ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಿಲ್ಲಾಧಿಕಾರಿಗಳ ಜೊತೆ ಸಿಎಂ ಬೊಮ್ಮಾಯಿ ಸಭೆ: ಮಳೆ ಪರಿಹಾರ ಕಾರ್ಯಕ್ಕೆ ಸೂಚನೆ

|
Google Oneindia Kannada News

ಬೆಂಗಳೂರು, ಜುಲೈ 15: ಮಳೆಯಿಂದ ಹಾನಿಗೊಳಗಾಗಿರುವ ಜಿಲ್ಲೆಗಳಲ್ಲಿನ ಸ್ಥಿತಿಗತಿ ಹಾಗೂ ಪರಿಹಾರ ಕಾರ್ಯಾಚರಣೆ ಕುರಿತಂತೆ ದೇವನಹಳ್ಳಿಯಲ್ಲಿ ಸಿಎಂ ಬೊಮ್ಮಾಯಿ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಸಂವಾದ ನಡೆಸಿದರು. ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸತತವಾಗಿ ಮಳೆ ಸುರಿಯುತ್ತಿದೆ. ಇದರಿಂದ ಹಲವಾರು ಜಿಲ್ಲೆಗಳಲ್ಲಿ ಸಮಸ್ಯೆಯಾಗಿದೆ.

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳ ತುರ್ತು ಮರುಸ್ಥಾಪನೆಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡಲೇ 500 ಕೋಟಿ ರುಪಾಯಿ ಬಿಡುಗಡೆ ಮಾಡಲು ಆದೇಶ ಹೊರಡಿಸಿದ್ದಾರೆ.

ಭದ್ರಾವತಿ ಹೊಸ ಸೇತುವೆ ಜಲಾವೃತ, ಸಂಚಾರ ಸ್ಥಗಿತ, 120 ಮಂದಿ ಸ್ಥಳಾಂತರಭದ್ರಾವತಿ ಹೊಸ ಸೇತುವೆ ಜಲಾವೃತ, ಸಂಚಾರ ಸ್ಥಗಿತ, 120 ಮಂದಿ ಸ್ಥಳಾಂತರ

ಮೂಲಭೂತ ಸೌಕರ್ಯಗಳಾದ ರಸ್ತೆ, ಸೇತುವೆ, ಶಾಲೆ, ಅಂಗವಾಡಿ ಕೇಂದ್ರ, ವಿದ್ಯುತ್ ಕಂಬ, ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡಗಳು ಹಾನಿಗೆ ಒಳಗಾಗಿವೆ.

ಸಂವಾದದ ವೇಳೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, "ಕೆಲ ದಿನಗಳ ಹಿಂದೆ ಮಳೆ ಬಾಧಿತ ಜಿಲ್ಲೆಗಳಲ್ಲಿ ಪ್ರವಾಸ ಮಾಡಿದ್ದು, ಆ ಸಂದರ್ಭದಲ್ಲಿ ಮಳೆಯಿಂದಾಗಿರುವ ಹಾನಿಯನ್ನು ಕಣ್ಣಾರೆ ಕಂಡಿದ್ದೇನೆ. ತ್ವರಿತ ಗತಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಯಥಾಸ್ಥಿತಿಗೆ ತರಬೇಕು, ಇದಕ್ಕೆ ಹಲವು ಕಾಮಗಾರಿಗಳನ್ನು ಕೈಗೊಳ್ಳಬೇಕು, ಅದಕ್ಕಾಗಿ 500 ಕೋಟಿ ರುಪಾಯಿ ಬಿಡುಗಡೆ ಮಾಡಲಾಗುವುದು" ಎಂದು ತಿಳಿಸಿದ್ದಾರೆ.

 ಮೂಲಭೂತ ಸೌಲಭ್ಯಗಳ ದುರಸ್ಥಿಗೆ ಆದ್ಯತೆ

ಮೂಲಭೂತ ಸೌಲಭ್ಯಗಳ ದುರಸ್ಥಿಗೆ ಆದ್ಯತೆ

ಮಳೆಯಿಂದ ಹಾನಿಯಾಗಿರುವ ಮನೆಗಳ ದುರಸ್ಥಿಗಾಗಿ ತುರ್ತು ಪರಿಹಾರವಾಗಿ 10 ಸಾವಿರ ರುಪಾಯಿಗಳನ್ನು ನೀಡಬೇಕು, ನಂತರ ಮನೆಗಳ ನಿರ್ಮಾಣವನ್ನು ಕೂಡಲೇ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬೊಮ್ಮಾಯಿ ಆದೇಶ ನೀಡಿದ್ದಾರೆ.

