ಅತಿವೃಷ್ಟಿ ಸಂತ್ರಸ್ತರಲ್ಲಿ ನಿರಾಸೆ ಮೂಡಿಸಿದ ಸಿಎಂ ಬಸವರಾಜ ಬೊಮ್ಮಾಯಿ!
ಬೆಂಗಳೂರು, ಆ. 21: ನೆರೆಹಾನಿ ಸಂದರ್ಭದಲ್ಲಿ ಉಂಟಾಗಿರುವ ಮನೆ ಹಾಗೂ ಬೆಳೆಹಾನಿಗೆ ಸಂಬಂಧಿಸಿದಂತೆ ಆದಷ್ಟು ಶೀಘ್ರವಾಗಿ ಸಮೀಕ್ಷೆ ಪೂರ್ಣಗೊಳಿಸಬೇಕು. ಸಮೀಕ್ಷೆ ಪೂರ್ಣಗೊಂಡರೆ ನಿಖರ ಅಂಕಿ-ಅಂಶಗಳ ಸಮೇತ ಕೇಂದ್ರ ಸರಕಾರಕ್ಕೆ ವರದಿ ಸಲ್ಲಿಸಲು ಅನುಕೂಲವಾಗುತ್ತದೆ.
ಆದ್ದರಿಂದ ಆದಷ್ಟು ಬೇಗನೆ ಸಮೀಕ್ಷೆ ಪೂರ್ಣಗೊಳಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಆಲ್ಮಟ್ಟಿ ಜಲಾಶಯಕ್ಕೆ ಬಾಗೀನ ಅರ್ಪಿಸಿದ ಬಳಿಕ ಸಿಎಂ ಬೊಮ್ಮಾಯಿ ಬೆಳಗಾವಿಗೆ ತೆರಳಿದರು. ನೆರೆಹಾನಿಗೆ ಸಂಬಂಧಿಸಿದಂತೆ ಬೆಳಗಾವಿ ಸುವರ್ಣಸೌಧದಲ್ಲಿ ಶನಿವಾರ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳ ಸಭೆ ಸಭೆ ನಡೆಸಿ ಸೂಚನೆ ನೀಡಿದ್ದಾರೆ. "ಸಮೀಕ್ಷೆ ವಿಳಂಬಗೊಂಡಷ್ಟು ಸಮಸ್ಯೆ ಜಟಿಲಗೊಳ್ಳುತ್ತದೆ. ಆದ್ದರಿಂದ ಸಮೀಕ್ಷೆ ತ್ವರಿತವಾಗಿ ಪೂರ್ಣಗೊಳಿಸಿ ಸಂತ್ರಸ್ತರ ಖಾತೆಗೆ ಪರಿಹಾರ ಜಮೆ ಮಾಡಲು ಕ್ರಮಕೈಗೊಳ್ಳಬೇಕು" ಎಂದು ಕಟ್ಟಿನಿಟ್ಟಿನ ಸೂಚನೆ ನೀಡಿದ್ದಾರೆ.
ಕಳೆದ ಬಾರಿ ಹಾನಿಗೊಳಗಾದ ಮನೆಗಳಿಗೆ ಸರ್ಕಾರ ಪರಿಹಾರ ಕೊಟ್ಟಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದರು. ಆದರೆ ಈ ಬಗ್ಗೆ ಮಾತನಾಡಿರುವ ಸಿಎಂ ಬೊಮ್ಮಾಯಿ, ಮತ್ತೆ ಸಂತ್ರಸ್ತರಲ್ಲಿ ನಿರಾಸೆ ಮೂಡಿಸಿದ್ದಾರೆ!

ಕಳೆದ ಬಾರಿ ಮನೆ ಹಾನಿ ಪರಿಹಾರವಿಲ್ಲ?
