 ಲಕ್ಷ ಹೆಕ್ಟೇರ್ ಪ್ರದೇಶ ನೀರಾವರಿ ಗುರಿ!

ಕೃಷ್ಣಾ ಮೇಲ್ದಂಡೆ ಹಂತ 1 ಮತ್ತು 2ರಡಿ 6.22 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸಾಮರ್ಥ್ಯ ಕಲ್ಪಿಸಲಾಗಿದೆ. ಆದರೆ ಕಾಲುವೆಗಳ ಕೊನೆಯ ಭಾಗಕ್ಕೆ ನೀರು ಈಗಲೂ ತಲುಪುತ್ತಿಲ್ಲ. ಹೀಗಾಗಿ ರೈತರ ಜಮೀನುಗಳಿಗೆ ನೀರು ಹರಿಯಬೇಕು. ಅದಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಹಂತ ಮೂರರಲ್ಲಿ 9 ಯೋಜನೆಗಳ ಅನುಷ್ಠಾನದ ಮೂಲಕ 5.94 ಹೆಕ್ಟೇರ್‌ ಜಮೀನಿಗೆ ನೀರು ಒದಗಿಸುವ ಗುರಿ ಹೊಂದಲಾಗಿದೆ.

ಸಭೆಯಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಎಂ. ಕಾರಜೋಳ, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್. ಎನ್. ಪ್ರಸಾದ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

English summary
Chief Minister Basavaraj Bommai has ordered to release Rs 2500 crore for the Upper Krishna Project third phase. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X