ಎನ್‌ಡಿಆರ್‌ಎಫ್‌ ಮಾರ್ಗಸೂಚಿಗಳ ಪ್ರಕಾರ ಹಾನಿಗೊಳಗಾಗಿರುವ ಮನೆಗಳ ನಿರ್ಮಾಣಕ್ಕೆ ಕೂಡಲೇ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ. ನೆರೆಯಿಂದ ಹಾಳಾಗಿರುವ ರಸ್ತೆ, ಸೇತುವೆ, ವಿದ್ಯುತ್ ಕಂಬ ಮುಂತಾದ ಮೂಲಭೂತ ಸೌಲಭ್ಯಗಳ ದುರಸ್ಥಿಗೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಹೇಳಿದ್ದಾರೆ.

ಮಳೆಯಿಂದ ಉಂಟಾಗಿರುವ ಹಾನಿಯ ಕುರಿತು ಜಂಟಿ ಸಮೀಕ್ಷೆ ನಡೆಸಿ ವ್ಯವಸ್ಥಿತವಾಗಿ ಪರಿಹಾರವನ್ನು ತಕ್ಷಣವೇ ಒದಗಿಸಲು ಕ್ರಮ ವಹಿಸಬೇಕು. ನೆರೆ ಪೀಡಿತ ಪ್ರದೇಶಗಳಿಂದ ಸಂಬಂಧಿಕರ ಮನೆಗಳಿಗೆ ತೆರಳಿರುವ ಸಂತ್ರಸ್ತರಿಗೆ ಪಡಿತರ ಕಿಟ್‌ಅನ್ನು ಕಂದಾಯ ಇಲಾಖೆ ನೀಡುವ ಪಟ್ಟಿಯಂತೆ ಒದಗಿಸಬೇಕು ಎಂದು ತಿಳಿಸಿದ್ದಾರೆ.

ಪ್ರಕೃತಿ ವಿಕೋಪ ಪರಿಹಾರದಡಿ ಕೈಗೊಂಡಿರುವ ಮನೆಗಳ ನಿರ್ಮಾಣ ಕಾರ್ಯವನ್ನು ಜಿಲ್ಲಾಧಿಕಾರಿಗಳು ಪರಿಶೀಲಿಸಬೇಕು. ಕಳೆದ ಮೂರು ವರ್ಷಗಳ ಅವಧಿಯ ಮನೆಗಳ ನಿರ್ಮಾಣ ಕಾರ್ಯ ಹಾಗೂ ಅವುಗಳನ್ನು ಪೂರ್ಣಗೊಳಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ವಿಸ್ತೃತ ವರದಿ ಸಲ್ಲಿಸಬೇಕು ಎಂದು ಹೇಳಿದರು.

ಕರಾವಳಿಯಲ್ಲಿ ಕಡಲ ಅಬ್ಬರ: ನೋಡನೋಡುತ್ತಿದ್ದಂತೆಯೇ ಕಡಲ ಪಾಲಾದ ಮನೆ-ರಸ್ತೆ!ಕರಾವಳಿಯಲ್ಲಿ ಕಡಲ ಅಬ್ಬರ: ನೋಡನೋಡುತ್ತಿದ್ದಂತೆಯೇ ಕಡಲ ಪಾಲಾದ ಮನೆ-ರಸ್ತೆ!

 ಜಲಾಶಯಗಳ ನೀರಿನ ಪ್ರಮಾಣದ ಮೇಲೆ ನಿಗಾ ವಹಿಸಿ

ಜಲಾಶಯಗಳ ನೀರಿನ ಪ್ರಮಾಣದ ಮೇಲೆ ನಿಗಾ ವಹಿಸಿ

ಮಹಾರಾಷ್ಟ್ರದ ಕೋಯ್ನಾ ಜಲಾಶಯದ ನೀರಿನ ಮಟ್ಟದ ಬಗ್ಗೆ ನಿಗಾ ವಹಿಸಲು ಅಲ್ಲಿನ ಅಧಿಕಾರಿಗಳ ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಕೊಯ್ನಾ ಜಲಾಶಯದಿಂದ ಏಕಾಏಕಿ ನೀರು ಬಿಟ್ಟರೆ ಉತ್ತರ ಕರ್ನಾಟಕದ ಹಲವು ಪ್ರದೇಶಗಳಲ್ಲಿ ನೆರೆ ಪರಿಸ್ಥಿತಿ ಸಂಭವಿಸಲಿದೆ.