"ಕಳೆದ ಬಾರಿ ಪ್ರವಾಹ ಸಂದರ್ಭದಲ್ಲಿ ಮನೆಗಳನ್ನು ಕಳೆದುಕೊಂಡ ಕುಟುಂಬಗಳಿಗೆ ಪ್ರಸಕ್ತ ಸಾಲಿನ ಪ್ರವಾಹ ಹಾನಿ ಸಮೀಕ್ಷೆ ಮಾಡುವಾಗ ಅವಕಾಶ ಕಲ್ಪಿಸುವ ಬಗ್ಗೆ ಪರಿಶೀಲಿಸಲಾಗುವುದು" ಎನ್ನುವ ಮೂಲಕ ಮಳೆಹಾನಿಯಿಂದ ಕಳೆದ ವರ್ಷ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಸಿಎಂ ಬೊಮ್ಮಾಯಿ ನಿರಾಸೆ ಮೂಡಿಸಿದ್ದಾರೆ.
"ಕಳೆದ ಬಾರಿ ಪ್ರವಾಹದಲ್ಲಿ ಮನೆ ಕಳೆದುಕೊಂಡ ಕುಟುಂಬಗಳಿಗೆ ಬಾಕಿ ಉಳಿದಿರುವ ಪರಿಹಾರ ಕಂತುಗಳನ್ನು ಬಿಡುಗಡೆ ಮಾಡಲು ಸರಕಾರ ಕೂಡಲೇ ಕ್ರಮ ತೆಗೆದುಕೊಳ್ಳಲಿದೆ. ಮನೆಹಾನಿ ಲಾಗಿನ್ ಅವಧಿ ವಿಸ್ತರಣೆ, ಮನೆಗಳ ಸೂಕ್ತ ದಾಖಲಾತಿ ಇಲ್ಲದ ಕುಟುಂಬಗಳಿಗೆ ಪರಿಹಾರ ಒದಗಿಸಲು ಇರುವ ಪರ್ಯಾಯ ಮಾರ್ಗಗಳ ಕುರಿತು ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲಾಗುವುದು. ಗ್ರಾಮಸ್ಥರು ಶಾಶ್ವತ ಸ್ಥಳಾಂತರ ಬಯಸಿದ ಸಂದರ್ಭದಲ್ಲಿ ಸರಕಾರಿ ಜಮೀನು ಲಭ್ಯವಿದ್ದರೆ ಸ್ಥಳಾಂತರಕ್ಕೆ ಅವಕಾಶ ಕಲ್ಪಿಸಲಾಗುವುದು. ಇದಲ್ಲದೇ ನವಗ್ರಾಮ ಸೇರಿದಂತೆ ವಿವಿಧ ವಸತಿ ಯೋಜನೆಗಳಡಿ ಕೂಡ ಮನೆಗಳನ್ನು ಒದಗಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಭರವಸೆ ನೀಡಿದ್ದಾರೆ.

ಆಸ್ಪತ್ರೆಯಿಂದ ಬಿಡುಗಡೆ ಬಳಿಕವೂ ಅಗತ್ಯ ಔಷಧಿ
ಕೊರೊನಾ ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಗೊಂಡ ಬಳಿಕವೂ ಸಂಪೂರ್ಣ ಗುಣಮುಖರಾಗುವವರೆಗೆ ಅವರ ಮನೆಗಳಿಗೆ ಕೂಡ ಅಗತ್ಯ ಔಷಧಿ ಪೂರೈಕೆ ಮಾಡಲು ತೀರ್ಮಾನಿಸಲಾಗಿದೆ. ಬೆಳಗಾವಿ ಜಿಲ್ಲೆಗೆ ಪ್ರತಿದಿನ 40 ಸಾವಿರ ಲಸಿಕೆ ನೀಡುವ ಸಾಮರ್ಥ್ಯಕ್ಕೆ ತಕ್ಕಂತೆ ಪ್ರತಿದಿನ ನೀಡಲಾಗುತ್ತಿರುವ 25 ಸಾವಿರ ಲಸಿಕೆಗಳ ಜತೆಗೆ ಹೆಚ್ಚುವರಿಯಾಗಿ ಪ್ರತಿದಿನ 25 ಸಾವಿರ ಲಸಿಕೆಗಳನ್ನು ಪೂರೈಕೆ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಹೆಚ್ಚುವರಿ ಅಗತ್ಯವಿರುವ ಲಸಿಕೆಗಳ ಪ್ರಮಾಣದ ಬಗ್ಗೆ ಕೂಡಲೇ ಪ್ರಸ್ತಾಪವನ್ನು ಸಲ್ಲಿಸುವಂತೆ ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕರ್ತವ್ಯಕ್ಕೆ ಹಾಜರಾಗದವರ ನೇಮಕಾತಿ ರದ್ದು