ಕರ್ನಾಟಕದ ಜಲಾಶಯಗಳಿಂದ ನೀರು ಹೊರಬಿಡುವ ಮುನ್ನ ನದಿ ಪಾತ್ರಗಳ ಗ್ರಾಮಗಳಿಗೆ ಎಚ್ಚರಿಕೆ ನೀಡಿ ಜೀವ ಹಾನಿ ಅಥವಾ ಮನೆಗಳಿಗೆ ತೊಂದರೆಯಾಗದಂತೆ ಮುನ್ನಚ್ಚರಿಕೆ ವಹಿಸುವುದು. ಜನರ ಸ್ಥಳಾಂತರಕ್ಕೆ ಕ್ರಮ ವಹಿಸುವಂತೆ ಕೂಡ ಸೂಚನೆ ನೀಡಿದ್ದಾರೆ.

 ಎಲ್ಲಾ ಇಲಾಖೆಗಳು ಒಟ್ಟಾಗಿ ಕೆಲಸ ಮಾಡಲು ಸೂಚನೆ

ಎಲ್ಲಾ ಇಲಾಖೆಗಳು ಒಟ್ಟಾಗಿ ಕೆಲಸ ಮಾಡಲು ಸೂಚನೆ

ಸದ್ಯ ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಕೆಲವು ಜಿಲ್ಲೆಗಳನ್ನು ತೀವ್ರವಾಗಿ ಬಾಧಿಸುತ್ತಿದೆ. ಪ್ರವಾಹ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ, ಎಲ್ಲಾ ಇಲಾಖೆಗಳ ಜೊತೆ ಸಮನ್ವಯ ಸಾಧಿಸಿ ಪರಿಹಾರ ಒದಗಿಸುವಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಬೆಳೆ ಹಾನಿ, ರಸ್ತೆ, ಮನೆಗಳ ಹಾನಿ ಬಗ್ಗೆ ಸೂಕ್ತವಾಗಿ ಸಮೀಕ್ಷೆ ನಡೆಸಬೇಕು ಎಂದು ತಿಳಿಸಿದ್ದಾರೆ.

ರಸ್ತೆ ಸಂಪರ್ಕ, ವಿದ್ಯುತ್ ಕಂಬಗಳು ಹಾಗೂ ಕುಡಿಯುವ ನೀರಿನ ಸರಬರಾಜಿಗೆ ತ್ವರಿತವಾಗಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ. ಭಾರೀ ಮಳೆ, ನೆರೆಯಿಂದಾಗಿ ಹಲವೆಡೆ ವಿದ್ಯುತ್ ಕಂಬಗಳು ಧರೆಗುರುಳಿದ್ದು ಹಲವು ಗ್ರಾಮಗಳು ವಿದ್ಯುತ್ ಸಂಪರ್ಕ ಕಡಿದುಕೊಂಡಿವೆ. ಈ ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕ ಪುನಸ್ಥಾಪಿಸಲು ಹೆಚ್ಚಿನ ಆದ್ಯತೆ ನೀಡಬೇಕು, ಕೂಡಲೇ ವಿದ್ಯುತ್ ಸಂಪರ್ಕ ಒದಗಿಸಲು ಹೆಸ್ಕಾಂ ಕಾರ್ಯನಿರತವಾಗುವಂತೆ ಸೂಚನೆ ನೀಡಿದ್ದಾರೆ.

 ನೆರೆ ಸಂತ್ರಸ್ತರ ಸಮಸ್ಯೆಗೆ ಸ್ಪಂದಿಸಲು ಸೂಚನೆ

ನೆರೆ ಸಂತ್ರಸ್ತರ ಸಮಸ್ಯೆಗೆ ಸ್ಪಂದಿಸಲು ಸೂಚನೆ

ರಾಜ್ಯದ ಜಿಲ್ಲೆಗಳಲ್ಲಿ ಮುಂದಿನ 5-6 ದಿನಗಳ ಮಳೆ ಹಾಗೂ ಮಳೆ ಮುನ್ಸೂಚನೆಯನ್ನು ಗಮನಿಸಬೇಕು. ಮುನ್ನೆಚ್ಚರಿಕಾ ಕ್ರಮಗಳ ಜೊತೆಗೆ ರಕ್ಷಣೆ ಮತ್ತು ಪರಿಹಾರ ಕಾರ್ಯಗಳಿಗೆ ಸನ್ನದ್ಧರಾಗಬೇಕು ಎಂದು ತಿಳಿಸಿದರು. ಪರಿಹಾರ ಕಾರ್ಯಗಳು ಪಾರದರ್ಶಕವಾಗಿರಬೇಕು ಮತ್ತು ತ್ವರಿತವಾಗಿ ಆಗಬೇಕು ಎಂದು ಹೇಳಿದರು.

ಭೂಕುಸಿತ ಸಂಭವಿಸುವ ಅಪಾಯವಿರುವ ಪ್ರದೇಶಗಳಲ್ಲಿ ರಸ್ತೆಗಳನ್ನು ತೆರವುಗೊಳಿಸುವುದು. ದುರ್ಬಲವಾದ ಪ್ರದೇಶಗಳ ಸಮೀಕ್ಷೆ ಕಾರ್ಯ ಕೈಗೊಳ್ಳಲು ತಂಡಗಳನ್ನು ನಿಯೋಜಿಸುವುದು ಮತ್ತು ಅಪಾಯದ ಪ್ರದೇಶದಲ್ಲಿ ವಾಸವಿರುವ ನಾಗರಿಕರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.

ಪರಿಹಾರ ಕಾರ್ಯಾಚರಣೆಗಾಗಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ರಚಿಸುವುದು. ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಎಲ್ಲಾ ನಿಯಂತ್ರಣಾ ಕೊಠಡಿಗಳು ಭಾರೀ ಮಳೆ ಹಾಗೂ ಪ್ರವಾಹ ಸ್ಥಿತಿಯ ಕುರಿತ ದೂರುಗಳಿಗೆ ತಕ್ಷಣವೇ ಸ್ಪಂದಿಸಬೇಕು ಎಂದು ಹೇಳಿದ್ದಾರೆ.

ಎನ್‌ಡಿಆರ್‌ಎಫ್‌ ಹಾಗೂ ಎಸ್‌ಡಿಆರ್‌ಎಫ್‌ ತಂಡಗಳಿಗೆ ಅಗತ್ಯವಿರುವ ಲಾಜಿಸ್ಟಿಕ್ಸ್ ನೆರವನ್ನು ಒದಗಿಸಿ ತೊಂದರೆಗೀಡಾದ ಪ್ರದೇಶಗಳಿಗೆ ತಕ್ಷಣವೇ ತಲುಪಲು ಜಿಲ್ಲಾಡಳಿತ ಕ್ರಮ ವಹಿಸಬೇಕು ಎಂದಿರುವ ಸಿಎಂ ಬೊಮ್ಮಾಯಿ ಜಿಲ್ಲಾಧಿಕಾರಿಗಳು ಖುದ್ದಾಗಿ ಇದರ ಮೇಲ್ವಿಚಾರಣೆ ನೋಡಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.

ಮಳೆ, ನೆರೆಯಿಂದ ಈಗ ಹಾನಿಯಾಗಿರುವ ರಸ್ತೆ, ಸೇತುವೆ, ಕಲ್ವರ್ಟ್ ಹಾಗೂ ಟ್ಯಾಂಕ್ ಬಂಡ್ ಗಳನ್ನು ತಾತ್ಕಾಲಿಕವಾಗಿ ತಕ್ಷಣವೇ ಸರಿಪಡಿಸಬೇಕು ಮತ್ತು ಶಾಶ್ವತ ಕಾಮಗಾರಿಗಳಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಕೇಳಿದ್ದಾರೆ.

ಬೆಳೆ ಹಾನಿ ಕುರಿತು ತನಿಖೆ ಕೈಗೊಂಡು ಒಂದು ತಿಂಗಳೊಳಗೆ ಇನ್ ಪುಟ್ ಸಬ್ಸಿಡಿ ವಿತರಿಸಬೇಕು ಎಂದು ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕಾಳಜಿ ಕೇಂದ್ರಗಳಲ್ಲಿರುವ ಸಂತ್ರಸ್ತರಿಗೆ ಸರ್ಕಾರಿ ಆದೇಶದಲ್ಲಿ ನೀಡಿರುವ ಆಹಾರ ಪಟ್ಟಿಯಂತೆ ಊಟ ನೀಡಬೇಕು ಎಂದು ಹೇಳಿದ್ದಾರೆ.

English summary
CM Basavaraj Bommai held a video confercne with the district collectors in Devanahalli regarding the situation and relief operations in the rain-affected districts. heavy rain creates flood situation in many districts of the state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X