ಹೊಸದಾಗಿ ನೇಮಕಗೊಂಡು ಇದುವರೆಗೆ ಕರ್ತವ್ಯಕ್ಕೆ ಹಾಜರಾಗದ ವೈದ್ಯರಿಗೆ ಕೂಡಲೇ ನೋಟಿಸ್ ನೀಡಬೇಕು. ಆದಾಗ್ಯೂ ಹಾಜರಾಗದಿದ್ದರೆ ಅವರ ನೇಮಕಾತಿಯನ್ನು ರದ್ದುಪಡಿಸಿ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ವೈದ್ಯರು ಹಾಗೂ ಸಿಬ್ಬಂದಿ ಕೊರತೆ ಇರುವ ಕಡೆಯ ಸಿಬ್ಬಂದಿ ಹಾಗೂ ವೈದ್ಯರ ನಿಯೋಜನೆಯನ್ನು ರದ್ದುಗೊಳಿಸಬೇಕು. ಕೆಲಸದ ಒತ್ತಡ ಆಧರಿಸಿ ತಾತ್ಕಾಲಿಕವಾಗಿ ಅಗತ್ಯವಿರುವ ಕಡೆಗಳಲ್ಲಿ ಮಾತ್ರ ನಿಯೋಜಿಸಬೇಕು. ಡಯಾಲಿಸಿಸ್ ಚಿಕಿತ್ಸೆಗೆ ದೊರಕದಿರುವ ಬಗ್ಗೆ ತಮ್ಮ ಗಮನಕ್ಕೆ ಬಂದಿದೆ. ಇದಕ್ಕೆ ಸಂಬಂಧಿಸಿದಂತೆ ರಾಜ್ಯಮಟ್ಟದಲ್ಲಿ ಒಂದೆರಡು ದಿನಗಳಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ರೈಲು ನಿಲ್ದಾಣಗಳಲ್ಲಿ ಕೋವಿಡ್ ಪರೀಕ್ಷಾ ಕೇಂದ್ರ
ಗಡಿ ಜಿಲ್ಲೆಯಾಗಿರುವುದರಿಂದ ತೀವ್ರ ನಿಗಾ ವಹಿಸಬೇಕು ಎಲ್ಲಿ ಸೋಂಕು ಕಂಡುಬರುತ್ತದೆಯೋ ಅಂತಹ ಪ್ರದೇಶಗಳಲ್ಲಿ ಪರೀಕ್ಷೆಯ ಪ್ರಮಾಣವನ್ನು ಹೆಚ್ಚಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ದೇಶನ ನೀಡಿದರು. ಗಡಿಭಾಗದ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಎಲ್ಲ ಹಿರಿಯ ಅಧಿಕಾರಿಗಳು ನಿಯಮಿತವಾಗಿ ಭೇಟಿ ನೀಡಬೇಕು.
ರೈಲು ನಿಲ್ದಾಣಗಳಲ್ಲಿ ಕೋವಿಡ್ ಪರೀಕ್ಷಾ ಕೇಂದ್ರ ಆರಂಭಿಸಬೇಕು. ಮುಂದಿನ ಹತ್ತರಿಂದ ಹದಿನೈದು ದಿನಗಳಲ್ಲಿ ಆಕ್ಸಿಜನ್ ಘಟಕಗಳು ಕಾರ್ಯಾರಂಭಿಸಬೇಕು. ಪ್ರತಿದಿನ ಐದು ಲಕ್ಷ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಒಂದು ಕೋಟಿ ಲಸಿಕೆಗಳನ್ನು ಪೂರೈಸಲು ಕೇಂದ್ರ ಸರಕಾರಕ್ಕೆ ಮನವಿ ಮಾಡಿಕೊಳ್ಳಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications